By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
ರಾಜಕೀಯ ಪ್ರೇರಿತ ಆರೋಪ ಮಾಡುವುದು ಬಿಡಿ, ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಮಾಜಿ ಸಿಎಂ
Team Udayavani, Nov 4, 2024, 10:52 PM IST
ಶಿಗ್ಗಾವಿ: ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ಏರ ತೊಡಗಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ಆರಂಭಿಸಿ ಸಭೆಯಲ್ಲಿ ಕ್ಷೇತ್ರದ ಈ ಹಿಂದಿನ ಶಾಸಕ, ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ್ದ ಟೀಕೆಗೆ ಎಕ್ಸ್ ಖಾತೆಯಲ್ಲಿ ಪ್ರತ್ಯುತ್ತರ ನೀಡಿದ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ “ನಾನು ಖಂಡಿತವಾಗಿಯೂ ಒಂದು ಮನೆ ಕಟ್ಟಿಲ್ಲ ಎಂಬುದು ಸತ್ಯ, ಆದರೆ ನನ್ನ ಕ್ಷೇತ್ರದಲ್ಲಿ ಐದು ಲಕ್ಷದ ಹನ್ನೆರಡುವರೆ ಸಾವಿರ ಮನೆ ಕಟ್ಟಿಸಿದ್ದೇನೆ. ನಿಮ್ಮದೇ ಸರ್ಕಾರವಿದೆ ಬೇಕಿದ್ದರೆ ದಾಖಲೆಗಳ ತೆಗೆದು ನೋಡಿ ಮುಖ್ಯಮಂತ್ರಿಯಾಗಿ ಈ ರೀತಿ ಹಸಿ ಸುಳ್ಳು ಹೇಳುವುದು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ” ಎಂದು ಬೊಮ್ಮಾಯಿ ಉತ್ತರ ನೀಡಿದ್ದಾರೆ.
ಅಸೂಯೆಯಿಂದ ರಾಜಕೀಯ ಪ್ರೇರಿತ ಆರೋಪ
ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ನಮ್ಮ ಸರ್ಕಾರ ಕೊರೊನಾ ಸಂಪೂರ್ಣ ನಿಯಂತ್ರಿಸಲು ಆಸ್ಪತ್ರೆ, ಬೆಡ್ ಗಳು, ಆಕ್ಸಿಜನ್ ಕಿಟ್ ಗಳು, ಔಷಧಿ, ಚುಚ್ಚುಮದ್ದುಗಳು ಮತ್ತು ಕೇವಲ ಎರಡು ಟೆಸ್ಟ್ ಲ್ಯಾಬ್ ಗಳಿದ್ದಿದ್ದನ್ನು ಅರವತ್ತು ಪ್ರಯೋಗಾಲಯಗಳ ಮಾಡಿ ಸಾವಿರಾರು ಜನರ ಪ್ರಾಣ ಉಳಿಸಿರುವುದು ಸಾರ್ವಜನಿಕರಿಗೆ ಗೊತ್ತಿರುವ ವಿಚಾರ ಈ ಯಶಸ್ಸು ಕಂಡು ಅಸೂಯೆಯಿಂದ ರಾಜಕೀಯ ಪ್ರೇರಿತ ಆರೋಪ ಮಾಡುವುದು ಬಿಡಿ, ನನ್ನ ಸ್ವಂತ ಮನೆಯನ್ನೇ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿ ಶಿಗ್ಗಾವಿ- ಸವಣೂರು ತಾಲೂಕಿನ ನೂರಾರು ಜನರಿಗೆ ಚಿಕಿತ್ಸೆ ಕೊಟ್ಡಿರುವುದನ್ನು ನಮ್ಮ ಜನ ಎಂದೂ ಮರೆಯುದಿಲ್ಲ ಎಂದು ಹೇಳಿದ್ದಾರೆ.
ಏತ ನೀರಾವರಿಗೆ ಬಿಎಸ್ವೈ ಹಣ ಕೊಟ್ಟಿದ್ದು:
ಸಿಎಂ ಆಗಿ ಜಲಸಂಪನ್ಮೂಲ ಸಚಿವನಾಗಿ ಶಿಗ್ಗಾವಿ ಏತ ನಿರಾವರಿಯನ್ನು 2008ಕ್ಕೆ ಪ್ರಾರಂಭಿಸಿ 2012 ರಲ್ಲಿ ಪೂರ್ಣ ಗೊಳಿಸಿದ್ದು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಣ ಬಿಡುಗಡೆ ಮಾಡಿದ್ದಾರೆ. ಸವಣೂರು ಏತ ನೀರಾವರಿ ನಿಮ್ಮ ಸರ್ಕಾರದಲ್ಲಿ ಮೂರು ವರ್ಷ ಪ್ರಾರಂಭ ಮಾಡದೇ ನಿಷ್ಕ್ರಿಯವಾಗಿತ್ತು. ನೀವು ಹಣಕಾಸು ಬಿಡುಗಡೆ ಮಾಡಿರುವ ದಾಖಲೆ ತೋರಿಸಿ ನಾವು 2020 ರಿಂದ 23 ರವರೆಗೂ ಆ ಯೋಜನೆ ಪೂರ್ಣಗೊಳಿಸಿದ್ದೇವೆ ಎಂದು ಟಾಂಗ್ ನೀಡಿದರು.
ದಾಖಲೆ ಸಹಿತ ಕಳಿಸುವೆ:
ನಾನು ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಏನೆಲ್ಲ ಅಭಿವೃದ್ಧಿ ಮಾಡಿದ್ದೇನೆ ಎಂದು ಬಹಿರಂಗ ಚರ್ಚೆಗೆ ನಾನು ಸಿದ್ದನಿದ್ದೇನೆ. ನನ್ನ ಅಭಿವೃದ್ದಿ ಶಿಕ್ಷಣ, ಅರೋಗ್ಯ, ರಸ್ತೆ, ಗ್ರಾಮೀಣ ಅಭಿವೃದ್ಧಿ ಕೆರೆ ತುಂಬಿಸುವುದು, ಸೇತುವೆಗಳು, 2 ಪಾಲಿಟೆಕ್ನಿಕ್, ಎರಡು ಐಟಿಐ, ಜಿಟಿಟಿಸಿ, ಟೆಕ್ಸ್ ಟೈಲ್ ಪಾರ್ಕ್, ಆಯುರ್ವೇದ ಕಾಲೇಜು ಇನ್ನೂ ಹಲವಾರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಿಮ್ಮ ಸರ್ಕಾರದ ಬಳಿ ದಾಖಲೆ ಇದ್ದಾವೆ. ಇಲ್ಲದಿದ್ದರೆ ನಿಮಗೆ ದಾಖಲೆ ಸಮೇತ ಕಳುಹಿಸಿ ಕೊಡಲು ಸಿದ್ದನಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯಗೆ ಪ್ರತ್ಯುತ್ತರ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.