2021 ನೇ ಸಾಲಿನ ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ
2021ನೇ ಸಾಲಿನಲ್ಲಿ ಸಿಬಿಎಸ್ ಇ ಪರೀಕ್ಷೆಗೆ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
Team Udayavani, Feb 2, 2021, 5:34 PM IST
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 2021 ನೇ ಸಾಲಿನ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೊಂಡಿದೆ.
ಕೆಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪರೀಕ್ಷೆಗಳು ಮುಂಬರುವ ಮೇ 4 ರಿಂದ ಆರಂಭಗೊಂಡು ಜೂನ್ 10 ಕ್ಕೆ ಕೊನೆಗೊಳ್ಳಲಿದೆ.ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ವೇಳಾಪಟ್ಟಿಯನ್ನು ನೋಡಬಹುದಾಗಿದೆ.
ಕೇಂದ್ರ ಸಚಿವ ಸುರೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರೀತಿಯ ವಿದ್ಯಾರ್ಥಿಗಳೇ, ಬಹು ದಿನಗಳ ನಿರೀಕ್ಷೆಯ ಸಿಬಿಎಸ್ ಇ 10ನೇ ಮತ್ತು 12ನೇ ತರಗತಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದೇವೆ. ನಿಮಗೆ ಪರೀಕ್ಷೆ ತುಂಬಾ ಸುಗಮವಾಗಿ ನಡೆಯುವಂತೆ ನಾವು ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಿಮಗೆ ಒಳ್ಳೆಯದಾಗಲಿ” ಎಂದು ಉಲ್ಲೇಖಿಸಿದ್ದಾರೆ.
2021ನೇ ಸಾಲಿನಲ್ಲಿ ಸಿಬಿಎಸ್ ಇ ಪರೀಕ್ಷೆಗೆ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಹತ್ತನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಔಪಚಾರಿಕವಾಗಿ ಘೋಷಿಸಿದ್ದು, ಈ ವೇಳಾಪಟ್ಟಿ ಅಧಿಕೃತ ವೆಬ್ ಸೈಟ್ (cbse.nic.in)ನಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮೈತ್ರಿಗೆ HDK ಕಂಬಳಿ ಹಾಕಿಕೊಂಡೇ ಕುಳಿತಿದ್ದರು: ಎಚ್. ವಿಶ್ವನಾಥ್ ವ್ಯಂಗ್ಯ
Dear Students, hereby announcing the much-awaited date-sheet of @cbseindia29 board exams of X & XII.Please be assured that we have done our best to ensure that these exams go smoothly for you. Wish you good luck! @SanjayDhotreMP @EduMinOfIndia @PIB_India https://t.co/P9XvyMIfNq
— Dr. Ramesh Pokhriyal Nishank (@DrRPNishank) February 2, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.