By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
ಕಾರ್ಯಕರ್ತರಿಗೆ ಭಾವನಾತ್ಮಕ ಪತ್ರ ಬರೆದ ಬಿಜೆಪಿ ರಾಜ್ಯಾಧ್ಯಕ್ಷ, ಕಾಂಗ್ರೆಸ್ ಭ್ರಷ್ಟ ಆಡಳಿತ ಕೊನೆಗಾಣಿಸಲು ಕಾರ್ಯಕರ್ತರಿಗೆ ಕರೆ
Team Udayavani, Nov 27, 2024, 6:29 AM IST
ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶದ ಪರಿಣಾಮ ನಮ್ಮ ಸಂಘಟನೆಯ ಮೇಲೆ ಯಾವುದೇ ಪ್ರಭಾವ ಬೀರಲು ಸಾಧ್ಯವಿಲ್ಲ. ಇದನ್ನು ಸಂಪೂರ್ಣವಾಗಿ ಉಪೇಕ್ಷಿಸೋಣ. ಪಕ್ಕದ ಮಹಾರಾಷ್ಟ್ರದ ಐತಿಹಾಸಿಕ ಮಹಾ ವಿಜಯವನ್ನು ನಾವು ಪ್ರೇರಣೆಯಾಗಿ ಸ್ವೀಕರಿಸಿ, ಒಂದು ದಿನವೂ ವ್ಯಯ ಮಾಡದೆ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಮಿತ್ರ ಪಕ್ಷ ಜೆಡಿಎಸ್ ಜತೆಗೆ ಮುಂದೆಯೂ ಸಹಕಾರದ ಹೆಜ್ಜೆಗಳನ್ನು ಇಡೋಣ. ನಮ್ಮ ಗುರಿ ಏನಿದ್ದರೂ ಸಂಘಟನೆ. ಜತೆಗೆ ಕಾಂಗ್ರೆಸ್ ಸರಕಾರದ ಬಹುಸಂಖ್ಯಾಕ ಜನರ ವಿರೋಧಿ ಧೋರಣೆ ಹಾಗೂ ಭ್ರಷ್ಟ ಆಡಳಿತವನ್ನು ಕೊನೆಗಾಣಿಸುವುದಕ್ಕಾಗಿ ಎಂಬ ಶಪಥ ಮಾಡೋಣ ಎಂದು ಹೇಳಿದ್ದಾರೆ.
ಸಂಘಟನೆಯ ಬಲವೃದ್ಧಿಗೊಳಿಸೋಣ
ಭಾರತೀಯ ಜನತಾ ಪಾರ್ಟಿಯ ಸುಭದ್ರ ಕೋಟೆಯ ನಡುವೆ ಬಿರುಕು ಮೂಡಿಸಲು ಯತ್ನಿಸುವ ಶಕ್ತಿಗಳನ್ನು ಮೆಟ್ಟಿನಿಂತು ನಮ್ಮೆಲ್ಲರ ಒಗ್ಗಟ್ಟಿನ ಮುಷ್ಠಿ ದೇಶ ಕಟ್ಟುವ ಶಕ್ತಿಯಾಗಲೆಂದು ನಿಮ್ಮೆಲ್ಲರಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಭಿನ್ನವಿಸಿಕೊಳ್ಳುತ್ತೇನೆ. ಈ ನಿಟ್ಟಿನಲ್ಲಿ ಹಿರಿಯರ ಆಶೀರ್ವಾದ, ಪ್ರಮುಖರ ಮಾರ್ಗದರ್ಶನ ಪಡೆದು ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಸಂಘಟನೆಯನ್ನು ಬಲವೃದ್ಧಿಗೊಳಿಸೋಣ. ಬದ್ಧತೆ-ಅಚಲತೆ, ಸಫಲತೆಯ ಪ್ರತೀಕ ಗುರಿಯಿಟ್ಟು – ಛಲ ಹೊತ್ತು, ಧೈರ್ಯ ಮಾರ್ಗದಲ್ಲಿ ಸಾಗೋಣ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ಇದೇ ಕಾಂಗ್ರೆಸ್ ಪಕ್ಷ ತನ್ನ ಹಿಂದಿನ ಆಡಳಿತಾವಧಿಯಲ್ಲಿ ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೆದ್ದ ಅನಂತರ ಸಾರ್ವತ್ರಿಕ ಚುನಾವಣೆಯಲ್ಲಿ ಏಕೆ ಧೂಳೀಪಟವಾಯಿತು ಎಂಬ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಬೇಕಾಗಿದೆ. ತಮ್ಮ ಭ್ರಷ್ಟತೆಯ ಕರಾಳ ಮುಖ ಒರೆಸಿಕೊಳ್ಳಲು ಈ ಫಲಿತಾಂಶ ಯಾವುದೇ ಕಾರಣಕ್ಕೂ ವಸ್ತ್ರವೂ ಆಗುವುದಿಲ್ಲ, ಅಸ್ತ್ರವೂ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸೋಲನ್ನು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಎರಡು ಕ್ಷೇತ್ರಗಳಲ್ಲಿ, ಮಿತ್ರ ಪಕ್ಷ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಪರಾಜಯಗೊಂಡಿರುವ ಕಾರಣದಿಂದ ನಾವ್ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್‌ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸ್ಸಂಶಯ. ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ, ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ ಎಂದು ವಿಜಯೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.