ಟ್ಯಾಕ್ಸ್ ಸೇವಿಂಗ್ ಡಿಡಕ್ಷನ್ 2.5 ಲಕ್ಷ ರೂ.ಗಳಿಗೆ ಏರಿಕೆ?
ಫೆ.1ರ ಬಜೆಟಲ್ಲಿ ತೆರಿಗೆ ಪಾವತಿದಾರರಿಗೆ ಸಿಹಿ ಸಾಧ್ಯತೆ? ಏಳು ವರ್ಷಗಳ ಹಿಂದೆ ಪರಿಷ್ಕರಣೆಗೊಂಡಿದ್ದ ಮೊತ್ತ
Team Udayavani, Jan 19, 2022, 11:15 AM IST
ನವದೆಹಲಿ: ಆದಾಯ ತೆರಿಗೆ ಕಾಯ್ದೆಯ 80 ಸಿ ನಿಯಮದ ಅನ್ವಯ ತೆರಿಗೆ ಉಳಿಸುವ ಮೊತ್ತ (ಟ್ಯಾಕ್ಸ್ ಸೇವಿಂಗ್ ಡಿಡಕ್ಷನ್) ವನ್ನು ಹಾಲಿ 1.5 ಲಕ್ಷ ರೂ.ಗಳಿಂದ 2.5 ಲಕ್ಷ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆ ಇದೆ. ಈ ಬಗ್ಗೆ ಫೆ.1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳು ಇವೆ.
2014-15ನೇ ಸಾಲಿನಲ್ಲಿ ಅಂದರೆ ಏಳು ವರ್ಷಗಳ ಹಿಂದೆ ಈ ಮೊತ್ತ ಪರಿಷ್ಕರಿಸಲಾಗಿತ್ತು. ರಿಟರ್ನ್ಸ್ ಸಲ್ಲಿಕೆ ಮಾಡುವವರು, ಅದನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಡುತ್ತಿದ್ದರು. ಇದೀಗ ವೇತನ ಪ್ರಮಾಣ ಹೆಚ್ಚಾಗಿರುವುದರಿಂದ, ಖರ್ಚುಗಳು ಹೆಚ್ಚಾಗಿದೆ.
ಆದರೆ, 80 ಸಿಯ ಅನ್ವಯ ಲಾಭದ ಪ್ರಮಾಣ ಹೆಚ್ಚಾಗಿಲ್ಲ. ಈ ಅಂಶ ಪರಿಗಣಿಸಿ ಕೇಂದ್ರ ಸರ್ಕಾರ ತೆರಿಗೆ ಉಳಿಸುವ ಮೊತ್ತದ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
ಮತ್ತೊಂದಡೆ, ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಅನುಕೂಲವಾಗುವಂತೆ ತೆರಿಗೆ ಸ್ಲಾéಬ್‌ಗಳು ಮತ್ತು ಅವುಗಳ ಪ್ರಮಾಣದಲ್ಲಿ ಬದಲಾವಣೆ ಸಾಧ್ಯತೆ ಇಲ್ಲ. ಆದರೆ, 1961ರ ಆದಾಯ ತೆರಿಗೆ ಕಾಯ್ದೆಯ 80 ಸಿ ಅನ್ವಯ ಹೆಚ್ಚಿನ ವಿನಾಯಿತಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಅರ್ನೆಸ್ಟ್ ಯಂಗ್ ಇಂಡಿಯಾ ಅಭಿಪ್ರಾಯಪಟ್ಟಿದೆ. ಕೊರೊನಾ ಸೋಂಕಿನಿಂದ ಉಂಟಾಗಿರುವ ಪ್ರತಿಕೂಲ ಪರಿಸ್ಥಿತಿ ಇಂಥ ಸಂದರ್ಭ ತಂದಿಟ್ಟಿದೆ ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.