By-election;ವಿಧಾನ ಪರಿಷತ್ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು
Team Udayavani, Oct 19, 2024, 6:50 AM IST
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿ ಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅ.21ರಂದು ನಡೆಯಲಿದ್ದು, ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ.
ದ.ಕ. ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು, 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ.
ದ.ಕ. ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‌ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್ ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್ ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಈ ಪೈಕಿ ದ.ಕ. ಜಿಲ್ಲೆಯ 234 ಮತಗಟ್ಟೆಯಲ್ಲಿ 3,552 ( ಪುರುಷರು- 1,710 ಮಹಿಳೆಯರು – 1,842 ) ಮತದಾರರು ಹಾಗೂ ಉಡುಪಿ ಜಿಲ್ಲೆಯ 158 ಮತಗಟ್ಟೆಯಲ್ಲಿ 2,480 ( ಪುರುಷರು – 1,195 , ಮಹಿಳೆಯರು – 1,285 ) ಮತದಾರರಾಗಿರುತ್ತಾರೆ. ಒಟ್ಟಾರೆ ಎರಡು ಜಿಲ್ಲೆಗಳ 392 ಮತಗಟ್ಟೆಗಳಲ್ಲಿ 6,032 ಮತದಾರರು ಮತ ಚಲಾಯಿಸಲಿದ್ದಾರೆ.
ತಾಲೂಕುವಾರು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಧಿ ಕ 49 ಮತಗಟ್ಟೆಗಳಿವೆ. ಬಂಟ್ವಾಳ ತಾಲೂಕಿನಲ್ಲಿ ಅತ್ಯ ಧಿಕ 793 ಮತದಾರರಿದ್ದಾರೆ. ಹೆಬ್ರಿ ತಾಲೂಕಿನಲ್ಲಿ ಅತಿ ಕಡಿಮೆ 9 ಮತಗಟ್ಟೆಗಳು ಹಾಗೂ 122 ಮತದಾರರಿದ್ದಾರೆ.
ಅತಿ ಕಡಿಮೆ ಮತದಾರರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಡಪ್ಪಾಡಿ ಪಂಚಾಯತ್ ಹಾಗೂ ಕೊಣಾಜೆ ಪಂಚಾಯತ್ ಮತಗಟ್ಟೆಗಳಲ್ಲಿ (ತಲಾ 5 ಮತದಾರರು) ಹಾಗೂ ಉಡುಪಿ ಜಿಲ್ಲೆಯ ಹಳ್ಳಿಹೊಳೆ ಮತ್ತು ಎಡಮೊಗೆ ಗ್ರಾಮ ಪಂಚಾಯತ್ ಮತಗಟ್ಟೆಗಳಲ್ಲಿ (ತಲಾ 6 ಮತದಾರರು) ಇದ್ದಾರೆ.
ಅತ್ಯ ಧಿಕ ಮತದಾರರು ಮಂಗಳೂರು ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ (65) ಹಾಗೂ ಉಡುಪಿ ಜಿಲ್ಲೆಯ ಶಿರೂರು ಗ್ರಾಮ ಪಂಚಾಯತ್‌ನಲ್ಲಿ (44) ಮತ ಚಲಾಯಿಸಲಿದ್ದಾರೆ. ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿ ಕಾರಿ, ಸಹಾಯಕ ಮತಗಟ್ಟೆ ಅ ಧಿಕಾರಿ, ಮೈಕ್ರೋ ಆಬ್ಸರ್ವರ್‌ಗಳನ್ನು ನೇಮಿಸಲಾಗಿದೆ.
ಮತ ಎಣಿಕೆ ಮಂಗಳೂರು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅ.24ರಂದು ನಡೆಯಲಿದೆ.
ಚುನಾವಣೆ ಕಣದಲ್ಲಿ ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಸ್ಪರ್ಧಿಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.