ಉಪ ಸಮರಕ್ಕೆ ಕಮಲ ಸಿದ್ಧತೆ
ಬಿಜೆಪಿ ಕೋರ್ ಕಮಿಟಿ ಚರ್ಚೆ
Team Udayavani, Sep 7, 2019, 6:00 AM IST
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್‌ನ 17 ಶಾಸಕರು ಅನರ್ಹತೆಗೊಂಡಿರುವ ಹಿನ್ನೆಲೆಯಲ್ಲಿ ಎದುರಾಗಲಿರುವ ಉಪಚುನಾವಣೆಗೆ ಸಜ್ಜಾಗಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ.
ಅನರ್ಹರ ಪೈಕಿ ಯಾರು ಪಕ್ಷ ಸೇರುತ್ತಾರೆ ಎಂಬುದಕ್ಕಿಂತ ಗೆಲುವು ಸಾಧಿಸುವ ಗುರಿಯೊಂದಿಗೆ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಶುಕ್ರವಾರ ನಡೆದ ಮೊದಲ ಕೋರ್ ಕಮಿಟಿ ಸಭೆಯಲ್ಲಿ 17 ಕ್ಷೇತ್ರಗಳ ಉಪಚುನಾವಣೆ, ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆ ತಯಾರಿ, ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಬಗ್ಗೆ ಸಭೆಯಲ್ಲಿ
ಸುದೀರ್ಘ ಚರ್ಚೆ ನಡೆಯಿತು.
ಸಭೆ ಬಳಿಕ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರ ವಿಂದ ಲಿಂಬಾವಳಿ, ಕಾಂಗ್ರೆಸ್, ಜೆಡಿಎಸ್‌ನ ಒಟ್ಟು 17 ಶಾಸಕರು ರಾಜೀನಾಮೆ ನೀಡಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ತಯಾರಿ ನಡೆಸಲುಸ ಭೆಯಲ್ಲಿತೀರ್ಮಾ ನಿಸಲಾಯಿತು.
ಹಿಂದಿನ ವಿಧಾನಸಭಾಧ್ಯಕ್ಷರು ಅನರ್ಹತೆಗೊಳಿಸಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಅನರ್ಹತೆಗೊಂಡಿರುವ ಶಾಸಕರು ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ. ಈ ಕ್ಷೇತ್ರಗಳಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಉಪಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸಬೇಕು. ಪಕ್ಷದ ಸದಸ್ಯರು, ಕಾರ್ಯ ಕರ್ತರು ಚುನಾವಣೆ ತಯಾರಿಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಅನರ್ಹತೆಗೊಂಡಿರುವ ಶಾಸಕರ ಪೈಕಿ ಯಾರು ಬಿಜೆಪಿ ಸೇರುತ್ತಾರೆ ಎಂಬುದಕ್ಕಿಂತ ಎಲ್ಲ 17 ಕ್ಷೇತ್ರಗಳಲ್ಲಿ ಗೆಲ್ಲುವುದು ಬಿಜೆಪಿ ಗುರಿ ಎಂದು ತಿಳಿಸಿದರು. ಜತೆಗೆ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ 2020ರ ಜೂನ್‌ನಲ್ಲಿ ಚುನಾವಣೆ ನಡೆಯಲಿದ್ದು, ಅದಕ್ಕೂ ತಯಾರಿ ನಡೆಸಬೇಕು.
ಈ ಚುನಾವಣೆಗೆ ಮತದಾರರ ನೋಂದಣಿ ಪ್ರಕ್ರಿಯೆ ಅಕ್ಟೋಬರ್ 1ರಿಂದ ಶುರುವಾಗಲಿದ್ದು, ಈ ಬಗ್ಗೆಯೂ ಚರ್ಚೆಯಾಯಿತು ಎಂದು ಹೇಳಿದರು.
