By Election: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರದಲ್ಲಿ ಕಾವೇರಿದ ಪ್ರಚಾರ
ಶಿಗ್ಗಾವಿಯಲ್ಲಿ ಸಿದ್ದರಾಮಯ್ಯ, ಬೊಮ್ಮಾಯಿ ಮತಬೇಟೆ, ಸಂಡೂರಿನಲ್ಲಿ ವಿಜಯೇಂದ್ರ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ರೇವತಿ ನಿಖಿಲ್ ಪ್ರಚಾರ
Team Udayavani, Nov 5, 2024, 6:35 AM IST
ಬೆಂಗಳೂರು: ರಾಜ್ಯದ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಚುನಾವಣೆ ಕಣ ರಂಗೇರಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಮೂರೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಸಚಿವ ಸಂಪುಟ ಸದಸ್ಯರು ಮೂರೂ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಸೋಮವಾರ ಶಿಗ್ಗಾಂವಿಯಲ್ಲಿ ಬಿರುಸಿನ ಪ್ರಚಾರ ನಡೆಸಿ, ನಾನು ಅಧಿಕಾರದಲ್ಲಿ ಮುಂದುವರಿಯಬೇಕಾದರೆ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲ್ಲಬೇಕೆಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಕಣದಲ್ಲಿದ್ದಾರೆ, ಅವರನ್ನು ಗೆಲ್ಲಿಸಬೇಕು ಎಂದರು.
ಡಿ.ಕೆ. ಶಿವಕುಮಾರ್ ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ನಡೆಸಿದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿ, ನಿನ್ನನ್ನು ನಂಬಿ ಮತನೀಡಿ ಮುಖ್ಯಮಂತ್ರಿ ಮಾಡಿದ ಚನ್ನಪಟ್ಟಣ ಜನರ ಕೈ ಬಿಟ್ಟು ಮಂಡ್ಯಕ್ಕೆ ಹೋಗಿರುವ ಕುಮಾರಣ್ಣ, ಈಗ ಮತ್ತೆ ಬಂದು ಮತ ಕೇಳುತ್ತಿದ್ದೀಯಲ್ಲಾ, ನಿನಗೆ ಮತ ಕೇಳುವ ಹಕ್ಕಿದೆಯಾ? ಎಂದು ಏಕವಚನದಲ್ಲಿ ವಾಗ್ಧಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಡೂರಲ್ಲಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಪರ ಶಿಗ್ಗಾವಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ, ಪುತ್ರ, ನಿಖಿಲ್ ಪರ ಪ್ರಚಾರ ನಡೆಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಅಧರ್ಮಿ ಕಾಂಗ್ರೆಸ್ಗೆ ಸೋಲು ಖಚಿತ, ನಿಖಿಲ್ ಅಭಿಮನ್ಯುವಲ್ಲ, ಅರ್ಜುನ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಕೃಷ್ಣನಂತೆ ನಿಖಿಲ್ ಜತೆ ನಿಂತಿದ್ದಾರೆ, ಈ ಚುನಾವಣೆ ಧರ್ಮ-ಅಧರ್ಮದ ಮಧ್ಯೆ ನಡೆಯುತ್ತಿರುವ ಯುದ್ಧವಾಗಿದೆ ಎಂದು ಹೇಳಿದರು. ಇನ್ನು ಕೇಂದ್ರ ಸಚಿವ ವಿ. ಸೋಮಣ್ಣ ಎನ್ಡಿಎ ಅಭ್ಯರ್ಥಿ ನಿಖೀಲ್ ಪರ ಪ್ರಚಾರ ನಡೆಸಿದರು. ನಿಖಿಲ್ ಪತ್ನಿ ರೇವತಿ ಅವರು ಚನ್ನಪಟ್ಟಣದ ವಿವಿಧ ಕಡೆ ತೆರಳಿ ಪತಿ ನಿಖಿಲ್ ಪರ ಮತಯಾಚಿಸಿದರು.
“ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಜತೆಗೆ ರಾಜ್ಯದ ವಿಪಕ್ಷದ ನಾಯಕರಾಗಿ ಕರ್ತವ್ಯ ನಿರ್ವಹಿಸುವಂತೆ ಸ್ಥಳೀಯ ಮತದಾರರು ಮನವಿ ಮಾಡಿದರೂ ಕೇಂದ್ರ ಸಚಿವರಾಗಬೇಕೆಂಬ ಆಸೆಯಿಂದ ಮಂಡ್ಯ ಸಂಸದ ಸ್ಥಾನದತ್ತ ಪಲಾಯನ ಮಾಡಿದ ವ್ಯಕ್ತಿ ಎಚ್.ಡಿ. ಕುಮಾರಸ್ವಾಮಿ. ಮಂಡ್ಯ ಮತ್ತು ರಾಮನಗರದಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟ ನಿಖಿಲ್ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಜನರು ಯಾವುದೇ ಕಾರಣಕ್ಕೂ ಒಪ್ಪಲಾರರು.” – ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.