![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 19, 2023, 10:32 AM IST
ಬೆಂಗಳೂರು: ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದಡಿ 5 ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಬಂಧಿತ ಶಂಕಿತ ಉಗ್ರರು.
ಆರ್ ಟಿ ನಗರ ಕೊಲೆ ಕೇಸ್ನ ಅರೋಪಿಗಳು ಜೈಲಿನಲ್ಲಿ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು. ಕರ್ನಾಟಕದ ವಿವಿಧಕಡೆಗಳಲ್ಲಿ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳನ್ನು ಒಗ್ಗೂಡಿಸುತಿದ್ದರು ಎಂಬ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿ ವಿಚಾರಣೆ ನಡೆಸಿದೆ.
ಜೈಲಿನಲ್ಲಿ ಉಗ್ರರ ಸಂಪರ್ಕ:
2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದರು. ಜುನೈದ್ ಮತ್ತು ತಂಡ ನೂರ್ ಅಹ್ಮದ್ನನ್ನು ಅಪಹರಿಸಿ ಹತ್ಯೆ ಮಾಡಿತ್ತು. ಈ ಕೊಲೆ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಜುನೈದ್ ಜೈಲಿನಲ್ಲಿ ಉಗ್ರರ ಜೊತೆ ಸಂಪರ್ಕ ಸಾಧಿಸಿದ್ದ. ಜೈಲು ಸೇರಿರುವ ನಮ್ಮ ಆಪ್ತರು ಸಂಘಟನೆಗಾಗಿ ಕೆಲಸ ಮಾಡುವುದಾಗಿ ಉಗ್ರ ಸಂಘಟನೆ ನಿಭಾಯಿಸುತ್ತಿದ್ದ ವ್ಯಕ್ತಿಯನ್ನು ಸಂಪರ್ಕಿಸಿದ್ದರು. ಬಂಧಿತರು ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವುದು ಸಿಸಿಬಿಗೆ ಸುಳಿವು ಸಿಕ್ಕಿತ್ತು. ಈ ಬಗ್ಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತರ ತೀವ್ರ ವಿಚಾರಣೆ:
ಮಡಿವಾಳ ಟೆಕ್ನಿಕಲ್ ಸೆಲ್ನಲ್ಲಿ ಬಂಧಿತರ ತೀವ್ರ ವಿಚಾರಣೆ ನಡೆಯುತ್ತಿದೆ. ವಿಧ್ವಂಸಕ ಕೃತ್ಯಗಳ ಬಗ್ಗೆ ತರಬೇತಿ ಪಡೆಯುತ್ತಿದ್ದರು. ಬಾಂಬ್ ಸ್ಫೋಟ ಸೇರಿದಂತೆ ಹಲವು ಕೃತ್ಯಗಳ ಬಗ್ಗೆ ತರಬೇತಿ ಪಡೆಯುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಮುಖ ಆರೋಪಿಗಾಗಿ ಶೋಧ:
ಸಿಸಿಬಿ ಬಂಧಿಸಿದ ಬಹುತೇಕ ಶಂಕಿತ ಉಗ್ರರು ಪ್ರಕರಣದ ಪ್ರಮುಖ ಆರೋಪಿ ಜುನೈದ್ ಅಹ್ಮದ್ ಆಪ್ತರು. ಸದ್ಯ ಆತ ನಾಪತ್ತೆಯಾಗಿದ್ದಾನೆ. ಜುನೈದ್ ಅಹ್ಮದ್ ಕೊಲೆ, ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿ ಜೈಲಿನಿಂದ ಹೊರಬರುವಾಗ ಶಂಕಿತ ಉಗ್ರನಾಗಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಶಿಮ್ಲಾ ರೆಸ್ಟೋರೆಂಟ್ ನಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಮೃತ್ಯು, 10 ಮಂದಿಗೆ ಗಾಯ
ಸಿಕ್ಕಿ ಬಿದ್ದಿದ್ದು ಹೇಗೆ ?
ಬೆಂಗಳೂರು ಸಿಸಿಬಿಗೆ ಸಿಕ್ಕಿದ ಸುಳಿವು ಆಧರಿಸಿ ತನಿಖೆ ನಡೆಸಲಾಗಿತ್ತು. ಶಂಕಿತರ ಲೊಕೇಶನ್ ಟ್ರೇಸ್ ಮಾಡಿದಾಗ
ಕನಕನಗರದ ಸುಲ್ತನಾಪಾಳ್ಯದ ಮಸೀದಿ ಬಳಿ ಪತ್ತೆಯಾಗಿದ್ದಾರೆ. ಸಂಚಿಗೆ ಸಂಬಂಧಿಸಿದ ಮೀಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರಲ್ಲಿ ಸ್ಫೋಟ ನಡೆಸಲು ಶಂಕಿತರು ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ.
2008ರ ಬೆಂಗಳೂರು ಸೀರಿಯಲ್ ಬ್ಲಾಸ್ಟ್ ಕೇಸ್ ರೂವಾರಿ ಜುನೈದನನ್ನು ಆರೋಪಿಗಳು ಜೈಲಿನಲ್ಲಿ ಪರಿಚಯಿಸಿಕೊಂಡಿದ್ದರು. ಜುನೈದ್ ಮೂಲಕ ಸ್ಫೋಟಕ್ಕೆ ಈ ಐವರು ಸಂಚು ರೂಪಿಸಿದ್ದರು.
ಬಾಂಬ್‌ಗೆ ಬೇಕಾದ ರಾ ಮೆಟೀರಿಯಲ್ ರೆಡಿ ಮಾಡಿದ್ದರು. ಇವರ ಜೊತೆ ಇನ್ನೂ ಹಲವರು ಸೇರಿ ಕೃತ್ಯಕ್ಕೆ ಪ್ಲ್ಯಾನ್ ನಡೆಸಿದ್ದರು. ಬಂಧಿತರ ಸಂಪರ್ಕದಲ್ಲಿದ್ದವರಿಗೆ ಶೋಧ.
2 ಸ್ಯಾಟಲೈಟ್ ಫೋನಿನಂತಿರುವ ವಾಕಿಟಾಕಿ, 7 ನಾಡ ಪಿಸ್ತೂಲ್, 42 ಜೀವಂತ ಗುಂಡುಗಳು, ಮೊಬೈಲ್ ಫೋನ್, ವಿವಿಧ ಕಂಪನಿ ಸಿಮ್‌ಗಳು, ಲ್ಯಾಪ್ ಟಾಪ್ ಜಪ್ತಿ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.