By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
ನಾನು 2 ಬಾರಿ ಮುಖ್ಯಮಂತ್ರಿ ಆದನೆಂದು ಅವರಿಗೆ ಹೊಟ್ಟೆಯುರಿ, ಇದು ನಿಮ್ಮ ಪಾಳೆಗಾರಿಕೆಯಲ್ಲವೇ?
Team Udayavani, Nov 12, 2024, 7:40 AM IST
ರಾಮನಗರ: ಎಚ್.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ ಹೊಟ್ಟೆಹುರಿ. ನನಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಸರಕಾರವನ್ನು ಕಿತ್ತೂಗೆಯುತ್ತೇನೆ ಎನ್ನುತ್ತಿದ್ದಾರೆ. ದೇವೇಗೌಡರೇ ಇದು ನಿಮ್ಮ ಪಾಳೆಗಾರಿಕೆಯಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ಸೋಮವಾರ ಚನ್ನಪಟ್ಟಣ ಉಪಚುನಾವಣೆಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ನಾನು ಮತ್ತು ಜಾಲಪ್ಪ ಇಲ್ಲದೇ ಹೋಗಿದ್ದರೆ 1994ರಲ್ಲಿ ನೀವು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್. ಬೊಮ್ಮಾಯಿ ಸಿದ್ಧರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರ ನಿಂತೆವು. ನೀವು ಸುಳ್ಳು ಹೇಳಬಹುದು. ಆದರೆ ಇತಿಹಾಸವನ್ನು ತಿರುಚಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ವಿರುದ್ಧ ಹರಿಹಾಯ್ದರು.
ಮೊಮ್ಮಗನ ಗೆಲ್ಲಿಸಲು ಕಣ್ಣೀರು
ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ಮತ ಕೇಳುತ್ತಿದ್ದರಾ, ಎನ್ಡಿಎ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ಪ್ರಚಾರಕ್ಕೆ ಬರುತ್ತಿದ್ದರಾ ಎಂದು ಪ್ರಶ್ನಿಸಿದ ಸಿಎಂ, ಅತ್ಯಾಚಾರಕ್ಕೆ ಒಳಗಾದ ಹಾಸನದ ಹೆಣ್ಣುಮಕ್ಕಳ ಪರವಾಗಿ ಪಾಪ ದೇವೇಗೌಡರಿಗೆ ಕಣ್ಣೀರೇ ಬರಲಿಲ್ಲ ಎಂದು ಕುಟುಕಿದರು.
ನಾನು ಮತ್ತೆ ಜಾಲಪ್ಪನವರು ದೇವೇಗೌಡರ ಪರವಾಗಿ ನಿಲ್ಲದೇ ಹೋಗಿದ್ದರೆ ಗೌಡರು ಮುಖ್ಯಮಂತ್ರಿ ಆಗಲಿಕ್ಕೆ ಖಂಡಿತಾ ಸಾಧ್ಯವಿರಲಿಲ್ಲ.
ಇಂದು ಇದೇ ದೇವೇಗೌಡರು ಸಿದ್ದರಾಮಯ್ಯನ ಗರ್ವಭಂಗ ಮಾಡುತ್ತೀನಿ ಎಂದು ಶಪಥ ಮಾಡಿದ್ದಾರೆ. ಇದು ಪಾಳೇಗಾರಿಕೆ ಮಾತುಗಳಲ್ವಾ? #Assembybypolls #VoteForCongress pic.twitter.com/aBiMIjNDOP— Siddaramaiah (@siddaramaiah) November 11, 2024
ನೀವು ದೇಶ ಬಿಟ್ಟಿರಾ?
ಇಂದು ನಾವು ಮೋದಿ ಜತೆ ಮಾತನಾಡಿ ಮೇಕೆದಾಟಿಗೆ ಅನುಮತಿ ಕೊಡಿಸುತ್ತೇವೆ. ಅವರು ಡಿಎಂಕೆ ಒಪ್ಪಿಸಲಿ ಎಂದು ದೇವೇಗೌಡರು ಹೇಳುತ್ತಿದ್ದಾರೆ. 2019ರಲ್ಲಿ ಮೋದಿ ದೊಡ್ಡ ಸುಳ್ಳುಗಾರ ಎಂದು ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿಯಾದರೆ ನಾನು ದೇಶದಲ್ಲಿ ಇರುವುದೇ ಇಲ್ಲ ಎಂದಿದ್ದರು. ಮೋದಿ ಪ್ರಧಾನಿಯಾದ ಬಳಿಕ ಇವರು ದೇಶ ಬಿಟ್ಟರಾ? ಸಂದರ್ಭಕ್ಕೆ ತಕ್ಕಂತೆ ಬದಲಾಗುವುದು ಅವರಿಗೆ ರೂಢಿಗತವಾಗಿ ಬಂದಿದೆ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ಗ್ಯಾರಂಟಿಗೆ ನಾನೇ ಗ್ಯಾರಂಟಿ
ಉಪಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯ ಗ್ಯಾರಂಟಿ ನಿಲ್ಲಿಸುತ್ತಾರೆಂದು ದೇವೇಗೌಡರು ಹೇಳಿದ್ದಾರೆ. ಸಿದ್ದರಾಮಯ್ಯ ಕೊಟ್ಟಮಾತು ತಪ್ಪುವುದಿಲ್ಲ, 2028ರ ವರೆಗೂ ಗ್ಯಾರಂಟಿ ನಿಲ್ಲಿಸೋಲ್ಲ. ಅದಕ್ಕೆ ನಾನೇ ಗ್ಯಾರಂಟಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.