Brahmavara: ಮೃತರ ಮನೆಯವರಿಂದ ದೂರು, ಸಿಐಡಿಯಿಂದ ತನಿಖೆ ಪ್ರಾರಂಭ, ವಿಚಾರಣೆ

ಬ್ರಹ್ಮಾವರದಲ್ಲಿ ಲಾಕ್‌ಅಪ್‌ ಡೆತ್‌ ಪ್ರಕರಣ

Team Udayavani, Nov 12, 2024, 6:45 AM IST

brahma–Lockup

ಬ್ರಹ್ಮಾವರ: ಚೇರ್ಕಾಡಿ ಗ್ರಾಮದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂದಿಸಲ್ಪಟ್ಟ ಕೇರಳ ಕೊಲ್ಲಂ ಮೂಲದ ಬಿಜು ಯೋಹನ್‌ (45) ಲಾಕ್‌ಅಪ್‌ ಡೆತ್‌ ಹಿನ್ನಲೆಯಲ್ಲಿ ಸೋಮವಾರ ಮೃತರ ಮನೆಯವರು ಠಾಣೆಗೆ ದೂರು ನೀಡಿದ್ದಾರೆ.

ಬಿಜು ಯೋಹನ್‌ ಮೈ ಮೇಲೆ ಹೊಡೆದ ಗುರುತುಗಳು ಇರುವ ಕಾರಣ ನಿಧನದಲ್ಲಿ ಸಂದೇಹ ಇದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಮೃತರ ಸಹೋದರ ದೂರು ನೀಡಿದ್ದಾರೆ. ಕೇರಳ ಕಲ್ಚರ್‌ ಮತ್ತು ಸೋಶಿಯಲ್‌ ಸಂಘ, ಕೇರಳ ಸಮಾಜ ಸಂಘದ ಪದಾಧಿಕಾರಿಗಳು ಪಾರದರ್ಶಕ ತನಿಖೆ ಹಾಗೂ ನ್ಯಾಯಕ್ಕೆ ಮನವಿ ಮಾಡಿದ್ದಾರೆ. ಪ್ರಕರಣ ಕುರಿತು ನ್ಯಾಯಾಧೀಶರು ವಿಚಾರಣೆ ನಡೆಸಿದರು.

ಬಿಜು ಯೋಹನ್‌ ಕೆಲವು ದಿನಗಳ ಹಿಂದೆಯಷ್ಟೆ ಹಂಗಾರಕಟ್ಟೆಯ ಫ್ಯಾಕ್ಟರಿಯಲ್ಲಿ ಸೂಪರ್‌ವೈಸರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಚೇರ್ಕಾಡಿ ಸೂರೆಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರ ರಾತ್ರಿ 8 ಗಂಟೆ ಹೊತ್ತಿಗೆ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಗೆ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಸಂತ್ರಸ್ತರ ದೂರಿನ ಮೇಲೆ ಬ್ರಹ್ಮಾವರ ಪೊಲೀಸರು ಆರೋಪಿ ಬಿಜು ಯೋಹನ್‌ ಅವರನ್ನು ವಶಕ್ಕೆ ಪಡೆದಿದ್ದರು. ಕಸ್ಟಡಿಯಲ್ಲಿ ಬೆಳಗಿನ ಜಾವ 3.45ಕ್ಕೆ ಆರೋಪಿ ಅಸ್ವಸ್ಥರಾಗಿದ್ದು, ಅನಂತರ ಮೃತಪಟ್ಟಿದ್ದರು.

ಇಬ್ಬರ ಅಮಾನತು
ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ನಡೆದ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಠಾಣೆ ಪೊಲೀಸ್‌ ಉಪನಿರೀಕ್ಷಕ ಮತ್ತು ಹೆಡ್‌ಕಾಸ್ಟೆಬಲ್‌ ಅವರನ್ನು ಅಮಾನತು ಮಾಡಲಾಗಿದೆ. ಠಾಣಾಧಿಕಾರಿ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಸುಜಾತಾ ಅವರನ್ನು ಉಡುಪಿ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಮಾಹಿತಿ ಸಂಗ್ರಹಿಸಿದ ಸಿಐಡಿ ತಂಡ
ಪ್ರಕರಣದ ತನಿಖೆಗೆ ಸೋಮವಾರ ಬೆಂಗಳೂರಿನಿಂದ ಸಿಐಡಿ ಪೊಲೀಸರ ತಂಡ ಆಗಮಿಸಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯಿಂದ ಮಾಹಿತಿ ಸಂಗ್ರಹಿಸಿದ ಸಿಐಡಿ ಪೊಲೀಸರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಮೃತದೇಹ ಪರಿಶೀಲಿಸಿ, ವೈದ್ಯಾಧಿಕಾರಿಗಳನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್

9

Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಫಿಶರೀಸ್‌ ಕಾಲೇಜು ಆವರಣ ಕೊಳಚೆ ಮುಕ್ತಿ

6

Kaup ತಾಲೂಕಿನಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಬೆಳೆ ಕಟಾವು

5

Kundapura: ಎಂಟು ಗಂಟೆ ಕಾಲ ನಡೆದ ಕುಂದಾಪುರ ಪುರಸಭೆ!

4

Mullikatte: ನಾಡಗುಡ್ಡೆಯಂಗಡಿ-ಸೇನಾಪುರ ರಸ್ತೆ ಹೊಂಡಮಯ

ಮಣಿಪಾಲ ಎನರ್ಜಿ ಪ್ರೈ.ಲಿ. ಮತ್ತು ಲಯನ್ಸ್ ಸಹಯೋಗ: ರಜತ ಸಂಭ್ರಮ ಸಭಾಂಗಣ ಉದ್ಘಾಟನೆ

ಮಣಿಪಾಲ ಎನರ್ಜಿ ಪ್ರೈ.ಲಿ. ಮತ್ತು ಲಯನ್ಸ್ ಸಹಯೋಗ: ರಜತ ಸಂಭ್ರಮ ಸಭಾಂಗಣ ಉದ್ಘಾಟನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.