Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

ಕಾಂತರಾಜ ಆಯೋಗದ ಸಾಮಾಜಿಕ, ಶೈಕ್ಷಣಿಕ ವರದಿ ಜ.16ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ

Team Udayavani, Jan 11, 2025, 6:55 AM IST

vidhana-Soudha

ಬೆಂಗಳೂರು: ಕಾಂತರಾಜ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ವಿರುದ್ಧ ರಾಜ್ಯ ಒಕ್ಕಲಿಗರ ಸಂಘವು ಅಖಿಲ ಭಾರತ ವೀರಶೈವ ಮಹಾಸಭಾದ ಜತೆಗೆ ಹೋರಾಟದ ಅಖಾಡಕ್ಕೆ ಇಳಿಯುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿರುವ ಕಾಂತರಾಜ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಜ. 16ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಒಕ್ಕಲಿಗರ ಸಂಘ, ಜ. 12ರಂದು ಒಕ್ಕಲಿಗ ಶ್ರೀಗಳ ನೇತೃತ್ವದಲ್ಲಿ ಸಮುದಾಯದ ಸಚಿವರ, ಶಾಸಕರ ಸಭೆ ಆಯೋಜಿಸಿ ಸರಕಾರದ ಮೇಲೆ ಒತ್ತಡ ಹೇರುವ ತಂತ್ರ ರೂಪಿಸಿದೆ. ಜತೆಗೆ ಸರಕಾರ ವರದಿ ಅಂಗೀಕರಿಸಿದರೆ ಅಖಿಲ ಭಾರತ ವೀರಶೈವ ಮಹಾಸಭಾದ ಜತೆಗೆ ಹೋರಾಟದ ಅಖಾಡಕ್ಕೆ ಇಳಿಯುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.

ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕಾಂತರಾಜ ಆಯೋಗದ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿಡುವುದಾಗಿ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅವೈಜ್ಞಾನಿಕ ಕಾಂತರಾಜು ಆಯೋಗದ ವರದಿ ಅಂಗೀಕರಿಸಬಾರದು ಎಂದು ಆಗ್ರಹಿಸಿದರು.

ಒಕ್ಕಲಿಗ ಶ್ರೀಗಳ ಸಮ್ಮುಖದಲ್ಲಿ ಸಭೆ
ಕಾಂತರಾಜ ಆಯೋಗದ ವರದಿ ವಿಚಾರವಾಗಿ ಮುಂದಿನ ಹೋರಾಟಗಳ ಬಗ್ಗೆ ಚರ್ಚಿಸಲು ಒಕ್ಕಲಿಗರ ಸಂಘದ ಆವರಣದಲ್ಲಿ ಜ. 12ರಂದು ಸಮುದಾಯದ ಶ್ರೀಗಳಾದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮತ್ತು ಶ್ರೀ ನಂಜಾವದೂತ ಸ್ವಾಮೀಜಿ ಸಮ್ಮುಖದಲ್ಲಿ ಸಭೆ ಕರೆಯಲಾಗಿದೆ. ಸಮುದಾಯದ ಸಚಿವರು ಸೇರಿ ಎಲ್ಲ ಪಕ್ಷಗಳಲ್ಲಿರುವ ಶಾಸಕರು ಭಾಗವಹಿಸಲಿದ್ದಾರೆ. ಅಂದು ತೆಗೆದುಕೊಳ್ಳುವ ನಿರ್ಣಯದ ಮೇಲೆ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.

2014-15ರಲ್ಲಿ ಕಾಂತರಾಜ ಆಯೋಗ ಸಿದ್ಧಪಡಿಸಿರುವ ವರದಿ ಹಲವು ದೋಷಗಳಿಂದ ಕೂಡಿದೆ. ಮನೆ-ಮನೆಗೆ ಭೇಟಿ ನೀಡದೆ ಸಮೀಕ್ಷೆ ಮಾಡಲಾಗಿದೆ. ಒಕ್ಕಲಿಗ ಉಪ ಪಂಗಡಗಳನ್ನು ಒಕ್ಕಲಿಗರ ಒಟ್ಟು ಜನಸಂಖ್ಯೆಯಲ್ಲಿ ಸೇರಿಸಿಲ್ಲ. ಜಿಯೋ ಟ್ಯಾಗ್‌ ಬಳಕೆ ಮಾಡಿ ಬಿಹಾರದ ಮಾದರಿಯಲ್ಲಿ ದತ್ತಾಂಶ ಸಂಗ್ರಹ ಮಾಡಲಿ, ಅದಕ್ಕೆ ನಮ್ಮ ಸಹಮತವಿದೆ ಎಂದರು.

ವೀರಶೈವ ಮಹಾಸಭಾದ ಜತೆಗೂ ಮಾತುಕತೆ
ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಗಾ.ನಂ. ಶ್ರೀಕಂಠಯ್ಯ ಮಾತನಾಡಿ, ಈ ವರದಿ ಕೇವಲ ಒಕ್ಕಲಿಗ ಸಮುದಾಯಕ್ಕಷ್ಟೇ ಅನ್ಯಾಯವಾಗಿಲ್ಲ. ವೀರಶೈವ ಲಿಂಗಾಯಿತ ಸೇರಿದಂತೆ ಹಲವು ಸಮುದಾಯಗಳಿಗೆ ಅನ್ಯಾಯವಾಗಲಿದೆ. ಒಂದು ವೇಳೆ ಸರಕಾರ ಕಾಂತರಾಜು ಆಯೋಗದ ವರದಿ ಅಂಗೀಕರಿಸಿದಲ್ಲಿ ಒಕ್ಕಲಿಗರ ಸಂಘ, ಅಖಿಲ ಭಾರತ ವೀರಶೈವ ಮಹಾಸಭಾ ಜತೆಗೆ ಜಂಟಿಯಾಗಿ ರಾಜ್ಯಾದ್ಯಂತ ಹೋರಾಟ ನಡೆಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದರು.

ಈ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಪದಾಧಿಕಾರಿಗಳ ಜತೆಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ. ಮಹಾಸಭಾದಲ್ಲಿ ಚರ್ಚೆ ನಡೆಸಿ ಮಾಹಿತಿ ನೀಡುವುದಾಗಿ ಮಹಾಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.