By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

3 ತಿಂಗಳಲ್ಲಿ 20 ದಿನ ಬಂದಿದ್ದೇನೆ ಅಂತಾ ಹೇಳ್ತಿದ್ದಾರಲ್ಲ ಏನು ಮಾಡಿದ್ರಿ ಬಂದು ಪಟ್ಟಿ ಕೊಡಿ: ಕೇಂದ್ರ ಸಚಿವ

Team Udayavani, Oct 6, 2024, 10:42 PM IST

HDK-Chennapattana

ಚನ್ನಪಟ್ಟಣ (ರಾಮನಗರ): ಚನ್ನಪಟ್ಟಣ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ. ಎಲ್ಲಿದೆ ಅನುದಾನ?, ಎಲ್ಲಿ ತಂದವ್ರೆ?, ಯಾವುದೋ ಬೋರ್ಡ್‌ಗಳಲ್ಲಿ ಮಾತ್ರವಾ? ಹಾಗಾದರೆ, ನಮ್ಮ ಅಧಿಕಾರಾವಧಿಯಲ್ಲಿ ಏನೂ ಅಭಿವೃದ್ಧಿ ಆಗಿಲ್ವ? ನಾನು ಅಭಿವೃದ್ಧಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಕೋಡಂಬಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಲ್ಲಿ 20 ದಿನ ಬಂದಿದ್ದೇನೆ ಅಂತಾ ಹೇಳ್ತಿದ್ದೀರಲ್ಲ ಏನು ಮಾಡಿದ್ರಿ ಬಂದು? ಪಟ್ಟಿ ಕೊಡಿ?, ಒಬ್ಬ 300 ಕೋಟಿ, ಇನ್ನೊಬ್ಬ 500 ಕೋಟಿ ಇನ್ವೆಸ್ಟ್‌ ಮಾಡಿದ್ದೇವೆ ಅಂತಾನೆ. ಸೇತುವೆಗಳ ನಿರ್ಮಾಣಕ್ಕೆ ನಾನು ಅನುಮತಿ ಕೊಡಿಸಿದ್ದೆ. ಅದಕ್ಕೆ ಚೆಕ್‌ ಡ್ಯಾಂ ಅಂತ ಪಕ್ಕದಲ್ಲಿ ಬೋರ್ಡ್‌ ಹಾಕೊಂಡು ಓಡಾಡ್ತಿದ್ದಾರೆ ಎಂದು ದೂರಿದರು.

ಚನ್ನಪಟ್ಟಣದ ಕಡೆ ನೀವು ತಲೆ ಹಾಕ್ತಿದ್ರಾ: 
“ಚನ್ನಪಟ್ಟಣದ ಸೀಟು ಖಾಲಿ ಇರೋದಕ್ಕೆ ಬಂದಿದ್ದೇನೆ’ ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಗರಂ ಆದ ಎಚ್‌.ಡಿ.ಕುಮಾರಸ್ವಾಮಿ, ಚನ್ನಪಟ್ಟಣದ ಚೇರ್‌ ಖಾಲಿ ಇರೋದಕ್ಕೆ ಬಂದಿದ್ದೀರಾ? ಖಾಲಿ ಇಲ್ಲಾಂದಿದ್ರೆ ಬರ್ತಿರಲಿಲ್ಲವಾ? ಹಾಗಾದರೆ, ನೀವು ಪದೇ ಪದೆ ಇಲ್ಲಿಗೆ ಬರ್ತಿರೋದು ಕುರ್ಚಿಗಾಗಿ ತಾನೇ? ಇಲ್ಲವಾದ್ರೆ ಚನ್ನಪಟ್ಟಣದ ಕಡೆ ನೀವು ತಲೆ ಹಾಕ್ತಿದ್ರಾ, ತಿರುಗಿ ನೋಡ್ತಿರಲಿಲ್ಲ. ಚುನಾವಣೆ, ಕುರ್ಚಿ ಮೇಲೆ ಕಣ್ಣಿಟ್ಟು ಅಭಿವೃದ್ಧಿ ಅಂತಾ ನಾಟಕ ಮಾಡ್ತೀರಾ, ಚನ್ನಪಟ್ಟಣ ಜನರ ಬಗ್ಗೆ ನಿಜವಾಗಿ ಕಾಳಜಿ ಇದ್ದಿದ್ರೆ ಹೀಗೆ ಹೇಳ್ತಿದ್ರಾ, ಚುನಾವಣೆ ಮುಗಿದ ಮೇಲೆ ನೀವು ಮತ್ತೆ ಚನ್ನಪಟ್ಟಣ ಕಡೆ ಬರೋದಿಲ್ಲ. ಟಾಟಾ ಮಾಡ್ಕೊಂಡು ಹೋಗ್ತೀವೆ ಅನ್ನೋದೇ ಇವರ ಮಾತಿನ ಅರ್ಥ ಎಂದು ವಾಗ್ಧಾಳಿ ನಡೆಸಿದರು.

ಅಭ್ಯರ್ಥಿಯ ಪಕ್ಷಗಳ ಹೈಕಮಾಂಡ್‌ ನಿರ್ಧರಿಸುತ್ತೆ
ಎನ್‌ಡಿಎ ಅಭ್ಯರ್ಥಿ ಯಾರೇ ಆದ್ರೂ ಅವರನ್ನು ಗೆಲ್ಲಿಸಿ, ಹಾಗಾಂತ ನೀವು ನನಗೆ ಮಾತು ಕೊಡಿ, ನನಗೆ 3 ಬಾರಿ ಆಪರೇಷನ್‌ ಆಗಿದೆ. ನಿಮ್ಮ ಸೇವೆ ಮಾಡಲು ನಾನು ರಾಜಕೀಯದಲ್ಲಿ ಉಳಿದಿದ್ದೇನೆ. ದರೋಡೆ ಮಾಡುವವರ ಮಾತು ಕೇಳಬೇಡಿ. ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿಖಿಲ್‌ ಇರ್ತಾರೋ, ಬೇರೆಯವರು ಇರ್ತಾರೋ ಅನ್ನೋದನ್ನ ಎರಡು ಪಕ್ಷಗಳ ಹೈಕಮಾಂಡ್‌ ನಿರ್ಧರಿಸುತ್ತೆ ಎಂದು ಹೇಳಿದರು.
ನಾಗಮಂಗಲದ ಪ್ರಕರಣದಲ್ಲಿ ಬಂಧಿತರಲ್ಲಿ ಮುಸಲ್ಮಾನರೇ ಹೆಚ್ಚಿದ್ರು. ಆದರೂ ನಾನು ನಮ್ಮ ಲೀಡರ್‌ಗಳಿಗೆ ಹೇಳಿ ಎಲ್ಲರನ್ನೂ ಬಿಡಿಸಿದ್ದೇನೆ. ಆ ಮಹಾನುಭಾವರು ಅವರನ್ನು ಬಿಡಿಸವ್ರಾ ಎಂದು ಎಚ್‌ಡಿಕೆ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.