ಇಂದೇ ನಿರ್ಣಾಯಕ? ವರಿಷ್ಠರಿಂದ ರವಿವಾರವೇ ಪದತ್ಯಾಗ ಸೂಚನೆ ?
Team Udayavani, Jul 25, 2021, 7:20 AM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ “ಪದತ್ಯಾಗ’ ಕುತೂಹಲ ಮುಂದುವರಿದಿದೆ. ರವಿವಾರ ವರಿಷ್ಠರಿಂದ ಸೂಚನೆ ಬರುವ ನಿರೀಕ್ಷೆ ಇರುವುದಾಗಿ ಸ್ವತಃ ಬಿಎಸ್‌ವೈ ಹೇಳಿದ್ದಾರೆ. ಆದರೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರವಿವಾರ ಅವರು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಸಮೀಕ್ಷೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪದತ್ಯಾಗ ಮುಂದೂಡಿಕೆಯಾಗುತ್ತದೆಯೇ ಎಂಬ ಪ್ರಶ್ನೆಯೂ ಬಿಜೆಪಿ ಪಾಳಯದಲ್ಲಿ ಮೂಡಿದೆ.
ಸದ್ಯದ ಮಾಹಿತಿ ಪ್ರಕಾರ ಜು. 26ರ ಸಂಜೆ ಬಿಎಸ್‌ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಹೀಗಾಗಿ ರವಿವಾರ ನಿರ್ಣಾಯಕ ದಿನದಂತಿದೆ.
ಕಾಪಾಡುವುದೇ ಪ್ರವಾಹ?
ಮುಖ್ಯಮಂತ್ರಿ ಬದಲಾವಣೆಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳದ ಯಡಿಯೂರಪ್ಪ ತಮ್ಮ ಆಡಳಿತಾತ್ಮಕ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ರವಿವಾರ ಪ್ರವಾಹಪೀಡಿತ ಬೆಳಗಾವಿ ಜಿಲ್ಲೆಗೆ ಪರಿಶೀಲನೆಗೆ ತೆರಳಲಿದ್ದಾರೆ.
ಇಂಥ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬಿಜೆಪಿ ವರಿಷ್ಠರ ಸಂದೇಶ ಏನಿರಲಿದೆ ಎಂಬ ಕುತೂಹಲ ರಾಜ್ಯ ಬಿಜೆಪಿ ವಲಯದಲ್ಲಿದೆ. ಮುಖ್ಯಮಂತ್ರಿಗಳು ಪ್ರವಾಹಪೀಡಿತ ಪ್ರದೇಶಗಳ ಜನರ ನೆರವಿಗೆ ಧಾವಿಸುತ್ತಿರುವ ಸಂದರ್ಭದಲ್ಲಿ ಪದತ್ಯಾಗಕ್ಕೆ ಸೂಚಿಸುವುದು ಒಳ್ಳೆಯ ಬೆಳವಣಿಗೆಯಾಗದು. ಹೀಗಾಗಿ ಈ ವಿಚಾರದಲ್ಲಿ ವರಿಷ್ಠರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದು, ಯಡಿಯೂರಪ್ಪ ಅವರಿಗೆ ಇನ್ನಷ್ಟು ದಿನ ಮುಂದುವರಿಯಲು ಅವಕಾಶ ದೊರೆಯಬಹುದು ಎಂಬ ಆಶಾಭಾವನೆ ಅವರ ಆಪ್ತ ವಲಯದ್ದು.
ಹಂಗಾಮಿ?
ಯಡಿಯೂರಪ್ಪ ರಾಜೀನಾಮೆ ನೀಡಿದರೂ ಹೊಸ ನಾಯಕನ ಆಯ್ಕೆ ಆಗುವ ವರೆಗೆ ಅಂದರೆ, ಆ. 15ರ ವರೆಗೆ ಹಂಗಾಮಿಯಾಗಿ ಮುಂದುವರಿಯುವ ಸಾಧ್ಯತೆ ಇದೆ. ಒಂದು ಮೂಲದ ಪ್ರಕಾರ ಆ. 8ರ ವರೆಗೆ ಆಷಾಢ ಮಾಸ ಇದ್ದು, ಅಲ್ಲಿಯವರೆಗೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಅನುಮಾನ.
ಇನ್ನೊಂದು ಮೂಲದ ಪ್ರಕಾರ, ಆ. 13ರ ವರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.