By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ
ನಾವು ಅಭ್ಯರ್ಥಿ ಬಗ್ಗೆ ಆಲೋಚಿಸುತ್ತಿಲ್ಲ, ಅಭಿವೃದ್ಧಿ ಬಗ್ಗೆ ಯೋಚಿಸುತ್ತಿದ್ದೇವೆ: ಉಪ ಮುಖ್ಯಮಂತ್ರಿ
Team Udayavani, Oct 4, 2024, 9:00 PM IST
ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ನೆಪ ಮಾತ್ರ, ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮಾಡುವುದು ನಾನು. ಕ್ಷೇತ್ರದ ಜನತೆ ಕಾಂಗ್ರೆಸ್ ಅಭ್ಯರ್ಥಿ ಯಾರೇ ಆದರೂ ನನ್ನ ಮುಖ ನೋಡಿ ಮತಹಾಕಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಮನವಿ ಮಾಡಿದರು.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಅಭ್ಯರ್ಥಿ ಬಗ್ಗೆ ಆಲೋಚಿಸುತ್ತಿಲ್ಲ, ಅಭಿವೃದ್ಧಿ ಬಗ್ಗೆ ಯೋಚಿಸುತ್ತಿದ್ದೇವೆ. ಕ್ಷೇತ್ರದ ಜನತೆ ಮತ್ತು ಕಾರ್ಯಕರ್ತರಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಹಾಕುವಂತೆ ಪ್ರಾರ್ಥಿಸುತ್ತೇನೆ ಎಂದರು.
ಎಚ್‌ಡಿಕೆ ವಿಚಾರಕ್ಕೆ ನೋ ರಿಯಾಕ್ಷನ್:
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು 50 ಕೋಟಿ ರೂ. ಹಣ ಕೇಳಿರುವ ಸಂಬಂಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಗುರುವಾರ ನಡೆದ ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ನಿರತವಾಗಿದ್ದೆ. ಶುಕ್ರವಾರ ಚನ್ನಪಟ್ಟಣ ಪ್ರವಾಸ ಮಾಡುತ್ತಿದ್ದೇನೆ. ಹೀಗಾಗಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಖಾಸಗಿ ವಿಚಾರಕ್ಕೆ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಮೈಸೂರು ದಸರಾ ನೋಡಿ:
ಇಡೀ ಮೈಸೂರು ತುಂಬಾ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಅದರ ಸೌಂದರ್ಯವನ್ನು ರಾಜ್ಯದ ಜನತೆ ಕಣ್ಣುತುಂಬಿಕೊಳ್ಳಬೇಕು. ದಸರಾ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ರಾಜ್ಯದ ಎಲ್ಲಾ ಭಾಗಗಳಿಂದ ಜನ ಆಗಮಿಸಿ ಈ ಭವ್ಯ ಆಚರಣೆಯ ಭಾಗವಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಎಲ್ಲಾ ಸಮುದಾಯಗಳಿಗೆ ನ್ಯಾಯ:
ಜಾತಿಗಣತಿಯ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನೀತಿಯಂತೆ ನಾವು ಈ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ. ಎಲ್ಲಾ ಸಮುದಾಯಗಳಿಗೂ ನಾವು ನ್ಯಾಯ ಒದಗಿಸಿಕೊಡುತ್ತೇವೆ. ಈ ವರದಿಯಲ್ಲಿ ಏನಾದರೂ ನ್ಯೂನ್ಯತೆ ಇದ್ದರೆ ಸಿದ್ದರಾಮಯ್ಯ, ನಾನು ಹಾಗೂ ನಮ್ಮ ಪಕ್ಷದ ನಾಯಕರು ಕೂತು ಸರಿಪಡಿಸುತ್ತೇವೆ. ಈ ವಿಚಾರವಾಗಿ ಗೊಂದಲ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Ramanagara: ಕಾಡಾನೆ ದಾಳಿಗೆ ರೈತ ಬಲಿ
Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್ ಬುಮ್ರಾ ಹೆಸರು
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.