ಉಪಚುನಾವಣೆ 2019; 13 ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿದ್ದ ಅನರ್ಹ ಶಾಸಕರಲ್ಲಿ ಇಬ್ಬರಿಗೆ ಸೋಲು
Team Udayavani, Dec 9, 2019, 12:27 PM IST
ಬೆಂಗಳೂರು: ಹದಿನೈದು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 12ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಇದರಲ್ಲಿ 13 ಅನರ್ಹ ಶಾಸಕರ ಪೈಕಿ ಇಬ್ಬರು ಮಾತ್ರ ಪರಾಜಯಗೊಂಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಹುಣಸೂರು ಮತ್ತು ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲನ್ನನುಭವಿಸಿದ್ದಾರೆ.
ಹುಣಸೂರು ಉಪಚುನಾವಣೆಯ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಎಚ್.ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನ ಎಚ್.ಪಿ.ಮಂಜುನಾಥ್ 39,709 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂಟಿಬಿ ನಾಗರಾಜ್ ಅವರಿಗಿಂತ ಹತ್ತು ಸಾವಿರ ಮತಗಳ ಮುನ್ನಡೆ ಸಾಧಿಸಿದ್ದು, ಗೆಲುವಿನ ಹೊಸ್ತಿಲಿನಲ್ಲಿದ್ದಾರೆ.
1)ಕೆಆರ್ ಪುರದಲ್ಲಿ ಬೈರತಿ ಬಸವರಾಜ್, 2)ಯಶವಂತಪುರದಲ್ಲಿ ಎಸ್ ಟಿ ಸೋಮಶೇಖರ್, 3)ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್, 4)ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ, 5)ಅಥಣಿಯಲ್ಲಿ ಮಹೇಶ್ ಕುಮಟಳ್ಳಿ, 6)ಕಾಗವಾಡದಲ್ಲಿ ಶ್ರೀಮಂತ ಪಾಟೀಲ್, 7)ಹಿರೇಕೆರೂರಿನಲ್ಲಿ ಬಿಸಿ ಪಾಟೀಲ್, 8)ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್, 9)ವಿಜಯನಗರದಲ್ಲಿ ಆನಂದ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಇವರೆಲ್ಲಾ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು.
10) ಮಹಾಲಕ್ಷ್ಮೀ ಲೇಔಟ್ ನಲ್ಲಿ ಕೆ.ಗೋಪಾಲಯ್ಯ, 11) ಕೆಆರ್ ಪೇಟೆಯಲ್ಲಿ ನಾರಾಯಣಗೌಡ ಗೆಲುವು ಸಾಧಿಸಿದ್ದು, ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. 12)ರಾಣೆಬೆನ್ನೂರಿನಲ್ಲಿ ಬಿಜೆಪಿಯ ಅರುಣ್ ಪೂಜಾರ್ ಜಯ ಸಾಧಿಸಿದ್ದಾರೆ.
ಬಿಜೆಪಿ ಸೋತ ಕ್ಷೇತ್ರಗಳು ಯಾವುವು:
ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಸೋಲನ್ನನುಭವಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಕಾಂಗ್ರೆಸ್ ನ ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸೋಲಿನತ್ತ ಮುಖಮಾಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಎಂಟಿಬಿ ಗೆದ್ದಿದ್ದರು. ಈ ಬಾರಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವಿನತ್ತ ಹೆಜ್ಜೆಹಾಕಿದ್ದಾರೆ. ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಸರವಣ ಸೋಲನ್ನನುಭವಿಸಿದ್ದು, ಕಾಂಗ್ರೆಸ್ ನ ರಿಜ್ವಾನ್ ಜಯ ಸಾಧಿಸಿದ್ದಾರೆ. ಕಳೆದ ಬಾರಿ ರೋಷನ್ ಬೇಗ್ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.