Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು
Team Udayavani, Jul 2, 2024, 1:11 AM IST
ಮಲ್ಪೆ: ತೆಂಕನಿಡಿಯೂರು ಗ್ರಾ.ಪಂ.ಅಧ್ಯಕ್ಷೆ ಶೋಭಾಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ 8 ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ.
ಜೂ.28ರಂದು ಪಿಡಿಒ ದಯಾನಂದ ಅವರು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಿರುವ ಕಾರಣಕ್ಕೆ ಸ್ಥಳಕ್ಕೆ ಬರುವಂತೆ ಹೇಳಿದ ಹಿನ್ನೆಲೆಯಲ್ಲಿ ಶೋಭಾ ಅವರು ಸಂಜೆ 5 ಗಂಟೆಗೆ ತೆಂಕನಿಡಿಯೂರು ಶ್ಮಶಾನದ ಬಳಿಯ ಎಸ್‌ಎಲ್ ಆರ್‌ಎಂ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಬಂದಿದ್ದರು. ಆಗ ಆರೋಪಿಗಳಾದ ಶರತ್ ಬೈಲಕೆರೆ, ಕಿರಣ ಪಿಂಟೋ, ವಿಜಯಪ್ರಕಾಶ್, ಗಾಯತ್ರಿ, ಪುಷ್ಪಾ, ಶಾಲಿನಿ, ಕೃಷ್ಣ ಶೆಟ್ಟಿ ಹಾಗೂ ಇತರರು ಸೇರಿ ಏಕವಚನದಲ್ಲಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ತನ್ನನ್ನು ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಬೇಕೆಂಬ ಉದ್ದೇಶವಿಟ್ಟುಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಶೋಭಾ ಅವರು ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.