By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
ಇನ್ನು ಕೆಲವೇ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಸಂಡೂರಿನಲ್ಲಿ ಮಾಜಿ ಸಿಎಂ ಹೇಳಿಕೆ
Team Udayavani, Nov 8, 2024, 9:23 PM IST
ಸಂಡೂರು: ಮೂರು ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ಕಾವು ಬಿರುಸುಗೊಂಡಿದ್ದು ಕಣದಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳ ನಾಯಕರ ವಾಗ್ಯುದ್ಧ ತಾರಕಕ್ಕೇರಿದೆ. ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೊಗೆಯಬೇಕು. ಇನ್ನುಕೆಲವೇ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಜೈಲಿಗೂ ಹೋಗುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಪ್ರಚಾರದಲ್ಲಿ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಯಾಗುತ್ತಿದೆ. ಇನ್ನು ಸಿಬಿಐ, ಇಡಿ ತನಿಖೆಯಾಗಲಿದೆ ಎಂದರು. ಖಜಾನೆ ಲೂಟಿ ಹೊಡೆಯುತ್ತಿರುವ ಸಿದ್ದರಾಮಯ್ಯ ಸರಕಾರ ಹಗಲು ದರೋಡೆ ಮಾಡುತ್ತಿದ್ದು, ಜನ ಕೊಟ್ಟ ತೆರಿಗೆ ಹಣವನ್ನು ಕಾಂಗ್ರೆಸ್‌ನವರು ಲೂಟಿ ಮಾಡಿದ್ದಾರೆ. ಬಡವರ ಅಭಿವೃದ್ಧಿ ಕೆಲಸ ನಿಂತು ಹೋಗಿದೆ. ನೀರಾವರಿ ಯೋಜನೆಗಳು ಇಲ್ಲವಾಗಿವೆ. ನನ್ನ ಆಡಳಿತದಲ್ಲಿ ಮಹಿಳೆಯರಿಗೆ ಕೊಟ್ಟ ಭಾಗ್ಯಲಕ್ಷ್ಮೀ ಯೋಜನೆ ಕೂಡ ನಿಲ್ಲಿಸಿ ಹೆಣ್ಣು ಮಕ್ಕಳಿಗೆ ದ್ರೋಹ ಮಾಡಿದ್ದಾರೆ ಎಂದು ಟೀಕಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ 6 ಸಾವಿರ ಕೊಟ್ಟರೆ ರಾಜ್ಯದಿಂದ 4 ಸಾವಿರ ಕೊಡುತ್ತಿದ್ದೆ. ಆದರೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅದನ್ನೂ ನಿಲ್ಲಿಸಿದೆ. ಬಡವರು, ರೈತರು ಬದುಕುವುದು ದುಸ್ತರವಾಗಿದೆ. ವಿದ್ಯುತ್ ದರ ಹೆಚ್ಚಾಗಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲ ಎಂದರು.
ಇಡಿ, ಸಿಬಿಐಯಿಂದ ಸಿಎಂ ಬಂಧನ ಸಾಧ್ಯತೆ: ಜನಾರ್ದನ ರೆಡ್ಡಿ
ಬಳ್ಳಾರಿ: ಮುಡಾ ಪ್ರಕರಣಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನ. 23ರ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ. ಶೀಘ್ರವೇ ಇ.ಡಿ., ಸಿಬಿಐನಿಂದ ಬಂಧಿಸುವ ಸಾಧ್ಯತೆಯೂ ಇದೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಸುದ್ದಿಗಾರರ ಜತೆ ಹೇಳಿದರು.
ಸಿದ್ದರಾಮಯ್ಯ ಇ.ಡಿ., ಸಿಬಿಐಯಿಂದ ಬಂಧನವಾಗಿ ಜೈಲಿಗೆ ಹೋಗುವುದು ನೂರಕ್ಕೆ ನೂರರಷ್ಟು ಸತ್ಯ. ಆದ್ದರಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್‌ನಿಂದ ಆದೇಶ ಬಂದಿದ್ದು ನ. 23ರ ಅನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.