ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ವಿಸ್ತರಣೆಗೆ ಕೇಂದ್ರ ಒಪ್ಪಿಗೆ
Team Udayavani, Nov 2, 2022, 10:15 PM IST
ನವದೆಹಲಿ: ರಾಜ್ಯದ ತಿಪಟೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ರಸ್ತೆಯನ್ನು ಈಗಿರುವ ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “32.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯಲಿದೆ. ತಿಪಟೂರಿನ ಕೋಡಿ ಸರ್ಕಲ್ನಿಂದ ಹುಚ್ಚಗೊಂಡನಹಳ್ಳಿ ಬೈಪಾಸ್ ತನಕ ಚತುಷ್ಪಥ ರಸ್ತೆಯನ್ನು ನಿರ್ಮಿಸಲಾಗುವುದು,’ ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ 72.39 ಕಿ.ಮೀ.ನಿಂದ 82.445 ಕಿ.ಮೀ.ವರೆಗಿನ ರಸ್ತೆಯನ್ನು ವಿಸ್ತರಿಸಲು ಕೇಂದ್ರ ಹೆದ್ದಾರಿ ಸಚಿವಾಲಯ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.