BJP-JDS Convention: ಸಿಎಂ ಸಿದ್ದರಾಮಯ್ಯರನ್ನು ಮನೆಗೆ ಕಳಿಸೊವರೆಗೂ ಹೋರಾಟ : ಬಿಎಸ್‌ವೈ
ಕಾಂಗ್ರೆಸ್ ನಾಯಕರೇ ನಿಮಗೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ: ಮಾಜಿ ಸಿಎಂ ಯಡಿಯೂರಪ್ಪ
Team Udayavani, Aug 10, 2024, 7:29 PM IST
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದು, ಸಿಎಂ ಸಿದ್ದರಾಮಯ್ಯನವರೇ ವಿಧಾನಸಭೆ ವಿಸರ್ಜಿಸಿ, ಹೊಸ ಚುನಾವಣೆ ಎದುರಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಮೈತ್ರಿ ಹಮ್ಮಿಕೊಂಡಿದ್ದ “ಮೈಸೂರು ಚಲೋ ಯಾತ್ರೆ” ಸಮಾರೋಪದಲ್ಲಿ ಕಾಂಗ್ರೆಸ್‌ನ ಹಗರಣಗಳ ಕುರಿತು ಆರೋಪಿಸಿರುವ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ಸ್ಪಷ್ಟ ಬಹುಮತ ಕೊಟ್ಟರೂ ಸಿಎಂ, ಡಿಸಿಎಂ ಆಡಳಿತದಿಂದ ರಾಜ್ಯದ ಜನರು ನಿರಾಶೆ ಹೊಂದಿದ್ದಾರೆ. ಕಳೆದ 14 ತಿಂಗಳುಗಳಿಂದ ರಾಜ್ಯ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ರಾಜ್ಯದ ಖಜಾನೆಯ ಲೂಟಿ ಹೊಡೆಯುತ್ತಿದ್ದಾರೆ. ಭ್ರಷ್ಟ ಸಿಎಂ, ಡಿಸಿಎಂ ಇರುವವರೆಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ. ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಗೆಲುವು ಸಾಧಿಸಲಿದೆ, ಕನ್ನಡಿಗರು ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಿದ್ದರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಭ್ರಷ್ಟ ಸಿಎಂ, ಡಿಸಿಎಂ ಇರುವವರೆಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ. ಕನ್ನಡಿಗರು ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್ ನಾಯಕರೇ ನಿಮಗೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ.
– ಶ್ರೀ @BSYBJP , ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ… pic.twitter.com/KdmvMhZKXN
— BJP Karnataka (@BJP4Karnataka) August 10, 2024
ರಾಜಕೀಯದಿಂದ ನಿವೃತ್ತಿ ಇಲ್ಲ:
ಶುಕ್ರವಾರ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತ, 82 ವರ್ಷದ ಯಡಿಯೂರಪ್ಪ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗಬೇಕೆಂದು ಆಗ್ರಹಿಸಿದ್ದರು. ಇದಕ್ಕೆ ಸಮಾವೇಶದಲ್ಲಿ ಪ್ರತ್ಯುತ್ತರ ನೀಡಿದ ಬಿಎಸ್‌ವೈ, ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುವವರೆಗೂ ನಾನು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವ ಮಾತಿರಲಿ, ಕೊನೆ ಉಸಿರು ಇರುವವರೆಗೂ ರಾಜಕಾರಣದಲ್ಲಿ ಇದ್ದು ನಿಮ್ಮನ್ನು ಮನೆಗೆ ಕಳಿಸುವ ಕೆಲಸ ಮಾಡುತ್ತೇನೆ ಎಂದರು. ತಾಕತ್ತಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ. ಈಗಲೂ ಚುನಾವಣೆ ನಡೆದರೆ ಬಿಜೆಪಿ 130- 140 ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
ಸಿಎಂ ಸಿದ್ದರಾಮಯ್ಯ ಮುಡಾದಿಂದ 14 ನಿವೇಶನ ತನ್ನದೇ ಕುಟುಂಬಕ್ಕೆ ಹೇಗೆ ತೆಗೆದುಕೊಂಡಿದ್ದೀರಿ? ಪರಿಹಾರ ಕೊಟ್ಟರೆ ವಾಪಸ್ ಕೊಡುತ್ತೀನಿ ಎಂದು ಹೇಳುತ್ತಾರೆ. ಅದು ಹೇಗೆ ತಗೊಂಡಿದ್ದಿರಿ, ಯಾರಪ್ಪನ ದುಡ್ಡು ಪರಿಹಾರ ಕೊಡಕ್ಕೆ. ನಿಮ್ಮ ಮೈಯೆಲ್ಲಾ ಕಪ್ಪು ಚುಕ್ಕೆ ಇವೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಾನು ಕಲ್ಲುಬಂಡೆ ಎಂದು ತಮ್ಮನ್ನೇ ತಾವೇ ಕರೆದುಕೊಳ್ಳುತ್ತಾರೆ. ವಿರೋಧ ಪಕ್ಷದವರನ್ನು ಹೇಯ್ ವಿಜಯೇಂದ್ರ, ಹೇಯ್ ಅಶೋಕ್ ಎಂದು ಏಕವಚನದಲ್ಲಿ ಲಘುವಾಗಿ ಮಾತನಾಡುತ್ತಾರೆ. ಇನ್ನೊಬ್ಬರ ಕುರಿತು ಹಗುರವಾಗಿ ಮಾತನಾಡುವುದು ಬಿಟ್ಟು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.