![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 28, 2020, 2:00 PM IST
ಬೆಂಗಳೂರು: ಕಳೆದ ಕೆಲವು ದಿನಗಳಿಂದ ದಿಲ್ಲಿಯಲ್ಲಿ ನಡೆಯುತ್ತಿರುವ ಕೋಮು ಘರ್ಷಣೆಗೆ ಬಿಜೆಪಿಯವರ ಪ್ರಚೋದನೆಯೇ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಐದು ದಿನಗಳಿಂದ ಕೋಮುಘರ್ಷಣೆ ನಡೆಯುತ್ತಿದೆ. 33 ಜನ ಇಲ್ಲಿಯವರೆಗೆ ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿರಾರು ಜನ ಮನೆಮಠ ಕಳೆದು ಕೊಂಡಿದ್ದಾರೆ. ಮತಗಳ ಧೃವೀಕರಣಕ್ಕಾಗಿ ಬಿಜೆಪಿ ಈ ಕೆಲಸ ಮಾಡುತ್ತಿದೆ. ದಿಲ್ಲಿಯ ಸಾವುನೋವುಗಳಿಗೆ ಬಿಜೆಪಿಯೇ ಕಾರಣ ಎಂದು ಈಶ್ವರ್ ಖಂಡ್ರೆ ನೇರ ಆರೋಪ ಮಾಡಿದರು.
ಪ್ರಚೋದನಾಕಾರಿ ಹೇಳಿಕೆ ಕೊಟ್ಟವರ ಮೇಲೆ ಕ್ರಮ ಜರುಗಿಸಬೇಕು ಎಂದು ನ್ಯಾ.ಮುರುಳೀಧರ್ ರಾವ್ ಈ ಸೂಚನೆ ನೀಡಿದ್ದರು. ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದ್ದಾರೆ ಎಂದ ಅವರು, ಕೇಂದ್ರ ಗೃಹ ಸಚಿವರು ರಾಜೀನಾಮೆ ಕೊಡಬೇಕು ಇಲ್ಲವೇ ರಾಷ್ಟ್ರಪತಿಗಳು ಅವರನ್ನ ವಜಾಗೊಳಿಸಬೇಕು. ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಯತ್ನಾಳ್ ಕೂಡ ಪ್ರಚೋದನಕಾರಿ ಹೇಳಿಕೆ ನೀಡುತ್ತಾರೆ. ದೊರೆಸ್ವಾಮಿ ವಿರುದ್ಧ ಮಾತನಾಡಿದ್ದಾರೆ. ಇದು ಆಘಾತಕಾರಿಯಾದಂತಹ ವಿಚಾರ ಈ ಬಗ್ಗೆಯೂ ಯತ್ನಾಳರ ವಿರುದ್ಧ ಕ್ರಮ ಜರುಗಿಸಬೇಕು ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.