By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ
ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ
Team Udayavani, Nov 13, 2024, 6:25 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಯಾವುದೇ ನಾಮಪತ್ರ ಸಲ್ಲಿಸದೆ ಚುನಾವಣೆ ಬಹಿಷ್ಕಾರ ನಡೆಸಲು ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದಾರೆ.
ಐನೆಕಿದು ವಾರ್ಡ್ನಿಂದ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ನ. 12 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ನ. 12ರ ಸಂಜೆವರೆಗೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಕಸ್ತೂರಿ ರಂಗನ್ ವರದಿ ಕೈ ಬಿಡಬೇಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕೆಲಸಗಳನ್ನು ಗ್ರಾಮ ಪಂಚಾಯತ್ನಲ್ಲೇ ಮಾಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆ ಎನ್ನಲಾಗಿದೆ.
ಗ್ರಾಮದ ಪ್ರಮುಖರು ಕೆಲವು ದಿನಗಳ ಹಿಂದೆಯೇ ಐನೆಕಿದುವಿನಲ್ಲಿ ಸಭೆ ನಡೆಸಿ ಚುನಾವಣೆಗೆ ನಾಮಪತ್ರ ಹಾಕದೆ ಚುನಾವಣೆ ಬಹಿಷ್ಕರಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ಮತ ಚಲಾಯಿಸದೇ ಚುನಾವಣೆ ಬಹಿಷ್ಕಾರ ನಿರ್ಧಾರ ಕೈಗೊಳ್ಳುತ್ತಿರುವ ಘಟನೆಗಳು ನಡೆಯುತ್ತಿತ್ತು. ಇದೀಗ ಚುನಾವಣೆಗೆ ನಾಮಪತ್ರವನ್ನೇ ಸಲ್ಲಿಸದೇ ಚುನಾವಣೆಯನ್ನೇ ಬಹಿಷ್ಕರಿಸುವ ಮೂಲಕ ಗ್ರಾಮಸ್ಥರೇ ತಮ್ಮ ನಿರ್ಧಾರ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.