Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ
ಶನಿವಾರಸಂತೆಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಪೂಜೆ
Team Udayavani, Sep 12, 2024, 1:37 AM IST
ಮಡಿಕೇರಿ: ನಗರದಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ವತಿಯಿಂದ ಶನಿವಾರಸಂತೆಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಘಟಕವಿದ್ದು, ಕುಶಾಲನಗರದಲ್ಲಿ ನೂತನ ಬಸ್ ಘಟಕ ನಿರ್ಮಾಣವಾಗುತ್ತಿದೆ. ಈ ಎರಡು ಘಟಕಗಳಿಗೆ ವಿಭಾಗೀಯ ಕಚೇರಿ ಆರಂಭಿಸಲು ಕಷ್ಟಸಾಧ್ಯ. ಆದ್ದರಿಂದ ಹತ್ತಿರದ ರಾಮನಾಥಪುರ ಸಹಿತ ಒಟ್ಟು 4 ಘಟಕಗಳನ್ನು ಒಳಗೊಂಡು ಒಂದು ವಿಭಾಗೀಯ ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಆದ್ಯತೆಯಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.
ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಿದ ಕಾರಣ 4,500 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. ಜತೆಗೆ ಚಾಲಕ, ನಿರ್ವಾಹಕ ಸಹಿತ 9 ಸಾವಿರ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಶಾಸಕ ಡಾ| ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.