BJP Protest: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಪೋಸ್ಟರ್ ಆಂದೋಲನ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ವಿರುದ್ಧ ಪ್ರತಿಭಟನೆ, ಸಿ.ಟಿ. ರವಿ ಇತರರು ಪೊಲೀಸ್ ವಶಕ್ಕೆ
Team Udayavani, Jan 1, 2025, 1:07 AM IST
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು.
ಬೆಂಗಳೂರಿನ ಪ್ರಿಯಾಂಕ್ ಖರ್ಗೆ ನಿವಾಸದ ಬಳಿ ಪೋಸ್ಟರ್ ಅಂಟಿಸುತ್ತಿದ್ದ ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಎನ್. ರವಿಕುಮಾರ್ ನೇತೃತ್ವದ ತಂಡವನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗವೂ ನಡೆಯಿತು.
ಪ್ರಿಯಾಂಕ್ ಮನೆ ಮುಂದೆ ಸೇರಿದ್ದ ಹತ್ತಾರು ಬಿಜೆಪಿ ಮುಖಂಡರು, ಕೊಲೆಗಡುಕ ಸರ್ಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿದರು. ಬಳಿಕ ಬಳಿಕ ಪ್ರಿಯಾಂಕ್ ಖರ್ಗೆ ವಿರುದ್ಧದ ಭಿತ್ತಿಪತ್ರವನ್ನು ಅವರ ಮನೆ ಮುಂದೆ ಅಂಟಿಸಿ ಆಕ್ರೋಶ ಹೊರಹಾಕಿದರು.
ಎಕ್ಸ್ನಲ್ಲಿ ಅಭಿಪ್ರಾಯ ಹಂಚಿಕೊಂಡ ರವಿ
ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಹಾಗೂ ರಾಜಕೀಯ ಎದುರಾಳಿಗಳಿಗೆ ಸುಪಾರಿ ಭಾಗ್ಯದ ಗ್ಯಾರಂಟಿ ನೀಡಿದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರನ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಿ.ಟಿ. ರವಿ ಉಲ್ಲೇಖೀಸಿದ್ದಾರೆ.
ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗು ಗುತ್ತಿಗೆದಾರರಿಗೆ “ಸೂಸೈಡ್ ಭಾಗ್ಯ” ಹಾಗೂ ರಾಜಕೀಯ ಎದುರಾಳಿಗಳಿಗೆ “ಸುಪಾರಿ ಭಾಗ್ಯದ” “ಗ್ಯಾರೆಂಟಿ” ನೀಡಿದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ತಿನ ವಿರೋಧ… pic.twitter.com/PWnrNa7mFM
— C T Ravi 🇮🇳 ಸಿ ಟಿ ರವಿ (@CTRavi_BJP) December 31, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.