ಬಾಂಬ್ ಸ್ಫೋಟ: ನೋಡಲ್ ಅಧಿಕಾರಿ ನೇಮಕ
Team Udayavani, Apr 23, 2019, 4:07 AM IST
ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಹಾಗೂ ಗಾಯಾಳುಗಳಾಗಿರುವ ಕನ್ನಡಿಗರ ಕುರಿತು ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಶ್ರೀಲಂಕಾ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಜತೆಗೆ ರಮೇಶ್ ಬಾಬು ಎಂಬುವರನ್ನು ವಿಶೇಷ ಅಧಿಕಾರಿಯಾಗಿ ನೇಮಿಸಲಾಗಿದೆ.
ಜತೆಗೆ, ಶ್ರೀಲಂಕಾಗೆ ಕಳೆದ ಹತ್ತು ದಿನಗಳಲ್ಲಿ ಕರ್ನಾಟಕದಿಂದ ಪ್ರವಾಸ ಕೈಗೊಂಡವರು, ಅವರು ಉಳಿದಿದ್ದ ಹೋಟೆಲ್, ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಪ್ರವಾಸಕ್ಕೆ ಹೋದವರು ವಾಪಸ್ಸಾಗಿದ್ದಾರಾ? ಇಲ್ಲವಾ? ಅಲ್ಲೇ ಉಳಿದುಕೊಂಡಿದ್ದರಾ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಜುಂ ಪರ್ವೇಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.
ಅವರು ಶ್ರೀಲಂಕಾ ರಾಯಭಾರ ಕಚೇರಿಯ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ. ನೆಲಮಂಗಲ, ಟಿ.ದಾಸರಹಳ್ಳಿ, ತುಮಕೂರಿನಿಂದ ಶ್ರೀಲಂಕಾಗೆ ತೆರಳಿದ್ದ ಏಳು ಜನರ ಪೈಕಿ ನಾಲ್ವರು ಮೃತಪಟ್ಟಿರುವುದು ಖಚಿತಗೊಂಡಿದೆ. ಉಳಿದವರ ಸಂಪರ್ಕ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಸಿಎಸ್ ಜತೆ ಸಿಎಂ ಚರ್ಚೆ: ಈ ಮಧ್ಯೆ, ಉಡುಪಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯ ಕಾರ್ಯದರ್ಶಿಗಳ ಜತೆ ಶ್ರೀಲಂಕಾ ದುರಂತ, ಮೃತ ಕನ್ನಡಿಗರ ಪಾರ್ಥಿವ ಶರೀರ ವಾಪಸ್ ತರುವ ಸಂಬಂಧ ಚರ್ಚಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಸಹ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಜತೆ ದೂರವಾಣಿ ಮೂಲಕ ಚರ್ಚಿಸಿ ಮಾಹಿತಿ ಪಡೆದಿದ್ದಾರೆ. ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ನೆಲಮಂಗಲದ ಜೆಡಿಎಸ್ ನಾಯಕರು ಶ್ರೀಲಂಕಾಗೆ ತೆರಳಿದ್ದು, ಮೃತರ ಪಾರ್ಥಿವ ಶರೀರ ಬೆಂಗಳೂರಿಗೆ ತರುವ ಬಗ್ಗೆ ಅಲ್ಲಿನ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ. ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನದ ನಂತರ ನೆಲಮಂಗಲದ ಶಿವಕುಮಾರ್,
ಲಕ್ಷ್ಮಿನಾರಾಯಣ್, ದಾಸರಹಳ್ಳಿಯ ಹನುಮಂತರಾಯಪ್ಪ, ರಂಗಪ್ಪ, ತುಮಕೂರಿನ ರಮೇಶ್, ಮಾರೇಗೌಡ ಸೇರಿ ಏಳು ಮಂದಿ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದರು. ಆ ಪೈಕಿ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಉಳಿದವರ ಸಂಪರ್ಕ ಸಿಗುತ್ತಿಲ್ಲ.
ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟ ಘಟನೆ ಹೇಯ ಕೃತ್ಯ. ಇಂತಹ ಘಟನೆಗಳು ನಿಲ್ಲುವವರೆಗೆ ಜಗತ್ತಿನಲ್ಲಿ ಶಾಂತಿ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಇಂತಹ ಕೃತ್ಯಗಳ ವಿರುದ್ಧ ಹೋರಾಡಬೇಕಿದೆ. ಸಂತ್ರಸ್ತರಿಗೆ ನಮ್ಮ ದೇಶ ಕೂಡ ನೆರವು ನೀಡಬೇಕು. ಸಾವಿಗೀಡಾದ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ.
-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಕೊಲಂಬೋದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ ಜೆಡಿಎಸ್‌ನ ಏಳು ಮಂದಿಯ ತಂಡ ಬಾಂಬ್ ಸ್ಫೋಟದ ನಂತರ ಕಾಣೆಯಾಗಿದೆ. ಇದನ್ನು ಕೇಳಿ ನನಗೆ ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ.
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.