ಕಳಸಾ-ಬಂಡೂರಿ ವಿಚಾರದಲ್ಲಿ ಬಿಜೆಪಿ ರಾಜಕಾರಣ: ಎಚ್‌ಡಿಕೆ
Team Udayavani, Feb 10, 2023, 10:22 PM IST
ಬೆಳಗಾವಿ: ಕೇಂದ್ರ, ಕರ್ನಾಟಕ ಮತ್ತು ಗೋವಾದಲ್ಲಿ ಡಬಲ್ ಅಲ್ಲ ಟ್ರಿಪಲ್ ಎಂಜಿನ್ ಸರ್ಕಾರ ಇದ್ದರೂ ಉತ್ತರ ಕರ್ನಾಟಕದ ಮಹತ್ವದ ಕಳಸಾ ಮತ್ತು ಬಂಡೂರಿ ವಿಚಾರದಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಇದೇ ವಿಷಯ ಇಟ್ಟುಕೊಂಡು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ.
ನ್ಯಾಯಾಧಿಕರಣದ ಆದೇಶ ಅನುಷ್ಠಾನಕ್ಕೆ ಇಷ್ಟು ಸಮಯ ಏಕೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಖಾನಾಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಕಳಸಾ ಬಂಡೂರಿ ಯೋಜನೆಗೆ 100 ಕೋಟಿ ಹಣ ಕೊಟ್ಟು ಕೆಲಸ ಆರಂಭ ಮಾಡಿದೆ. ಆಗ ಯೋಜನೆ ಜಾರಿಗೆ ಕಾನೂನು ಸಮಸ್ಯೆ ಇತ್ಯರ್ಥ ಮಾಡಬೇಕು ಎಂದಾಗ ಅನೇಕರು ವಿರೋಧ ಮಾಡಿದರು. ಅವರಿಗೆ ಕೆಲಸ ಆಗುವುದು ಬೇಕಿರಲಿಲ್ಲ. ಪ್ರಚಾರ ಬೇಕಿತ್ತು ಎಂದರು.
ಮಹದಾಯಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಈ ನೀರು ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗಿದೆ. ಕಳೆದ ಮೂರ್‍ನಾಲ್ಕು ವರ್ಷಗಳಿಂದ ಯಾವುದೇ ಪ್ರಗತಿಯಾಗಿಲ್ಲ. ಗೋವಾ ಆಕ್ಷೇಪದ ಮೇಲೆ ಆಕ್ಷೇಪ ಮಾಡುತ್ತಿದೆ. ಹಾಗಾದರೆ ಇದಕ್ಕೆ ಯಾರು ಹೊಣೆ, ಕೇಂದ್ರ ಸರ್ಕಾರಕ್ಕೆ ರಾಜ್ಯದ ಬಗ್ಗೆ ಅದರಲ್ಲೂ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಕರ್ನಾಟಕ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕಿತ್ತು ಎಂದರು.
ರಮೇಶ ಜಾರಕಿಹೊಳಿ ಸಿಡಿ ತಯಾರಿಕೆ, ಅದರ ಕಾರ್ಖಾನೆ ಬಗ್ಗೆ ಯೋಚನೆ ಮಾಡುವ ಹಾಗೂ ಮಾತನಾಡುವಷ್ಟು ಸಮಯ ನನಗೆ ಇಲ್ಲ. ಮೇಲಾಗಿ ಸಿಡಿಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಇದನ್ನು ಇಟ್ಟುಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ. ಜನರ ಮುಂದೆ ಇದನ್ನು ಪ್ರಸ್ತಾಪ ಮಾಡಿ ಮತ ಗಳಿಸಲು ಆಗಲ್ಲ. ಹೀಗಿರುವಾಗ ಅದನ್ನು ಬಿಟ್ಟು ಜನರ ಸಮಸ್ಯೆಗಳ ಕಡೆ ಗಮನಹರಿಸಿದರೆ ಒಳ್ಳೆಯದು. ಕಲಬುರಗಿ ಬಗ್ಗೆ ಪ್ರಧಾನಿ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಕಲಬುರಗಿಗೆ ನಿಮ್ಮ ಕೊಡುಗೆ ಏನು ಎಂದು ಅದೇ ಪ್ರಶ್ನೆಯನ್ನು ನಾವು ಬಿಜೆಪಿಗೆ ಕೇಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.