By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
ಪ್ರಧಾನಿ ಮೋದಿ ಆರೋಪಕ್ಕೆ ಸಿದ್ದರಾಮಯ್ಯ ಸವಾಲು, ಡಿಸಿಎಂ ಸೇರಿ ಮುಗಿಬಿದ್ದ ರಾಜ್ಯ ಕಾಂಗ್ರೆಸ್ ನಾಯಕರು
Team Udayavani, Nov 11, 2024, 7:40 AM IST
ಬೆಂಗಳೂರು/ಹುಬ್ಬಳ್ಳಿ: ಮಹಾರಾಷ್ಟ್ರ, ಝಾರ್ಖಂಡ್ ವಿಧಾನಸಭಾ ಚುನಾವಣೆ ಕಾವು ಕರ್ನಾಟಕವನ್ನೂ ಆವರಿಸಿದ್ದು, ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕರ್ನಾಟಕ ಸರಕಾರವು ಮದ್ಯ ಉದ್ಯಮಿಗಳಿಂದ 700 ಕೋಟಿ ರೂ. ಲೂಟಿ ಮಾಡಿ ಆ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಹಿತ ರಾಜ್ಯ ಕಾಂಗ್ರೆಸ್‌ನ ಹಲವು ನಾಯಕರು ಮುಗಿಬಿದ್ದಿದ್ದಾರೆ. ಆರೋಪ ಸಾಬೀತುಪಡಿಸಿ ಇಲ್ಲವೇ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
“ಮೋದಿಯವರೇ, ನಮ್ಮ ಸರಕಾರದ ಮೇಲೆ ನೀವು ಮಾಡಿದ 700 ಕೋಟಿ ರೂ. ವಸೂಲಿ ಆರೋಪವನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತು ಪಡಿಸದಿದ್ದರೆ ನೀವು ರಾಜಕೀಯ ನಿವೃತ್ತಿ ಪಡೆಯುತ್ತೀರಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ ಸಹಿತ ಹಲವು ನಾಯಕರು ಕೂಡ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಹಾವೇರಿಯ ಶಿಗ್ಗಾಂವಿ ಕ್ಷೇತ್ರದಲ್ಲಿ ರವಿವಾರ ಕಾಂಗ್ರೆಸ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಸರಕಾರವು ಮದ್ಯ ಉದ್ಯಮದಿಂದ ಸಂಗ್ರಹಿಸಿ ನೀಡಿದ 700 ಕೋಟಿ ರೂ. ಹಣವನ್ನು ಕಾಂಗ್ರೆಸ್ ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಬಳಸುತ್ತಿದೆ ಎಂಬ ಪ್ರಧಾನಿ ಮೋದಿಯವರು ಮಾಡಿದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಿಸಿದರು. “ಸುಳ್ಳುಗಾರ ಮೋದಿಯವರು ನಮ್ಮ ವಿರುದ್ಧ ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಒಂದು ವೇಳೆ ಅವರು ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನಿವೃತ್ತಿ ಘೋಷಿಸುತ್ತಾರಾ’ ಎಂದು ಪ್ರಶ್ನಿಸಿದರು.
ಪ್ರಧಾನಿಗೆ ತಿಳಿವಳಿಕೆ ಕೊರತೆ ಇರಬಾರದು
ಪ್ರಧಾನಿ ಸುಳ್ಳು ಹೇಳುವುದು ಹೊಸ ವಿಷಯವೇನಲ್ಲ. ಆದರೆ ಈ ಮಟ್ಟದ ಸುಳ್ಳು ಹೇಳುವುದು ಅವರ ಸ್ಥಾನಕ್ಕೆ ದೊಡ್ಡ ಅವಮಾನ. ಶೋಭೆ ತರುವುದಿಲ್ಲ. ಸುಳ್ಳಿಗೂ ಇತಿಮಿತಿ ಇರಬೇಕು. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಎಲ್ಲಿರುತ್ತದೆ? ಯಾರು ಕೊಡುತ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ತಿಳಿವಳಿಕೆ ಕೊರತೆ ಇರಬಾರದು ಎಂದು ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಕುಟುಕಿದರು.
