ಮುಖ್ಯಮಂತ್ರಿ ವಿದೇಶ ಪ್ರವಾಸದ ಬಳಿಕ ಸಂಪುಟ ಸಿಹಿ
Team Udayavani, Jan 18, 2020, 9:00 PM IST
– ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಬನ್ನಿ ಎಂದ ಅಮಿತ್ ಶಾ
– ಜ.27 ಅಥವಾ 28 ಕ್ಕೆ ಮಹೂರ್ತ ನಿಗದಿ ಸಾಧ್ಯತೆ?
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ಮುಂದಕ್ಕೆ ಹೋಗುವುದು ಬಹುತೇಕ ಖಚಿತವಾಗಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ವಿದೇಶ ಪ್ರವಾಸ ಮುಗಿಸಿಕೊಂಡು ಬಂದ ಮೇಲೆಯೇ ಈ ಸಂಬಂಧ ನಿರ್ಧಾರವಾಗಲಿದೆ.
ದಾವೋಸ್ ಪ್ರವಾಸ ಮುಗಿಸಿ, ದೆಹಲಿಗೆ ಬನ್ನಿ, ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸೋಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಬಿಎಸ್‌ವೈಗೆ ಸೂಚನೆ ನೀಡಿದ್ದಾರೆ.
ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ಜತೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ ಯಡಿಯೂರಪ್ಪ ಅವರು, ಸಂಪುಟ ವಿಸ್ತರಣೆ ಕುರಿತು ಪ್ರಸ್ತಾಪಿಸಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಪೈಕಿ 11 ಮಂದಿಗೆ ಸಚಿವ ಸ್ಥಾನ ನೀಡಬೇಕಿದೆ. ಈಗಾಗಲೇ ತಡವಾಗಿದ್ದು ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಬೇಕಿದೆ ಎಂದು ಹೇಳಿದರು.
ಸಂಪುಟ ವಿಸ್ತರಣೆಗೆ ನಮ್ಮ ಆಕ್ಷೇಪಣೆಯೇನೂ ಇಲ್ಲ. ನೀವು ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಬನ್ನಿ ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್ ಅವರ ಸಮ್ಮುಖದಲ್ಲಿ ಚರ್ಚಿಸಿ ಅಂತಿಮಗೊಳಿಸೋಣ ಎಂದು ತಿಳಿಸಿದರು ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ಬಹುತೇಕ ಜ.27 ಅಥವಾ 28 ರಂದು ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದೆ.
ಈ ಮಧ್ಯೆ, ಉಪ ಮುಖ್ಯಮಂತ್ರಿ ವಿಚಾರವೂ ಪ್ರಸ್ತಾಪವಾಗಿ ನಾಲ್ವರು ಉಪ ಮುಖ್ಯಮಂತ್ರಿಗಳ ನೇಮಕಕ್ಕೆ ಅಮಿತ್ ಶಾ ಒಲವು ತೋರಿದರು. ಹಾಲಿ ಇರುವವರಲ್ಲಿ ಒಬ್ಬರನ್ನು ತೆಗೆದು ಹೊಸದಾಗಿ ಇಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆಯಾಯಿತು ತಿಳಿದುಬಂದಿದೆ.
ಶ್ರೀರಾಮುಲು ಹಾಗೂ ರಮೇಶ್ ಜಾರಕಿಹೊಳಿ ಉಪ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿರುವ ಬಗ್ಗೆಯೂ ಪ್ರಸ್ತಾಪವಾಯಿತು. ಉಪ ಮುಖ್ಯಮಂತ್ರಿ ಹುದ್ದೆ ಬೇಕಾ ಬೇಡವಾ ಎಂಬುದೂ ಸೇರಿದಂತೆ ಎಲ್ಲ ವಿಚಾರಗಳನ್ನು ಚರ್ಚಿಸಿ ಆ ನಂತರ ಎಲ್ಲವನ್ನೂ ತೀರ್ಮಾನ ಮಾಡೋಣ ಎಂದು ಅಮಿತ್ ಶಾ ಹೇಳಿದರು ಎನ್ನಲಾಗಿದೆ.
ಮಾತುಕತೆ ವೇಳೆಯಲ್ಲಿ ಆಡಳಿತ ವಿಚಾರಕ್ಕೆ ಸಂಬಂಧಿಸಿದಂತೆಯೂ ಅಮಿತ್ ಶಾ ಅವರು, ಸಿಎಂಗೆ ಕೆಲವೊಂದು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಹುಬ್ಬಳ್ಳಿಯಲ್ಲಿ ಸಿಎಎ ಪರ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡ ನಂತರ ವಿದೇಶ ಪ್ರವಾಸ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ರಾತ್ರಿಯೇ ಬೆಂಗಳೂರಿಗೆ ವಾಪಸ್ಸಾದರು. ಅಮಿತ್ ಶಾ ಅವರ ಜತೆ ನಡೆದ ಮಾತುಕತೆಯ ವಿವರಗಳನ್ನು ಸಚಿವಾಕಾಂಕ್ಷಿಗಳಿಗೆ ತಿಳಿಸಿದರು.
ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕರು ಶನಿವಾರವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ.
ಈ ನಡುವೆ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಬಿಜೆಪಿ ನಾಯಕರ ಜತೆ ಸಮಾಲೋಚನೆ ನಡೆಸಿದರು. ಸರ್ಕಾರದ ಆಡಳಿತ ವೈಖರಿ, ಸಿಎಎ ಪರ ಜಾಗೃತಿ ಮೂಡಿಸಲು ಪಕ್ಷದ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ವಿವರಗಳನ್ನು ಪಡೆದರು ಎಂದು ಹೇಳಲಾಗಿದೆ.
ಅಮಿತ್ ಶಾ ಭೇಟಿ
ಹುಬ್ಬಳ್ಳಿಯಲ್ಲಿ ಸಿಎಎ ಪರ ಜಾಗೃತಿಯಲ್ಲಿ ಪಾಲ್ಗೊಂಡ ನಂತರ ಡೆನಿಸನ್ ಹೋಟೆಲ್‌ನಲ್ಲಿ ತಂಗಿದ್ದ ಅಮಿತ್ ಶಾ ಅವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಬಿ.ಸಿ.ಪಾಟೀಲ್ ಭೇಟಿ ಮಾಡಿ ಚರ್ಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.