Census begin in 2025: ಮುಂದಿನ ವರ್ಷ ಜನಗಣತಿ: ಜೊತೆ ಜೊತೆಗೇ ಜಾತಿಗಣತಿ?
2026ಕ್ಕೆ ಗಣತಿ ಪೂರ್ಣ, 2028ಕ್ಕೆ ಲೋಕಸಭೆ ಕ್ಷೇತ್ರ ಪುನರ್ವಿಂಗಡಣೆ, ಈ ಬಾರಿ ಉಪ ಜಾತಿ, ಪಂಗಡಗಳ ಸಮೀಕ್ಷೆ
Team Udayavani, Oct 29, 2024, 7:40 AM IST
ಹೊಸದಿಲ್ಲಿ: ಜಾತಿಗಣತಿ ನಡೆಸುವ ಬಗ್ಗೆ ಪ್ರತಿಪಕ್ಷಗಳಿಂದ ತೀವ್ರ ಒತ್ತಡ ಹೆಚ್ಚುತ್ತಿರುವ ಮಧ್ಯೆಯೇ ಕೇಂದ್ರ ಸರ್ಕಾರವು ಮುಂದಿನ ವರ್ಷದಿಂದ(2025) ಜನಗಣತಿ ಆರಂಭಿಸಿ, 2026ರ ಹೊತ್ತಿಗೆ ಪೂರ್ಣಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.
ಜನಗಣತಿ ಪೂರ್ಣಗೊಂಡ ಬಳಿಕ 2028ರಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆ ಕೈಗೊಳ್ಳುವ ಸಾಧ್ಯತೆಗಳಿವೆ. ಜನಗಣತಿ ವೇಳೆ ಜಾತಿ ಗಣತಿಯನ್ನು ಕೈಗೊಳ್ಳಲಾಗುತ್ತಿದೆಯೇ ಎಂಬ ಬಗ್ಗ ಸರ್ಕಾರವು ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಆದರೆ, ಗಣತಿ ವೇಳೆ ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳು(ಒಬಿಸಿ), ಪರಿಶಿಷ್ಟ ಜಾತಿ(ಎಸ್‌ಸಿ), ಪರಿಶಿಷ್ಟ ಪಂಗಡಗಳ(ಎಸ್‌ಟಿ) ಉಪ ಜಾತಿ ಸಮೀಕ್ಷೆಯನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅಂದರೆ, ಜನಗಣತಿ ಜೊತೆ ಜೊತೆಗೇ ಜಾತಿ ಗಣತಿಯೂ ನಡೆಯಲಿದೆಯೇ ಎಂಬ ಅನುಮಾನವನ್ನು ಇದು ಹುಟ್ಟು ಹಾಕಿದೆ.
4 ವರ್ಷ ವಿಳಂಬ:
ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. ಅದರಂತೆ, 2021ರಲ್ಲಿ ಜನಗಣತಿಯನ್ನು ಕೈಗೊಳ್ಳಬೇಕಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಗಣತಿಯನ್ನು ಮುಂದೂಡಲಾಗಿತ್ತು. ಅಂತಿಮವಾಗಿ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ಈಗ ಜನಗಣತಿಗೆ ಮುಂದಾಗಿದೆ. 2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. 2025ರಲ್ಲಿ ಜನಗಣತಿ ಮುಗಿದ ಬಳಿಕ 2035, 2045 ಹೀಗೆ 10 ವರ್ಷಗಳ ಬಳಿಕ ಮುಂಬರುವ ಗಣತಿಗಳು ನಡೆಯಲಿವೆ.
ವಿಪಕ್ಷಗಳಿಂದ ಒತ್ತಡ
ಕೇಂದ್ರ ಸರ್ಕಾರವು ಮುಂದಿನ ವರ್ಷದಿಂದ ಜನಗಣತಿಯನ್ನು ಕೈಗೊಳ್ಳಲಿದೆ ಎಂಬ ವರದಿಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಜಾತಿಗಣತಿಗೂ ಒತ್ತಾಯಿಸುತ್ತಿವೆ. ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು ಟ್ವೀಟ್ ಮಾಡಿ, ಕೇಂದ್ರ ಸರ್ಕಾರವು ಸರ್ವ ಪಕ್ಷಗಳ ಸಭೆ ಕರೆದು ಜಾತಿ ಗಣತಿ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯ ಬಗ್ಗೆ ಚರ್ಚಿಸಬೇಕೆಂದು ಆಗ್ರಹಿಸಿದ್ದಾರೆ. ಹೊಸ ಜನಗಣತಿ ವೇಳೆ ಜಾತಿ ಗಣತಿ ಹಾಗೂ ಕ್ಷೇತ್ರಗಳ ಪುನರ್ವಿಂಗಡಣೆಯ ಬಗ್ಗೆ ಯಾವುದೇ ಸ್ಪಷ್ಟೆಗಳಿಲ್ಲ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.