BJP-JDS Meet: ಸುದ್ದಿಗೋಷ್ಠಿ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ !
ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು
Team Udayavani, Jul 28, 2024, 7:34 PM IST
ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕೆಂದು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಯೋಜನೆ ರೂಪಿಸಲು ಆಯೋಜಿಸಿದ್ದ ಸಭೆ ಬಳಿಕ ನಡೆದ ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೂಗಿನಲ್ಲಿ ರಕ್ತ ಸೋರಿರುವ ಘಟನೆ ನಡೆದಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ರವಿವಾರ (ಜು 28) ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಈ ವೇಳೆ ಸುದ್ದಿಗೋಷ್ಠಿ ವೇಳೆಯಲ್ಲೇ ದಿಢೀರ್ ಮೂಗಿನಲ್ಲಿ ರಕ್ತಸ್ರಾವವಾಗಿದೆ.
#WATCH | Karnataka: Union Minister HD Kumaraswamy was taken to hospital after his nose started bleeding while he was attending a press conference in Bengaluru. pic.twitter.com/yGX1pOwGVZ
— ANI (@ANI) July 28, 2024
ರಕ್ತ ಸ್ರಾವ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಪದೇ ಪದೇ ಒರೆಸಿಕೊಂಡರೂ ರಕ್ತ ಸೋರುವಿಕೆ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾಗಿದ್ದು, ಬಿಳಿ ಶರ್ಟ್ ರಕ್ತಮಯವಾಗಿದೆ.ಇದರಿಂದ ಕೆಲ ಕಾಲ ಆತಂಕ ಸೃಷ್ಟಿಸಿದ್ದು, ಕೂಡಲೇ ಕುಮಾರಸ್ವಾಮಿ ಅವರನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ಜಯನಗರದ ಅಪೋಲೋ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಜಯನಗರ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿ ” ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಸ್ಟ್ರೋಕ್, ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿರುವ ಹಿನ್ನೆಲೆ ರಕ್ತ ಹೆಪ್ಪುಗಟ್ಟದಂತೆ ಮಾಡುವ ಚಿಕಿತ್ಸೆ ಪಡೆದಿರಬಹುದು. ಈ ಬಗ್ಗೆ ಸಂಪೂರ್ಣ ಪರೀಕ್ಷೆಗೊಳಪಡಿಸಿದ ನಂತರ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.