Budget: ಬೀದರ್ ಕೃಷ್ಣಮೃಗ ಸಂರಕ್ಷಣಾ ಪ್ರದೇಶ, ಹಾಸನ, ಕೊಡಗಿನಲ್ಲಿ ಆನೆ ಕಾರ್ಯಪಡೆ ರಚನೆ
Team Udayavani, Jul 7, 2023, 4:24 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ (ಜು.07) ಮಂಡಿಸಿರುವ 14ನೇ ಬಜೆಟ್ ನಲ್ಲಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಾಗಿರುವ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ 520 ಕಿಲೋ ಮೀಟರ್ ಗಳ ಬ್ಯಾರಿಕೇಡ್ ಗಳನ್ನು ನಿರ್ಮಿಸಲು ಘೋಷಿಸಿತ್ತು. ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೂ 312 ಕಿ.ಮೀನಷ್ಟು ಬ್ಯಾರಿಕೇಡ್ ನಿರ್ಮಿಸಲಾಗಿದ್ದು, ಬಾಕಿ ಉಳಿದಿರುವ ಬ್ಯಾರಿಕಡ್ ನಿರ್ಮಾಣ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.
ಈ ಕಾಮಗಾರಿ ಅನುಷ್ಠಾನಕ್ಕೆ 2023-24ರಲ್ಲಿ 120 ಕೋಟಿ ರೂ. ಮೀಸಲಿಡಲಾಗಿದೆ. ಮಾನವ-ಕಾಡಾನೆ ಸಂಘರ್ಷ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆಯನ್ನು ರಚಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಪಡೆಗಳನ್ನು ರಚಿಸಲಾಗುವುದು ಎಂದು ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.
ಮನುಷಗಯ. ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ, ಅನಾರೋಗ್ಯ ಪೀಡಿತ ಪ್ರಾಣಿಗಳ ರಕ್ಷಣೆ/ನಿರ್ವಹಣೆ ಮಾಡುತ್ತಿರುವ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಛನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು.
ಬೀದರ್ ಜಿಲ್ಲೆಯಲ್ಲಿ ಕೃಷ್ಣಮೃಗಗಳು(Blackbuck) ಹೆಚ್ಚಾಗಿ ಕಂಡು ಬರುವುದರಿಂದ, ಇವುಗಳ ಸಂರಕ್ಷಣೆಗಾಗಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನು ಘೋಷಿಸಲಾಗುವುದು. ಈ ಸಂರಕ್ಷಣಾ ಮೀಸಲು ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗಾಗಿ ಎರಡು ಕೋಟಿ ರೂ. ಮೀಸಲಿಡಲಾಗಿದೆ.
ಕರ್ನಾಟಕ ರಾಜ್ಯದ ಬಯಲುಸೀಮೆ ಪ್ರದೇಶದ 17 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಕಡಿಮೆ ಅರಣ್ಯಪ್ರದೇಶವಿದೆ. ಆ ನಿಟ್ಟಿನಲ್ಲಿ ಈ ಜಿಲ್ಲೆಗಳಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಹಸಿರೀಕಣ ಕಾರ್ಯಕ್ರಮವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಡಿಕಾರ್ಬೊನೈಸೇಷನ್ನಿನ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮತ್ತು ಹಸಿರು ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯದಲ್ಲಿನ ಸಂಸ್ಥೆಗಳಿಂದ ಸ್ವಯಂಪ್ರೇರಿತವಾಗಿ Green House Gases ಹೊರಸೂಸುವಿಕೆಯ ಬಹಿರಂಗಪಡಿಸುವ ಯೋಜನೆಯನ್ನು ಪ್ರಾರಂಭಿಸಲಾಗುವುದು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.