ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ: ಹೆದ್ದಾರಿ ವಿಸ್ತರಣೆಯಲ್ಲಿ ಡಾಮರು ಕಾಮಗಾರಿ
Team Udayavani, Mar 17, 2021, 4:00 AM IST
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಮೂರನೇ ಬೂತ್ ನಿರ್ಮಾಣದ ಹಿನ್ನೆಲೆಯಲ್ಲಿ ಹೆದ್ದಾರಿಯನ್ನು ವಿಸ್ತರಿಸುವ ಕಾರ್ಯ ನಡೆಯುತ್ತಿದ್ದು, ಪ್ರಸ್ತುತ ಅಂತಿಮ ಹಂತದಲ್ಲಿ ಡಾಮರು ಹಾಕುವ ಕಾಮಗಾರಿ ನಡೆಯುತ್ತಿದೆ.
ಕಳೆದ ಹಲವು ಸಮಯಗಳಿಂದ ಮೂರನೇ ಬೂತ್ ನಿರ್ಮಾಣವಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದರೂ, ಕಾಮಗಾರಿ ಬಹಳ ವಿಳಂಬವಾಗಿತ್ತು. ಪ್ರಾರಂಭದಲ್ಲಿ ವಿದ್ಯುತ್ ಲೈನ್ ಅಡ್ಡಿಯಾಗಿದ್ದು, ಅದನ್ನು ತೆರವುಗೊಳಿಸಿದ ಬಳಿಕವೂ ಕಾಮಗಾರಿ ಮುಂದುವರಿದಿರಲಿಲ್ಲ.
ಪ್ರಸ್ತುತ ಟೋಲ್‌ಗೇಟ್‌ನ ಎರಡೂ ಬದಿಗಳಲ್ಲಿ ತಲಾ ಎರಡೆರಡು ಬೂತ್‌ಗಳಿದ್ದು, ಆದರೂ ಶುಲ್ಕ ಪಾವತಿಯ ವೇಳೆ ವಾಹನಗಳು ಸರತಿಯಲ್ಲಿ ನಿಲ್ಲಬೇಕಿತ್ತು. ಹೀಗಾಗಿ ಮೂರನೇ ಬೂತ್‌ಗೆ ಬೇಡಿಕೆ ಕೇಳಿಬಂದಿತ್ತು. ಪ್ರಸ್ತುತ ಹೆದ್ದಾರಿ ವಿಸ್ತರಣೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಬಳಿಕ ಮೂರನೇ ಬೂತ್ ನಿರ್ಮಾಣವಾಗಬೇಕಿದೆ.
ಡಿವೈಡರ್‌ಗೆ ಬಣ್ಣ
ಜತೆಗೆ ಬ್ರಹ್ಮರಕೂಟ್ಲು ಟೋಲ್ ಬಳಿಯಿಂದ ಮಂಗಳೂರು ಭಾಗಕ್ಕೆ ಹೆದ್ದಾರಿಯ ಡಿವೈಡರ್‌ಗಳಿಗೆ ಕಪ್ಪು ಹಾಗೂ ಹಳದಿ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ಈ ಹಿಂದೆ ಬಳಿದ ಬಣ್ಣವು ಮಣ್ಣಿನಿಂದ ತುಂಬಿ ಮಾಸಿ ಹೋಗಿದ್ದು, ಪ್ರಸ್ತುತ ಡಿವೈಡರ್‌ನ ಮಣ್ಣು ತೆಗೆದು ಯಂತ್ರದ ಮೂಲಕ ಬಣ್ಣ ಬಳಿಯಲಾಗುತ್ತಿದೆ. ಡಿವೈಡರ್‌ನ ಗಿಡಗಂಟಿಗಳನ್ನು ಕೂಡ ತೆರವುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.