Border Dispute: ಚೀನ ಜತೆಗಿನ ಗಡಿ ಸಮಸ್ಯೆ ಇತ್ಯರ್ಥಕ್ಕೆ ಬದ್ಧ: ವಿದೇಶಾಂಗ ಸಚಿವ ಜೈಶಂಕರ್
ದ್ವಿಪಕ್ಷೀಯ ಮಾತುಕತೆಗಳ ಮೂಲಕ ಸಂಬಂಧ ಅಲ್ಪ ವೃದ್ಧಿ, ನ್ಯಾಯಸಮ್ಮತ, ಸ್ವೀಕಾರಾರ್ಹ ಚೌಕಟ್ಟಲ್ಲಿ ಚೀನ ಜತೆ ಚರ್ಚೆ
Team Udayavani, Dec 4, 2024, 7:50 AM IST
ಹೊಸದಿಲ್ಲಿ: ಚೀನ ಜತೆಗಿನ ಗಡಿ ಸಮಸ್ಯೆಯನ್ನು ನ್ಯಾಯಸಮ್ಮತ, ಸ್ವೀಕಾರಾರ್ಹ ಚೌಕಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ಮೂಲಕ ಇತ್ಯರ್ಥಪಡಿಸಿ ಕೊಳ್ಳಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಘೋಷಿಸಿದ್ದಾರೆ.
ಈ ಸಂಬಂಧ ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ಸದ್ಯ 2 ದೇಶಗಳ ಸೇನೆಗಳು ವಾಪಸಾಗಿವೆ. ಗಡಿ ವಿಚಾರದಲ್ಲಿ ಚೀನ ಹೊಂದಿದ್ದ ನಿಲುವಿನಿಂದ 2020ರಿಂದ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮವಾಗಿಲ್ಲ. 2020ರ ಎಪ್ರಿಲ್-ಮೇಯಲ್ಲಿ ಪೂರ್ವ ಲಡಾಖ್‌ನಲ್ಲಿ ಚೀನ ಸೇನೆಯ ಜಮಾವಣೆ ಯಿಂದ ಹಲವಾರು ಬಾರಿ ಮುಖಾಮುಖೀಯಾಗಿದೆ. ಗಾಲ್ವಾನ್ ಕಣಿವೆ ಘರ್ಷಣೆ ನಂತರ ಪರಿಸ್ಥಿತಿ ನಿಯಂತ್ರಿಸಲು ಬೃಹತ್ ಪ್ರಮಾಣದಲ್ಲಿ ಸೇನೆ ನಿಯೋಜಿಸಬೇಕಾಯಿತು ಎಂದರು.
3 ತತ್ವಗಳು:
2 ದೇಶಗಳು ಪರಸ್ಪರ ಗಡಿ ಗೌರವಿಸ ಬೇಕು, ಪರಿಸ್ಥಿತಿಯಲ್ಲಿ ಬದಲಾವಣೆ ಮಾಡುವುದಕ್ಕೆ ಯತ್ನಿಸಬಾರದು, ಬಾಂಧವ್ಯ ವೃದ್ಧಿಗೆ ಸಂಬಂಧಿಸಿ ದಂತೆ ಹಿಂದಿನ ಒಪ್ಪಂದಗಳನ್ನು ಗೌರವಿಸಬೇಕು ಎಂಬ 3 ತತ್ವಗಳನ್ನು 2 ರಾಷ್ಟ್ರಗಳು ಪಾಲಿಸಬೇಕು. ಈ ಮೂರು ವಿಚಾರಗಳಿಗೆ ಸಂಬಂಧಿಸಿದಂತೆ ಭಾರತ ಈ ಹಿಂದೆಯೂ ಬದ್ಧವಾಗಿತ್ತು. ಮುಂದೆಯೂ ಅದೇ ನಿಲುವನ್ನು ಪ್ರತಿಪಾದಿಸುತ್ತೇವೆ ಎಂದರು. ಲಡಾಖ್‌ನಲ್ಲಿ ಸೇನೆಗಳ ವಾಪಸಾತಿ ಬಳಿಕ ಸತತ ರಾಜತಾಂತ್ರಿಕ ಮಾತುಕತೆ ಮೂಲಕ ಎರಡೂ ದೇಶಗಳ ಸಂಬಂಧ ವೃದ್ಧಿಯಲ್ಲಿ ಅಲ್ಪ ಪ್ರಗತಿ ಸಾಧಿಸಲಾಗಿದೆ ಎಂದು ಜೈಶಂಕರ್ ಹೇಳಿದರು.
ಚೀನ ಜತೆಗೆ ಶಾಂತಿ, ನೆಮ್ಮದಿ ಮರು ಸ್ಥಾಪಿಸಿ ಮುನ್ನಡೆಯಲು ನಾವು ಸಿದ್ಧವಿದ್ದೇವೆ ಎಂದರು. ಇದಲ್ಲೇ ತಮಗಿರುವ ಸವಾಲುಗಳ ಮಧ್ಯೆಯೂ ಚೀನ ಸೇನೆಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆಯ ಹೊಗಳಿದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ವಿದೇಶಾಂಗ ಸಚಿವರು ರಾಜ್ಯಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.