ಕರ್ನಾಟಕವನ್ನು ಮಾದರಿ ರಾಜ್ಯ ಮಾಡಲು ಶ್ರಮಿಸುತ್ತೇನೆ: ಬಿಎಸ್‌ವೈ
ಶಿಕಾರಿಪುರ ಜನರನ್ನು ಎಂದೂ ಮರೆಯಲಾರೆ
Team Udayavani, Feb 27, 2020, 10:43 PM IST
ಬೆಂಗಳೂರು: ನನ್ನ ಜೀವನದಲ್ಲಿ ಶಿಕಾರಿಪುರ ತಾಲೂಕಿನ ಜನರನ್ನು ಎಂದಿಗೂ ಮರೆಯಲಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ನುಡಿದರು.
ಅರಮನೆ ಮೈದಾನದ ಆವರಣದಲ್ಲಿ ಗುರುವಾರ ಆಯೋಜನೆಯಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. “ನನಗೆ 60 ವರ್ಷ ತುಂಬಿದಾಗ ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಉಪಸ್ಥಿತಿಯಲ್ಲಿ ನಾನಾ ಮಠಾಧೀಶರ ಸಮ್ಮುಖದಲ್ಲಿ ಇದೇ ಅರಮನೆ ಮೈದಾನದಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಜೀವನದಲ್ಲಿ ಮರೆಯುವುದಿಲ್ಲ. ಇದೀಗ ಅಂತಹುದೇ ಅಪೂರ್ವ ಸಮಾರಂಭವೊಂದಕ್ಕೆ 78ನೇ ಹುಟ್ಟುಹಬ್ಬ ಸಾಕ್ಷಿಯಾಗಿದೆ. ಕೇಂದ್ರ ಸಚಿವರಾದ ರಾಜನಾಥ ಸಿಂಗ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಳ್ಳೆಯ ಮಾತುಗಳನ್ನಾಡಿರುವ ಈ ಸಮಾರಂಭವನ್ನೂ ಎಂದೂ ಮರೆಯಲಾರೆ.
ಶಿಕಾರಿಪುರ ಪುರಸಭೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಬಳಿಕ, ಅಲ್ಲಿನ ಜನ ನನ್ನನ್ನು 7 ಬಾರಿ ಶಾಸಕರನ್ನಾಗಿ ಆರಿಸಿ ಕಳುಹಿಸಿದ್ದಾರೆ. ನನ್ನ ಜೀವನದಲ್ಲಿ ಶಿಕಾರಿಪುರ ತಾಲೂಕಿನ ಜನರನ್ನು ಮರೆಯಲಾರೆ ಎಂದು ಭಾವುಕರಾದರು.
ಮುಂದಿನ ಮೂರು ಕಾಲು ವರ್ಷದಲ್ಲಿ ಎಲ್ಲರ ಸಹಕಾರದೊಂದಿಗೆ ಕರ್ನಾಟಕವನ್ನು ಮಾದರಿ ರಾಜ್ಯ ಮಾಡಲು ಶ್ರಮಿಸುತ್ತೇನೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ, ನೀರಾವರಿ ಸೌಲಭ್ಯ ಕಲ್ಪಿಸಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅನ್ನದಾತನಿಗೆ ಅಗತ್ಯವಾದ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದಿರುವುದು ಶೋಭೆ ತರುವಂತಹದ್ದಲ್ಲ. ನನ್ನ ಪ್ರಯತ್ನಗಳಿಗೆ ಸಿದ್ದರಾಮಯ್ಯ ಅವರ ಬೆಂಬಲ, ಸಹಕಾರವಿರಲಿದೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.
ಅನಂತ ಕುಮಾರ್ ಬದುಕಿರಬೇಕಿತ್ತು:
“ಇಂದು ಅನಂತ ಕುಮಾರ್ ಅವರು ಬದುಕಿರಬೇಕಿತ್ತು. ಅವರೊಂದಿಗೆ ನಾನು ರಾಜ್ಯ ಸುತ್ತಾಡಿದ್ದನ್ನು ನೆನಪಿಸಿಕೊಂಡರೆ ಆಶ್ಚರ್ಯವಾಗುತ್ತದೆ. ಒಂದೆರಡು ಶಾಸಕರಿದ್ದ ಪಕ್ಷವನ್ನು ಇಷ್ಟು ಎತ್ತರಕ್ಕೆ ಬಳಸುವಲ್ಲಿ ಅನಂತ್ ಕುಮಾರ್ ಅವರ ಕೊಡುಗೆಯೂ ಅಪಾರವಾಗಿದೆ’ ಎಂದು ಹೇಳಿದರು.
ಪಂಡಿತ್ ದೀನದಯಾಳ್ ಉಪಾಧ್ಯಾಯ, ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಇತರ ನಾಯಕರ ಪ್ರಭಾವಕ್ಕೆ ಒಳಗಾಗಿ ಜನಸೇವೆಗೆ ಮುಂದಾದೆ. ಅಧಿಕಾರ ಇರುವುದು ಜನಸೇವೆಗೆ. ಚುನಾವಣಾ ರಾಜಕೀಯದಲ್ಲಿ ಪಕ್ಷದ ಒಳಗೂ, ಹೊರಗೂ ವೈಮನಸ್ಸು ತಲೆದೋರಬಹುದು. ಅದನ್ನೆಲ್ಲಾ ಮರೆತು ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ಪಕ್ಷದ ರಾಷ್ಟ್ರೀಯ ನಾಯಕರ ಅಪೇಕ್ಷೆಯಂತೆ ಪಕ್ಷವನ್ನು ಬಲಪಡಿಸುವ ಕೆಲಸ ಆಗಬೇಕಿದೆ. ಆಡಳಿತ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡಿ ಜನರಿಗೆ ಸೇವೆ ಸಲ್ಲಿಸೋಣ ಎಂದು ಆಶಿಸಿ, ಮಾತಿಗೆ ವಿರಾಮ ಹೇಳಿದರು.
ಬಿಎಸ್‌ವೈಗೆ ಸನ್ಮಾನ:
ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸಮ್ಮುಖದಲ್ಲಿ ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹೊದಿಸಿ, ಶ್ರೀಗಂಧದ ಹಾರ ಹಾಕಿ, ಬೆಳ್ಳಿ ನೇಗಿಲು ನೀಡಿ ಅಭಿನಂದನೆ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.