ಕೈ ಪಟ್ಟಿಗೆ ಬಿಡುಗಡೆ ಭಾಗ್ಯ
ಆರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕೆಲವೆಡೆ ಪೈಪೋಟಿಯಿಂದ ಆಗಿತ್ತು ವಿಳಂಬ
Team Udayavani, Nov 17, 2019, 6:45 AM IST
ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಳೆದೂ ತೂಗಿ ಕಾಂಗ್ರೆಸ್ ಆರು ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಮೇಲಾಗಿರುವುದು ಕಂಡು ಬಂದಿದೆ ಎಂದು ವಿಶ್ಲೇಷಿಸಲಾಗಿದೆ. ಇನ್ನೂ ಒಂದು ಕ್ಷೇತ್ರದ ಪಟ್ಟಿ ಬಿಡುಗಡೆ ಬಾಕಿ ಉಳಿದಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರು ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಹೈಕಮಾಂಡ್ ಒಪ್ಪಿಗೆಗೆ ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಥಣಿಗೆ ಗಜಾನನ ಬಾಲಚಂದ್ರ ಮಂಗಸೂಳಿ, ಕಾಗವಾಡಕ್ಕೆ ರಾಜು ಕಾಗೆ, ಗೋಕಾಕ್‌ಗೆ ಲಖನ್ ಜಾರಕಿಹೊಳಿ, ವಿಜಯನಗರ (ಹೊಸಪೇಟೆ)ಕ್ಕೆ ವೆಂಕಟರಾವ್ ಘೋರ್ಪಡೆ, ಶಿವಾಜಿನಗರಕ್ಕೆ ರಿಜ್ವಾನ್ ಅರ್ಷದ್ ಮತ್ತು ಕೆ.ಆರ್. ಪೇಟೆಗೆ ಕೆ.ಬಿ. ಚಂದ್ರ ಶೇಖರ್ ಅವರ ಹೆಸರನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ (ಚುನಾವಣೆ) ಮುಕುಲ್ ವಾಸ್ನಿಕ್ ಅವರು ಈ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಗೋಕಾಕ್‌ನಲ್ಲಿ ಸತೀಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೇ ಟಿಕೆಟ್ ನೀಡಲಾಗಿದೆ. ಇಲ್ಲಿ ಬಿಜೆಪಿಯ ಅಸಮಾಧಾನಿತ ಅಶೋಕ್ ಪೂಜಾರಿಗೆ ಟಿಕೆಟ್ ಕೊಡಿಸಬೇಕು ಎಂಬುದು ಡಿ.ಕೆ. ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಟಾಳ್ಕರ್ ಅವರ ಬೇಡಿಕೆಯಾಗಿತ್ತು.
ಆದರೆ ಹೈಕಮಾಂಡ್ ಸಿದ್ದರಾಮಯ್ಯ ಅವರ ಶಿಫಾರಸಿನಂತೆ ಲಖನ್ ಜಾರಕಿಹೊಳಿಗೇ ಟಿಕೆಟ್ ನೀಡಿದೆ. ಇನ್ನು ಶಿವಾಜಿನಗರದಲ್ಲೂ ಬಲಿಷ್ಠ ಅಭ್ಯರ್ಥಿ ಹಾಕಬೇಕು ಎಂದು ಸ್ವತಃ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರೇ ಮುಂದಾಗಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದರು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪದ ಕಾರಣ, ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಗವಾಡ ಕ್ಷೇತ್ರದಲ್ಲಿ ಮಾತ್ರ ಬಿಜೆಪಿಯಿಂದ ವಲಸೆ ಬಂದ ರಾಜು ಕಾಗೆ ಅವರಿಗೆ ಟಿಕೆಟ್ ನೀಡಲಾಗಿದೆ. ಇವರನ್ನು ಡಿ.ಕೆ. ಶಿವಕುಮಾರ್ ಅವರೇ ಕಾಂಗ್ರೆಸ್‌ಗೆ ಕರೆತಂದಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ರಾಜು ಕಾಗೆ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕೆ.ಆರ್. ಪೇಟೆಯಲ್ಲಿ ನಿರೀಕ್ಷೆಯಂತೆಯೇ ಕೆ.ಬಿ. ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ.
ತಡವಾಗಿದ್ದು ಏಕೆ?
