BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್.ಯಡಿಯೂರಪ್ಪ
ಅಧಿಕಾರದಲ್ಲಿ ಮುಂದುವರಿಯಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ
Team Udayavani, Jul 5, 2024, 12:53 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಾಕತ್ತಿದ್ದರೆ ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ, ಬಿಜೆಪಿ 140ರಿಂದ 150 ಸ್ಥಾನ ಗೆಲ್ಲುವುದು ಶತಃಸಿದ್ಧ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾ
ಗಿದ್ದಾರೆ. ರಾಜ್ಯದ 19 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಗೆದ್ದಿದೆ. ಸರಾಸರಿ 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದೆ. ಈಗ ಚುನಾವಣೆ ನಡೆದರೂ ಬಿಜೆಪಿ 135-140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ, ಡಿಸಿಎಂ, ಹಾಗೂ 17 ಸಚಿವರ ಸ್ವಕ್ಷೇತ್ರಗಳಲ್ಲೇ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿ, ಜನವಿರೋಧಿಯಾಗಿ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಹಣಬಲ, ತೋಳ್ಬಲ ಹತ್ತು ಆಮಿಷಗಳ ವಿರುದ್ಧ ರಾಜ್ಯದ ಜನರು ಮೋದಿಗೆ ಜನಮತ ನೀಡಿ¨ªಾರೆ. ಕೆಲವು ಕ್ಷೇತ್ರಗಳಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಿದೆ. ಆದರೆ ಕಾಂಗ್ರೆಸ್‌ನ ದುರಾಡಳಿತ ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ಧ ಜನರು ಮತ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ರಾಜ್ಯ ಸರಕಾರದ ತಪ್ಪು ನಿರ್ಧಾರ
ಗಳಿಂದ ದಿವಾಳಿಯಾಗಿದೆ. ಶಾಸಕರ ಅನುದಾನಕ್ಕೂ ಕತ್ತರಿ ಹಾಕಿದೆ. ಗ್ಯಾರಂಟಿಗಳ ಮೂಲಕ ಎಲ್ಲದಕ್ಕೂ ದರ ಹೆಚ್ಚಳ ಮಾಡಿದ್ದಾರೆ ಎಂದು ಟೀಕಿಸಿದರು.
ಸಿಎಂ ಕುಟುಂಬ ಭಾಗಿ
ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ಶಾಮೀಲಾಗಿದೆ. ಇದರ ಬಗ್ಗೆ ನಾವು ನೀವು ಜನರಿಗೆ ಮನದಟ್ಟು ಮಾಡಬೇಕಿದೆ. ವಿಧಾನಸಭೆ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾವಿಸಿ ಎಂದು ಕರೆ ನೀಡಿದರು.
ರೇಣುಕಾಸ್ವಾಮಿ ಸೇರಿ ಹಲವರಿಗೆ ಸಂತಾಪ
ದರ್ಶನ್ ಗ್ಯಾಂಗ್‌ನಿಂದ ಹತ್ಯೆಗೊಳಗಾದ ರೇಣುಕಸ್ವಾಮಿ ಸೇರಿ ಹಲವರಿಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಂತಾಪ ಸೂಚಿಸಲಾಯಿತು.ಮಾಜಿ ಶಾಸಕ ವಸಂತ ಬಂಗೇರ, ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್, ಫಯಾಜ್‌ನಿಂದ ಹತ್ಯೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ, ಸಾಹಿತಿ ಕಮಲಾ ಹಂಪನಾ, ಸಾಹಿತಿ ಕೆ.ಟಿ. ಗಟ್ಟಿ ಮೊದಲಾದವರಿಗೆ ಸಂತಾಪ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.