ಬ್ರಿಟನ್‌: ಪ್ಲಾಸ್ಟಿಕ್‌ ಚೀಲಗಳೇ ವೈದ್ಯರಿಗೆ ಅನಿವಾರ್ಯ

Team Udayavani, Apr 6, 2020, 12:30 PM IST

ಬ್ರಿಟನ್‌: ಪ್ಲಾಸ್ಟಿಕ್‌ ಚೀಲಗಳೇ ವೈದ್ಯರಿಗೆ ಅನಿವಾರ್ಯ

ಬ್ರಿಟನ್‌: ಕೋವಿಡ್-19 ಸೋಂಕಿನ ಕಾರಣಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಒಂದು ಜೀವ ರಕ್ಷಕ ಸಾಧನಗಳ ಕೊರತೆಯಾದರೆ ಮತ್ತೂಂದೆಡೆ ವೈದ್ಯರ ಸುರಕ್ಷತೆಗೆ ಬೇಕಾದ ಅಗತ್ಯ ವಸ್ತುಗಳ ಕೊರತೆ ಹೆಚ್ಚುತ್ತಿದೆ.
ಬಹಳಷ್ಟು ರಾಷ್ಟ್ರಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾದ ಕಾರಣ ಸರಕಾರಗಳೂ ಕಂಗಾಲಾಗಿದೆ. ಸದ್ಯ ಅದೇ ಪರಿಸ್ಥಿತಿ ಲಂಡನ್‌ನಲ್ಲಿ ಇದೆ.

ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಉದ್ಭವಿಸಿದೆ. ಇಂಗ್ಲೆಂಡ್‌ನ‌ ಕೆಲವು ಆರೋಗ್ಯ ರಕ್ಷಣಾ ಕಾರ್ಯಕರ್ತರು ಎದುರಿಸುತ್ತಿರುವ ಸುರಕ್ಷಾ ಸಲಕರಣೆಗಳ ಕೊರತೆಯ ವಾಸ್ತವ ವನ್ನು ಮಾಧ್ಯಮಗಳ ಮುಂದೆ ವಿವರಿಸಿದ್ದಾರೆ. ನಮ್ಮ ದೇಶದ ಅವ್ಯವಸ್ಥೆಯನ್ನು ನಾವು ಬಹಿರಂಗಗೊಳಿಸುವುದು ಇಷ್ಟವಿಲ್ಲ. ಆದಾಗ್ಯೂ ಪರಿಸ್ಥಿತಿ ಸುಧಾರಣೆ ಆಗಲಿ ಎಂಬ ನಿಟ್ಟಿನಲ್ಲಿ ಹೇಳಬೇಕಿದೆ ಎಂದು ತಿಳಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ. ವೈದರ ಭವಿಷ್ಯ ಮತ್ತು ಈಗಿನ ಅಗತ್ಯತೆಯನ್ನು ಮನಗಂಡು ಬಿಬಿಸಿ ಆವೈದ್ಯರ ಹೆಸರನ್ನು ಬದಲಾಯಿಸಿ ವರದಿ ಮಾಡಿದೆ.

ಇಂಗ್ಲೆಂಡಿನ ಬಹುತೇಕ ಆಸ್ಪತ್ರೆಗಳು ಈಗ ಕೊರೊನಾ ಆಸ್ಪತ್ರೆಯಾಗಿ ಬದಲಾಗಿವೆ. ತುರ್ತು ಸೇವೆ ಅಲ್ಲದೇ ಇರುವ ಯಾವುದೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿಲ್ಲ. ಕ್ಯಾನ್ಸರ್‌ ಚಿಕಿತ್ಸಾಲಯಗಳನ್ನು ಸಹ ರದ್ದುಪಡಿಸಲಾಗಿದೆ. ಇದರೊಂದಿಗೆ ಸಿಬಂದಿ ಕೊರತೆ, ಹಾಸಿಗೆಗಳ ಕೊರತೆ, ಜೀವ ರಕ್ಷಕಗಳ ಕೊರತೆ ಮತ್ತು ವೆಂಟಿಲೇಟರ್‌ಗಳ ಕೊರತೆಯೂ ಕಂಡುಬಂದಿದೆ.

ಎಚ್ಚೆತ್ತ ಸರಕಾರ
ಇದರಿಂದ ಸರಕಾರ ಎಚ್ಚೆತ್ತುಕೊಂಡಿದ್ದು, ವಿತರಣಾ ಸಮಸ್ಯೆಗಳನ್ನು ಒಪ್ಪಿಕೊಂಡಿದೆ. ಇದೀಗ ಸೇನೆಯ ನೆರವಿನೊಂದಿಗೆ ಉಪಕರಣಗಳನ್ನು ಪೂರೈಸಲು ಮುಂದಾಗಿದೆ ಎನ್ನಲಾಗಿದೆ.

ಒತ್ತಡದಲ್ಲಿ ವೈದ್ಯರು
ಕೋವಿಡ್-19 ರೋಗಿಗಳಿಗೆ ತಮ್ಮ ಸುರಕ್ಷೆಯ ಕಾಳಜಿಯೊಂದಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಸಿಬಂದಿ ಈಗಾಗಲೇ ಒತ್ತಡವನ್ನು ಅನುಭವಿಸುತ್ತಿದ್ದಾರೆ. ಪ್ರತಿದಿನ 13 ಗಂಟೆಗಳ ಕಾಲ ಅನಾರೋಗ್ಯ ಪೀಡಿತ ರೋಗಿಗಳ ಆರೈಕೆಯಲ್ಲಿ ತೊಡಗಿದ್ದಾರೆ. ಇವರು ಕ್ಲಿನಿಕಲ್‌ ತ್ಯಾಜ್ಯ ಚೀಲಗಳಿಂದ ತಯಾರಿಸಿದ ವೈಯಕ್ತಿಕ ರಕ್ಷಣಾ ಸಾಧನಗಳನ್ನು (ಪಿಪಿಇ) ವಿನ್ಯಾಸಗೊಳಿಸಿದ ರಕ್ಷಣಾ ಸಾಮಗ್ರಿಗ‌ಳನ್ನು ಬಳಸುತ್ತಾರೆ. ಸರಕಾರ ಸಾರ್ವಜನಿಕರಿಗೆ 2 ಮೀಟರ್‌ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಹೇಳಿದೆ. ಅಲ್ಲಿನ ವೈದ್ಯರಿಗೆ ಯಾವುದೇ ಪೂರಕ ಕ್ರಮಗಳಿಲ್ಲ. ವೈದ್ಯಕೀಯ ಸಲಕರಣೆಗಳ ಕೊರತೆಯಿಂದ ವೈದ್ಯರಿಗೆ ಟೋಪಿಗಳನ್ನು ಮತ್ತು ಮುಖಕ್ಕೆ ಮಾಸ್ಕ್ಗಳನ್ನು ಧರಿಸಲು ತಿಳಿಸಲಾಗಿದೆ. ಅವುಗಳು ತೂತಾಗಿದ್ದು, ಯಾವುದೇ ರಕ್ಷಣೆ ದೊರೆಯದು ಎಂಬ ಕಾರಣಕ್ಕೆ ಪ್ಲಾಸ್ಟಿಕ್‌ ಚೀಲಗಳನ್ನು ಅಳವಡಿಸಲಾಗಿದೆ ಎಂದು ವಿವರಿಸಲಾಗಿದೆ.

ಟಾಪ್ ನ್ಯೂಸ್

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.