ಶಿವಾಜಿನಗರ, ಗೋಕಾಕ್ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೈಪೋಟಿ ಮತ್ತು ಬೇರೆ ಬೇರೆ ಲೆಕ್ಕಾಚಾರ ಇದ್ದುದರಿಂದ ಪಟ್ಟಿ ಬಿಡುಗಡೆಗೆ ತಡವಾಗಿತ್ತು ಎನ್ನಲಾಗುತ್ತಿದೆ. ಗೋಕಾಕ್ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಬದಲು ಅಶೋಕ್ ಪೂಜಾರಿ ಅವರಿಗೆ ಟಿಕೆಟ್ ನೀಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಒತ್ತಡ ಹೇರಿದ್ದರು. ಆದರೆ ಲಖನ್ ಜಾರಕಿಹೊಳಿಗೆ ಟಿಕೆಟ್ ಅಂತಿಮಗೊಂಡಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿ ಪ್ರಚಾರವನ್ನೂ ಆರಂಭಿಸಿದ್ದರು. ಇದು ಹೈಕಮಾಂಡ್‌ಗೆ ತಲೆನೋವು ತಂದಿತ್ತು.
ಯಶವಂತಪುರಕ್ಕೆ ಇಲ್ಲ
ಎರಡನೇ ಪಟ್ಟಿ ಬಿಡುಗಡೆ ಮಾಡಿದರೂ ಯಶವಂತಪುರ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಅಖೈರು ಮಾಡಿಲ್ಲ. ಇಲ್ಲಿ ಕಾಂಗ್ರೆಸ್‌ನಲ್ಲಿದ್ದ ಎಸ್.ಟಿ. ಸೋಮಶೇಖರ್ ಬಿಜೆಪಿಗೆ ಹೋಗಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಆಪ್ತ ರಾಜಕುಮಾರ್ ನಾಯ್ಡು ಅಥವಾ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯಾಕೃಷ್ಣ ನಡುವೆ ಪೈಪೋಟಿ ಇದೆ. ಒಕ್ಕಲಿಗ ಮುಖಂಡರು ಪ್ರಿಯಾಕೃಷ್ಣ ಅವರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಇದಕ್ಕೆ ಪ್ರಿಯಾಕೃಷ್ಣ ತಂದೆ ಕೃಷ್ಣಪ್ಪ ಒಪ್ಪುತ್ತಿಲ್ಲ. ಹೀಗಾಗಿ ಈ ಕ್ಷೇತ್ರವೊಂದನ್ನು ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ.
ಉಸ್ತುವಾರಿಗಳ ನೇಮಕ
ಉಪ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನಿಯೋಜಿಸಿದ್ದು, ಶಿವಾಜಿನಗರಕ್ಕೆ ಮಾಜಿ ಸಚಿವ ಯು.ಟಿ. ಖಾದರ್, ಮಹಾಲಕ್ಷ್ಮಿ ಲೇ ಔಟ್‌ಗೆ ಎಚ್.ಎಂ. ರೇವಣ್ಣ, ಗೋಕಾಕ್‌ಗೆ ಸತೀಶ ಜಾರಕಿಹೊಳಿ ಅವರಿಗೆ ಹೊಣೆ ನೀಡಲಾಗಿದೆ. ಉಳಿದಂತೆ ಯಶವಂತಪುರ- ಎಂ.ಕೃಷ್ಣಪ್ಪ, ಹುಣಸೂರು-ಡಾ.ಎಚ್.ಸಿ.ಮಹದೇವಪ್ಪ, ಕೆ.ಆರ್.ಪುರ- ಚೆಲುವರಾಯಸ್ವಾಮಿ, ಹೊಸಕೋಟೆ- ಕೃಷ್ಣ ಬೈರೇಗೌಡ, ಕೆ.ಆರ್. ಪೇಟೆ- ಕೆ.ಜೆ.ಜಾರ್ಜ್, ಕಾಗವಾಡ- ಈಶ್ವರ್ ಖಂಡ್ರೆ, ಯಲ್ಲಾಪುರ- ಆರ್.ವಿ.ದೇಶಪಾಂಡೆ, ಹಿರೆಕೇರೂರು- ಎಚ್.ಕೆ.ಪಾಟೀಲ್, ರಾಣೆ ಬೆನ್ನೂರು- ಎಸ್.ಆರ್. ಪಾಟೀಲ್, ವಿಜಯನಗರ- ಬಸವರಾಜ ರಾಯರೆಡ್ಡಿ, ಚಿಕ್ಕಬಳ್ಳಾಪುರ- ಶಿವಶಂಕರರೆಡ್ಡಿ, ಅಥಣಿ-ಎಂ.ಬಿ.ಪಾಟೀಲ್. ಪ್ರತಿ ಕ್ಷೇತ್ರಕ್ಕೆ ಮೇಲ್ಕಂಡ ನಾಯಕರ ನೇತೃತ್ವದಲ್ಲಿ 19ರಿಂದ 20 ಮಂದಿ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು ಮತ್ತು ಮಾಜಿ ಶಾಸಕ ಮತ್ತು ಸಂಸದರನ್ನು ಒಳಗೊಂಡ ತಂಡವನ್ನು ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.