ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೂ ಸಂಕಷ್ಟ
Team Udayavani, Jul 3, 2021, 10:16 PM IST
ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್‌ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎ ಸ್.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ತಿರಸ್ಕರಿಸಿದ್ದು, ಮರು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.
2015ರಲ್ಲಿ ದಾಖಲಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು 10 ಸಾವಿರ ಪುಟಗಳ ಬಿ ರಿಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದನ್ನು ಆಕ್ಷೇಪಿಸಿ ದೂರುದಾರ ವಾಸುದೇವ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಶನಿವಾರ ವಿಚಾರಣೆ ನಡೆಸಿದ ಕೋರ್ಟ್ ಬಿ ರಿಪೋರ್ಟ್ ಸರಿಯಾಗಿಲ್ಲ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶದ ಅನುಸಾರವಾಗಿ ಸೂಕ್ತ ರೀತಿ ಮರು ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದೆ. ದೂರುದಾರ ವಾಸುದೇವ ರೆಡ್ಡಿ ಅವರ ಪರ ಸುಪ್ರೀಂ ಕೋರ್ಟ್ ವಕೀಲ ಕೆ.ವಿ.ಧನಂಜಯ ವಾದ ಮಂಡಿಸಿದರು.
ಪ್ರಕರಣದ ಹಿನ್ನೆಲೆ?
2000-2001ನೇ ಸಾಲಿನಲ್ಲಿ ನಗರದ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು 500 ಎಕರೆಯನ್ನು ಐಟಿ ಕಾರಿರ್ಡಾ ಆಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಮಾರತಹಳ್ಳಿ, ಬೆಳ್ಳಂದೂರು, ಸರ್ಜಾರಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶವನ್ನು ಸ್ವಾಧೀನಕ್ಕೆ ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು. ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10 ಎಕರೆ, ಸರ್ವೇ ನಂ 10ರ 33 ಗುಂಟೆ ಜಾಗವನ್ನು ಡಿನೋಟಿಫಿಕೇಷನ್ ಮಾಡಲು ಅಕ್ರಮವಾಗಿ ಆದೇಶಿಸಿ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರ ಜುಲೈ 10ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.
ಅದರ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಕೋರ್ಟ್, ದೂರಿನಲ್ಲಿ ಮಾಡಲಾಗಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ 2015ರ ಫೆ.18ರಂದು ಆದೇಶಿಸಿತ್ತು. ಅದರಂತೆ ಪೊಲೀಸರು 2015ರ ಫೆ.21ರಂದು ಎಫ್ಐಆರ್ ದಾಖಲಿಸಿ, ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಿದ್ದರು. ಈ ಸಂಬಂಧ ಯಡಿಯೂರಪ್ಪ ಅವರು 2019ರ ಜ.25ರಂದು ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕೂಡ ಅರ್ಜಿ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.