By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Team Udayavani, Nov 9, 2024, 1:48 AM IST
ರಾಮನಗರ: ಕೇವಲ ಒಬ್ಬ ಯುವಕನನ್ನು ಕಟ್ಟಿ ಹಾಕಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, 15ಕ್ಕೂ ಸಚಿವರು, 30ಕ್ಕೂ ಹೆಚ್ಚು ಶಾಸಕರು ದಂಡೆತ್ತಿ ಬಂದಿದ್ದಾರೆ. ಆದರೆ ಈ ಕ್ಷೇತ್ರದ ಜನರ ಶ್ರೀರಕ್ಷೆ ನಮ್ಮ ಮೇಲಿರುವ ವರೆಗೆ ನಮಗೆ ಭಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದರು.
ಚನ್ನಪಟ್ಟಣದದಲ್ಲಿ ಪುತ್ರ ನಿಖಿಲ್ ಪರವಾಗಿ ಪ್ರಚಾರ ನಡೆಸಿ ಮಾತನಾಡಿ, ಯೋಗೇಶ್ವರ್ ಅವರು ಜೆಡಿಎಸ್ ಟಿಕೆಟ್ ಕೊಟ್ಟರೂ ನಿಲ್ಲುತ್ತೇನೆ ಎಂದಿದ್ದರು. ನಾವು ಕೊಡುತ್ತೇವೆ ಎನ್ನುತ್ತಿದ್ದಂತೆ ಬಿಜೆಪಿ ಟಿಕೆಟ್ ಬೇಕು ಎಂದರೂ ಒಪ್ಪಿಕೊಂಡೆವು. ಆದರೆ ಹೇಳದೇ ಕೇಳದೆ ಕಾಂಗ್ರೆಸ್ಗೆ ಜಿಗಿದರು ಎಂದರು.
ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳು ಬಂದರೆ ಇಲ್ಲಿ ನಮಗೂ ಪಾಲು ಕೊಡಿ ಎಂದು ಬೇಡಿಕೆ ಇಡುತ್ತಿದ್ದಾರೆ. ರಾಜ್ಯದಲ್ಲಿ ಕಾರ್ಖಾನೆಗಳ ಸ್ಥಾಪನೆ ಆಶಾದಾಯಕವಾಗಿಲ್ಲ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.