ಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆ
Team Udayavani, Jun 21, 2024, 11:34 PM IST
ಮಣಿಪಾಲ: ಉತ್ತರ ಗೋವಾದ ಸತ್ತಾರಿ ತಾಲೂಕಿನ ಸತ್ತಾರಿ ಸಮೀಪ ಇರುವ ಪರ್ಯೆಯ ಪಾಳು ಬಿದ್ದಿರುವ ಭೂಮಿಕಾದೇವಿ ದೇವಾಲಯದ ಎದುರು ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಲಾಗಿದ್ದು, ಈ ಅಧ್ಯಯನದಲ್ಲಿ ಹೊಸ ರಾಜ ಮನೆತನದ ಬಗ್ಗೆ ತಿಳಿದು ಬಂದಿದೆ ಎಂದು ಶಿರ್ವದ ಮೂಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತಣ್ತೀ ಇತಿಹಾಸ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.
ಕಲ್ಲಿನ ಸ್ತಂಭದ ಮೇಲೆ ಬ್ರಾಹ್ಮಿಲಿಪಿ ಶಾಸನವೊಂದನ್ನು ಇತ್ತೀಚೆಗೆ ಪುರಾತಣ್ತೀ ಅನ್ವೇಷಣೆಯನ್ನು ಕೈಗೊಂಡಿದ್ದು, ಈ ಶಾಸನವನ್ನು ಬ್ರಾಹ್ಮಿಲಿಪಿ ಮತ್ತು ಸಂಸ್ಕೃತ ಭಾಷೆಯಲ್ಲಿ ಬರೆಯಲಾಗಿದೆ. ಕೇವಲ ಎರಡು ಸಾಲಿನ ಈ ಶಾಸನ ಗೋವಾದ ಇತಿಹಾಸ ಮತ್ತು ಸಂಸ್ಕೃತಿಯ ಅಧ್ಯಯನದಲ್ಲಿ ಮಹತ್ವದ್ದಾಗಿದೆ.
ಪ್ರಾಚೀನ ಕಾಲದಲ್ಲಿ ಗೋವಾವನ್ನು ಆಳಿದ್ದ ಹೈಹಯ ಎಂಬ ಒಂದು ಹೊಸ ರಾಜಮನೆತನ ಬೆಳಕಿಗೆ ಬಂದಿತು. ಶಾಸನದ ಪ್ರಕಾರ ಧರ್ಮಯಜೊnà ಎಂಬ ಹೆಸರಿನ ಹೈಹಯ ದೊರೆ ತನ್ನ ಸೈನ್ಯದೊಂದಿಗೆ ಒಂದು ಯಜ್ಞವನ್ನು ನಡೆಸಿದ ವಿಶೇಷ ಮಾಹಿತಿಯನ್ನು ಶಾಸನ ಒಳಗೊಂಡಿದೆ ಹಾಗೂ ಶಾಸನೋಕ್ತ ಈ ಸ್ತಂಭವೇ ಯೂಪಸ್ತಂಭವಾಗಿದೆ.
ಲಿಪಿ ಲಕ್ಷಣದ ಆಧಾರದ ಮೇಲೆ ಶಾಸನದ ಕಾಲವನ್ನು 4 ಅಥವಾ 5ನೇ ಶತಮಾನದ ಶಾಸನವೆಂದು ಗುರುತಿಸಲಾಗಿದೆ. ಪರ್ಯೆ ಭೂಮಿಕಾ ದೇವಾಲಯದ ಪ್ರಾಚೀನತೆಯ ಅಧ್ಯಯನ ದೃಷ್ಟಿಯಿಂದ ಈ ಶಾಸನ ಬಹಳ ಮುಖ್ಯ ದಾಖಲೆಯಾಗಿದೆ. ಭಾರತೀಯ ಪುರಾತಣ್ತೀ ಸರ್ವೆàಕ್ಷಣ ಇಲಾಖೆ ಶಾಸನಶಾಸ್ತ್ರ ವಿಭಾಗದ ನಿರ್ದೇಶಕ ಡಾ| ಮುನಿರತ್ನಂ ರೆಡ್ಡಿ, ಗೋವಾ ಪುರಾತಣ್ತೀ ಸಂಶೋಧಕ ಡಾ| ರಾಜೇಂದ್ರ ಕೇರ್ಕರ್, ವಿಟೊuàಬ ಗಾವಡೆ, ಚಂದ್ರಕಾಂತ್ ಔಖಲೆ, ಅಮೈ ಕಿಂಜ್‌ವಾಡೇಕರ್ ಅಧ್ಯಯನಕ್ಕೆ ಸಹಕಾರ ನೀಡಿದ್ದಾರೆ ಎಂದು ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.
ಹೈಹಯರು ಯಾರು?
ಹೈಹಯರು, ಭಾರತದ ಪುರಾಣಗಳು ಹಾಗೂ ಮಹಾ ಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣಗಳಲ್ಲಿ ಉಲ್ಲೇಖೀತವಾಗಿರುವ ಐದು ಕುಲಗಳನ್ನು ಒಳಗೊಂಡಿರುವ ಪ್ರಾಚೀನ ಒಕ್ಕೂಟ. ವಿತಿಹೋತ್ರ, ಶರ್ಯತ, ಭೋಜ, ಆವಂತಿ ತುಂಡಿಕೇರ ಎಂಬ ಐದು ಹೈಹಯ ಕುಲಗಳನ್ನು ಪುರಾಣ ಗಳಲ್ಲಿ ಹೆಸರಿಸಲಾಗಿದೆ. ಭೋಜರು ಗೋವಾದಲ್ಲಿ ಆಳ್ವಿಕೆ ನಡೆಸುತ್ತಿದ್ದರು ಎಂಬುದಕ್ಕೆ ಇತರ ಐತಿಹಾಸಿಕ ದಾಖಲೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.