By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್ಡಿಎಗೆ ಯಾವುದು? ಕಾಂಗ್ರೆಸ್ಗೆ ಎಷ್ಟು?
ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಹೇಳುವುದೇನು?
Team Udayavani, Nov 20, 2024, 10:45 PM IST
ಬೆಂಗಳೂರು: ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಬುಧವಾರ ಹೊರಬಿದ್ದಿದ್ದು, ಮೈತ್ರಿಪಕ್ಷಗಳು ಮುನ್ನಡೆ ಸಾಧಿಸುವ ಸಾಧ್ಯತೆಗಳಿವೆ ಎಂದು ರಿಪಬ್ಲಿಕ್ ಟಿವಿ ಹಾಗೂ ಪಿ-ಮಾರ್ಕ್ ಸಮೀಕ್ಷಾ ವರದಿಗಳು ಹೇಳುತ್ತಿವೆ.
ಪಿ-ಮಾರ್ಕ್ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಪೈಕಿ 2ರಲ್ಲಿ ಎನ್ಡಿಎ ಹಾಗೂ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದಿದೆ ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆಗಳು ಹೆಚ್ಚಿದ್ದರೆ ಸಂಡೂರು ಕ್ಷೇತ್ರ ಕೈವಶವಾಗುವ ಸಾಧ್ಯತೆಗಳಿವೆ.
ತೀವ್ರ ಪೈಪೋಟಿ ಏರ್ಪಟ್ಟಿರುವ ಮೂರೂ ಕ್ಷೇತ್ರಗಳ ಪೈಕಿ ಕಾಂಗ್ರೆಸ್ಗೆ ಒಂದು ಕ್ಷೇತ್ರ, ಇನ್ನೆರಡರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪರ ಮತದಾರರು ಒಲವು ತೋರಿದ್ದಾರೆ. ಮತಗಟ್ಟೆ ಸಮೀಕ್ಷೆ ಪ್ರಕಾರ ಚನ್ನಪಟ್ಟಣದಲ್ಲಿ ಜೆಡಿಎಸ್, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿಗಳು ಉಲ್ಲೇಖಿಸಿವೆ.
ಲೋಕಸಭಾ ಚುನಾವಣೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ನಿಂದ ಸಿ.ಪಿ. ಯೋಗೇಶ್ವರ ನಡುವೆ ತೀವ್ರ ಪೈಪೋಟಿ ಇದೆ. ಶಿಗ್ಗಾವಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ನ ಪಠಾಣ್ ನಡುವೆ ಹಾಗೂ ಸಂಡೂರಿನಲ್ಲಿ ಸಂಸದ ಇ. ತುಕಾರಾಂ ಪತ್ನಿ ಅನ್ನಪೂರ್ಣ ಮತ್ತು ಬಿಜೆಪಿಯ ಬಂಗಾರು ಹನುಮಂತ ಮಧ್ಯೆ ಸ್ಪರ್ಧೆ ನಡೆದಿದೆ. ಅಂತಿಮ ಫಲಿತಾಂಶ ನ. 23ರಂದು ತೆರೆಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.