Bomb Threat: ಒಂದೇ ದಿನ 30ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಕರೆ!
ಒಂದು ವಾರದಲ್ಲಿ ಇಂಥ ಕರೆಗಳ ಸಂಖ್ಯೆ 70ಕ್ಕೇರಿಕೆ
Team Udayavani, Oct 20, 2024, 7:40 AM IST
ಹೊಸದಿಲ್ಲಿ: ವಿಮಾನಗಳಿಗೆ ಹುಸಿ ಬೆದರಿಕೆ ಕರೆಗಳ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಭಾರತದ 30ಕ್ಕೂ ಅಧಿಕ ವಿಮಾನಗಳಿಗೆ ಬಾಂಬ್ ಬೆದ ರಿಕೆ ಕರೆಗಳು ಬಂದಿದ್ದು, ಸಂಚಾರ ಅಸ್ತವ್ಯಸ್ತವಾಗಿವೆ. ಈ ಮೂಲಕ ದೇಶಾದ್ಯಂತ ಈ ವಾರ ಒಟ್ಟು 70 ಹುಸಿ ಬಾಂಬ್ ಕರೆಗಳು ಬಂದಂತಾಗಿವೆ. ಈ ಪ್ರಕರಣ ಗಳು ಭಾರತದ ವಿಮಾನಯಾನ ಕ್ಷೇತ್ರದ ಮೇಲೆ ಭಾರೀ ಪ್ರತಿಕೂಲ ಪರಿಣಾಮ ಬೀರುತ್ತಿದೆ.
ಶನಿವಾರ ಏರ್ ಇಂಡಿಯಾ, ಇಂಡಿಗೋ, ಆಕಾಶಾ ಏರ್, ವಿಸ್ತಾರ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್‌ಗಳಲ್ಲಿ ಬಾಂಬ್ ಇರುವುದಾಗಿ ಬೆದರಿಕೆಗಳು ಬಂದಿವೆ. ಈ ಪೈಕಿ ದೆಹಲಿ ಮತ್ತು ಮುಂಬೈನಿಂದ ಇಸ್ತಾಂಬುಲ್‌ಗೆ ಹೊರಟಿದ್ದ ಏರ್ ಇಂಡಿಯಾ, ಉದಯಪುರದಿಂದ ಮುಂಬೈಗೆ ಹೊರಟಿದ್ದ ವಿಸ್ತಾರ ವಿಮಾನಗಳಿಗೆ ಮುಂಜಾನೆಯೇ ಬೆದರಿಕೆ ಕರೆ ಬಂದಿವೆ. ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅದನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಇನ್ನು ದುಬೈ-ಜೈಪುರ ಏರ್ ಇಂಡಿಯಾ ಎಕ್ಸ್‌ಪ್ರಸ್‌ಗೂ ಕರೆ ಬಂದಿತ್ತು.
ಬಹುತೇಕ ಹುಸಿ ಬಾಂಬ್ ಕರೆಗಳನ್ನು ದುಷ್ಕರ್ಮಿಗಳು ವಿಪಿ ಎನ್(ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್) ಅಥವಾ ಡಾರ್ಕ್ ವೆಬ್ ಬ್ರೌಸರ್ ಬಳಸಿಕೊಂಡು ಮಾಡುವ ಕಾರಣ ಅವುಗಳನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸ. ಆದರೂ, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.