ಸಮನ್ವಯ: ಸರ್ಕಾರ ಮತ್ತು ಪಕ್ಷ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಜನೋಪಯೋಗಿ, ಜನಪರ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಸ್ಪಂದಿಸುವ ಕಾರ್ಯದಲ್ಲಿ ಸರ್ಕಾರ ಹಾಗೂ ಪಕ್ಷ ತೊಡಗಿಸಿಕೊಂಡಿದೆ. ನೆರೆಪೀಡಿತ ಪ್ರದೇಶದ ಜನರ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರಕ್ಕೆ ಪಕ್ಷದಿಂದಲೂ ಪೂರ್ಣ ಸಹಕಾರ ನೀಡಬೇಕು. ರಾಜ್ಯದ ಅಭಿವೃದಿಟಛಿ ದೃಷ್ಟಿಯಿಂದ ಸರ್ಕಾರ ಹಾಗೂ ಪಕ್ಷ ಒಟ್ಟಿಗೆ ಸಮನ್ವಯದಿಂದ ಮುಂದುವರಿಯಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿಸಿದರು.
ರಾಜ್ಯದಲ್ಲಿ ಪಕ್ಷ ಸಂಘಟನಾ ಪರ್ವದ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯದಲ್ಲಿ 87 ಲಕ್ಷ ಬಿಜೆಪಿ ಸದಸ್ಯರಿದ್ದರು. ಇತ್ತೀಚೆಗೆ ನಡೆದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ 27 ಲಕ್ಷ ಮಂದಿ ಸದಸ್ಯತ್ವ ಪಡೆದಿದ್ದಾರೆ. 50 ಲಕ್ಷ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ ಎಮದು ಹೇಳಿದರು.
ಒಂದು ಲಕ್ಷ ಸಕ್ರಿಯ ಸದಸ್ಯರ ನೋಂದಣಿ ಗುರಿ: ಪ್ರತಿ ಮೂರು ವರ್ಷಕ್ಕೊಮ್ಮೆ ಸಕ್ರಿಯ ಸದಸ್ಯತ್ವ ಅಭಿಯಾನ ನಡೆಯಲಿದೆ. ಅದರಂತೆ
ಸೆ.8ರಂದು ರಾಜ್ಯಾದ್ಯಂತ ಸಕ್ರಿಯ ಸದಸ್ಯರ ನೋಂದಣಿ ಅಭಿಯಾನ ನಡೆಯಲಿದ್ದು, ಈ ಕುರಿತು ಚರ್ಚಿಸಲಾಯಿತು. ಪಕ್ಷದಲ್ಲ ಕಾರ್ಯಕರ್ತರು ಸಕ್ರಿಯ ಸದಸ್ಯತ್ವ ನೋಂದಣಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರತಿ ಮತಗಟ್ಟೆಗೆ ಇಬ್ಬರಂತೆ ರಾಜ್ಯಾದ್ಯಂತ ಒಂದು ಲಕ್ಷ ಸಕ್ರಿಯ ಸದಸ್ಯರನ್ನು ನೋಂದಣಿ ಮಾಡುವ ಗುರಿ ಇದೆ ಎಂದು ಹೇಳಿದರು.
ಈ ಪ್ರಕ್ರಿಯೆ ಬಳಿಕ ಬೂತ್ ಸಮಿತಿ, ಮಂಡಲ ಸಮಿತಿ ರಚನೆ ಪ್ರಕ್ರಿಯೆ ಆರಂಭವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.9 ಹಾಗೂ 10ರಂದು ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲ ಪ್ರಧಾನ ಕಾರ್ಯದರ್ಶಿಗಳು ರಾಜ್ಯಾದ್ಯಂತ ಪ್ರವಾಸ ನಡೆಸಿ ಸಕ್ರಿಯ ಸದಸ್ಯತ್ವ ವರದಿಗಳ ಪರಾಮರ್ಶೆ ನಡೆಸಲಿದ್ದಾರೆ. ಈ ಕುರಿತೂ ಮಾತುಕತೆ ನಡೆಯಿತು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.