![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Dec 11, 2021, 3:36 PM IST
ತಿರುವನಂತಪುರಂ : ಮಲಯಾಳಂ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಇಸ್ಲಾಂ ಧರ್ಮವನ್ನು ತೊರೆದು ಹಿಂದು ಧರ್ಮಕ್ಕೆ ಮತಾಂತರಗೊಳ್ಳಲು ನಿರ್ಧರಿಸಿದ್ದಾರೆ.
ಅಲಿ ಅಕ್ಬರ್ ಅವರು ಈ ನಿರ್ಧಾರ ಕೈಗೊಳ್ಳಲು ಕಾರಣ, ಸಿಡಿಎಸ್ ಬಿಪಿನ್ ರಾವತ್ ಅವರು ದುರ್ಮರಣಕ್ಕೀಡಾಗಿ ಸಾವನ್ನಪ್ಪಿದ್ದ ವಿಷಯದಲ್ಲಿ ಕೆಲವು ಮುಸ್ಲಿಮರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮ ಹಂಚಿಕೊಂಡಿದ್ದರು. ಈ ವಿಚಾರವಾಗಿ ಬೇಸತ್ತ ನಿರ್ದೇಶಕ ಅಲಿ ಅಕ್ಬರ್ ಧರ್ಮ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ ಅಲ್ಲದೆ ಈ ವಿಚಾರವಾಗಿ ಸ್ವತಃ ನಿರ್ದೇಶಕ ಅಲಿ ಅಕ್ಬರ್ ಅವರೇ ಪತ್ನಿ ಹಾಗೂ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ನಿರ್ಧಾರ ಮಾಡಿದ್ದೇವೆ ಎಂದು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದಾರೆ.
ಸಿಡಿಎಸ್ ಬಿಪಿನ್ ರಾವತ್ ಅವರ ಘಟನೆಯಿಂದ ನಮ್ಮ ಮನಸ್ಸಿಗೆ ತುಂಬಾ ನೋವಾಗಿದೆ ಹಾಗಾಗಿ ನಾನು ಮತ್ತು ನನ್ನ ಪತ್ನಿ ಇನ್ನು ಮುಂದೆ ಮುಸ್ಲಿಂ ಧರ್ಮದ ಮೇಲಿನ ನಂಬಿಕೆಯನ್ನು ಬಿಟ್ಟು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಹೇಳಿದ್ದಾರೆ ಅಲ್ಲದೆ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಅವರಿಗೆ ಶಿಕ್ಷೆ ವಿಧಿಸುವಂತೆ ಮನವಿಯನ್ನು ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಅಲಿ ಅವರು ಹಂಚಿಕೊಂಡಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು ಕೆಲವರು ಉತ್ತಮ ಬೆಂಬಲ ನೀಡಿದ್ದರೆ ಮುಸ್ಲಿಂ ಸಮುದಾಯದಿಂದ ವಿರೋಧವೂ ವ್ಯಕ್ತವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಆಸ್ತಿಗಾಗಿ ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಮಲತಾಯಿ!
ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷರಾದ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಕ್ಕೆ ಪರ್ವರ್ತನೆಗೊಂಡಿದ್ದರು. ಈಗ ಅವರ ಹಾದಿಯಲ್ಲಿ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಅವರು ಸಾಗುತ್ತಿರುವುದು ಗಮನಿಸಬಹುದಾಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.