ಗಂಡನ ಕಿರುಕುಳ ತಾಳಲಾರದೆ ಅಮೆರಿಕದಲ್ಲಿ ಆತ್ಮಹತ್ಯೆಗೆ ಶರಣಾದ ಭಾರತೀಯ ಮಹಿಳೆ
ಆತ್ಮಹತ್ಯೆಗೂ ಮುನ್ನ ತಾನು ಅನುಭವಿಸಿದ ಕಷ್ಟಗಳನ್ನು ವಿಡಿಯೋದಲ್ಲಿ ಹೇಳಿಕೊಂಡಿದ್ದ ಮಹಿಳೆ
Team Udayavani, Aug 7, 2022, 8:52 AM IST
ನ್ಯೂಯಾರ್ಕ್ : ಗಂಡನಿಂದ ಕಿರುಕುಳ ತಾಳಲಾರದೆ ಭಾರತೀಯ ಮಹಿಳೆಯೊಬ್ಬರು ಅಮೇರಿಕಾದಲ್ಲಿ ಆತ್ಮಹತ್ಯೆಗೆ ಶಾರಣಾಗಿರುವ ಘಟನೆ ನಡೆದಿದೆ.
ಸಾಯುವ ಮುನ್ನ ತಾನು ಅನುಭವಿಸಿದ ಕಷ್ಟವನ್ನು ವಿಡಿಯೋದಲ್ಲಿ ಹೇಳಿಕೊಂಡಿದ್ದು, ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ.
ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಮಂದೀಪ್ ಕೌರ್ 2015ರಲ್ಲಿ ರಂಜೋದ್ಬೀರ್ ಸಿಂಗ್ ಸಂಧು ಎಂಬುವರನ್ನು ಮದುವೆಯಾದರು. ಆ ಬಳಿಕ ನ್ಯೂಯಾರ್ಕ್ ಗೆ ತೆರಳಿ ಅಲ್ಲಿ ನೆಲೆಸಿದ್ದರು ಅಲ್ಲಿಂದ ಶುರುವಾದ ಕಿರುಕುಳ ಇಂದಿನವರೆಗೂ ಸಹಿಸಿಕೊಂಡು ಬಂದಿದ್ದನ್ನು ಕೌರ್ ವೀಡಿಯೋದಲ್ಲಿ ಕೌರ್ ಎಳೆ ಎಳೆಯಾಗಿ ಹೇಳಿಕೊಂಡಿದ್ದಾರೆ. ತಾನು ಹಲವಾರು ವರ್ಷಗಳಿಂದ ಗಂಡನ ಕಿರುಕುಳವನ್ನು ಸಹಿಸಿಕೊಂಡು ಬಂದಿದ್ದೇನೆ ಆದರೆ ಇನ್ನು ಮುಂದೆ ಕಿರುಕುಳ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಆಕೆಯ ಪತಿ ರಂಜೋಧಬೀರ್ ಸಿಂಗ್ ಸಂಧು ಟ್ರಕ್ ಚಾಲಕನಾಗಿದ್ದು. ನಾನು ತುಂಬಾ ದಯನೀಯ ಸ್ಥಿತಿಯಲ್ಲಿದ್ದೇನೆ. ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದೆ ಆದರೆ ಈಗ ನಿತ್ಯ ಹೊಡೆತಗಳನ್ನು ಸಹಿಸಲಾಗುತ್ತಿಲ್ಲ. ಎಂಟು ವರ್ಷಗಳಿಂದ, ನಾನು ಪ್ರತಿದಿನ ಹೊಡೆತಗಳನ್ನು ಅನುಭವಿಸುತ್ತಿದ್ದೇನೆ. ಗಂಡನ ಒಂದಲ್ಲ ಒಂದು ದಿನ ಬದಲಾಗುತ್ತಾನೆ ಎಂಬ ಭರವಸೆಯಿಂದ ಅವನ ಕೆಟ್ಟ ನಡವಳಿಕೆಯನ್ನು ಸಹಿಸಿಕೊಂಡಿದ್ದೆ. ಆದರೆ ನನ್ನ ನಂಬಿಕೆ ಸುಳ್ಳಾಯಿತು ಎಂದು ಕಣ್ಣೀರಿಟ್ಟಿದ್ದಾರೆ.
There are collosal problems in our family & social structure which we conveniently ignore or deny to accept. #DomesticViolence against women is one such serious problem. Suicide by Mandeep Kaur a NRI Punjabi woman is a wake up call to accept the problem and fix it accordingly. pic.twitter.com/F8WpkiLCZY
— Gurshamshir Singh (@gurshamshir) August 5, 2022
ಇದನ್ನೂ ಓದಿ : ಶೆಡ್ ಮೇಲೆ ಪಕ್ಕದ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳ ದಾರುಣ ಸಾವು, ಇಬ್ಬರು ಮಹಿಳೆಯರಿಗೆ ಗಾಯ
ದಂಪತಿಗೆ 6 ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮಕ್ಕಳು ಹೆಣ್ಣಾಗಿ ಹುಟ್ಟಿದ್ದಾರೆ ಎಂಬ ಕಾರಣಕ್ಕೆ ಗಂಡ ದಿನನಿತ್ಯ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಮಂದೀಪ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ. ಆಗಸ್ಟ್ 4ರಂದು ಮಂದೀಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಷಯ ತಿಳಿದ ಮಂದೀಪ್ ತಂದೆ ಜಸ್ಪಾಲ್ ಸಿಂಗ್ ಅವರು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ. ಮದುವೆಯಾದಾಗಿನಿಂದ ಮಗಳ ಮೇಲೆ ದೌರ್ಜನ್ಯ ನಡೆಯುತ್ತಿತ್ತು ಎಂದು ಕುಟುಂಬ ಹೇಳಿದೆ.
ಇದೀಗ, ಕುಟುಂಬ ತಮ್ಮ ಮಗಳ ಮೃತದೇಹವನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ʻನಾವು ಯುಎಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ನಿಮಗೆ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧರಾಗಿದ್ದೇವೆʼ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.