ಬಿಜೆಪಿಯವರು ಈ ಹಿಂದೆ 17 ಮಂದಿ ಶಾಸಕರನ್ನು ಯಾವ ಹಣದಲ್ಲಿ ಖರೀದಿಸಿದರು? ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗುವಾಗ 2 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಅವರ ಸ್ವಪಕ್ಷದ ಬಿಜೆಪಿಯ ಹಿರಿಯ ಮುಖಂಡ ಯತ್ನಾಳ್ ಅವರೇ ಹೇಳಿದ್ದಾರೆ. ಆ ಹಣ ಎಲ್ಲಿಂದ ಬಂತು ಎಂದು ತಿರುಗೇಟು ನೀಡಿದರು.
ಆರೋಪ ಸಾಬೀತಾದ್ರೆ ಯಾವ ಶಿಕ್ಷೆಗೆ ಬೇಕಾದರೂ ಗುರಿ: ಡಿಕೆಶಿ ಸವಾಲು
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸರಕಾರದ ಮೇಲೆ ತಾವು ಮಾಡಿರುವ 700 ಕೋಟಿ ರೂ. ಲೂಟಿ ಆರೋಪಗಳನ್ನು ಸಾಬೀತುಪಡಿಸಿ. ಯಾವ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ ಎಂದು ಪ್ರಧಾನಿ ಮೋದಿಗೆ ಸವಾಲು ಹಾಕಿದರು.
ಕೇಂದ್ರ ಸಚಿವರು ಯಾವ್ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಆದರೆ ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು. ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪ್ರಧಾನಿ ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರು ಈ ಆರೋಪಗಳನ್ನು ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ ಎಂದರು.
“ಪ್ರಧಾನಿ ಮೋದಿ ಅವರು ಹೇಳಿರುವಂತೆ ರಾಜ್ಯ ಕಾಂಗ್ರೆಸ್ ಸರಕಾರ ಅಬಕಾರಿ ಹಗರಣದಲ್ಲಿ ಲೂಟಿ ಮಾಡಿರುವುದು 700 ಕೋಟಿ ರೂ. ಅಲ್ಲ, 900 ಕೋಟಿ ರೂ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಕೆ ಮಾಡಿದರೆ, 200 ಕೋಟಿ ರೂ.ಗಳನ್ನು ರಾಜ್ಯದ 3 ಉಪಚುನಾವಣೆಗೆ ಬಳಕೆ ಮಾಡುತ್ತಿದ್ದಾರೆ. ಕರ್ನಾಟಕ ಸರಕಾರ ಚುನಾವಣೆಗಳಿಗೆ ಎಟಿಎಂ ಆಗಿದೆ.” – ಆರ್. ಅಶೋಕ್, ವಿಧಾನಸಭೆ ವಿಪಕ್ಷ ನಾಯಕ
“ಮೋದಿ ದೇಶದ ಪ್ರಧಾನಿ. ಅವರು ಎಚ್ಚರದಿಂದ ಮಾತನಾಡಬೇಕು. ಅಬಕಾರಿ ಇಲಾಖೆಯದ್ದು ಭ್ರಷ್ಟಾಚಾರ ಅನ್ನುವುದು ಸ್ಪಷ್ಟವಾಗಬೇಕು. ಭ್ರಷ್ಟಾಚಾರ ಆಗಿದೆ, ಆಪಾದನೆ ಮಾಡಿದ್ದಾರೆ ಅಂದರೆ ಅದೆಲ್ಲವೂ ಸ್ಪಷ್ಟವಾಗಿ ಗೊತ್ತಾಗಬೇಕು.” – ಡಾ|. ಪರಮೇಶ್ವರ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.