![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 29, 2021, 6:33 AM IST
ಹೊಸದಿಲ್ಲಿ: ಜಿಎಸ್‌ಟಿಯಿಂದ ಬರುವ ಆದಾಯ ನಷ್ಟವನ್ನು ರಾಜ್ಯಗಳಿಗೆ ತುಂಬಿಕೊಡಲು ಕೇಂದ್ರ ಸರಕಾರವು 1.58 ಲಕ್ಷ ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ಪಡೆಯಲು ನಿರ್ಧರಿಸಿದೆ.
ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಿಎಸ್ಟಿ ಪರಿಹಾರ ಸೆಸ್ ಕುರಿತು ಚರ್ಚಿಸಲು ವಿಶೇಷ ಸಭೆ ಕರೆಯಲಾಗುವುದು. 2022ರ ಜುಲೈನಾಚೆಗೂ ಪರಿಹಾರವನ್ನು ವಿಸ್ತರಿಸುವ ಕುರಿತು ಈ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸುಮಾರು 1.58 ಲಕ್ಷ ಕೋಟಿ ರೂ.ಗಳ ಪರಿಹಾರ ಸೆಸ್ ಕುರಿತು ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯಗಳಿಗೆ ಒಂದರ ಮೇಲೊಂದು ಸಾಲದ ರೂಪದಲ್ಲಿ ಹಣವನ್ನು ನೀಡಲಾಗುತ್ತದೆ. ಜಿಎಸ್‌ಟಿ ಪರಿಹಾರ ಸೆಸ್ ವಿಚಾರದಲ್ಲಿ ಕಳೆದ ವರ್ಷದ ನಿಯಮವನ್ನೇ ಈ ಬಾರಿಯೂ ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕ್ಷಮಾದಾನ ಯೋಜನೆ: ಸಣ್ಣ ತೆರಿಗೆದಾರರಿಗೆ ರಿಲೀಫ್ ನೀಡುವ ಸಲುವಾಗಿ “ಕ್ಷಮಾದಾನ ಯೋಜನೆ’ ಜಾರಿ ಮಾಡಲು ನಿರ್ಧರಿಸಲಾಗಿದೆ. ಅದರಂತೆ, ರಿಟರ್ನ್ ಸಲ್ಲಿಕೆ ವಿಳಂಬವಾದರೆ ಪಾವತಿಸಬೇಕಾದ ದಂಡದ ಮೊತ್ತವನ್ನು ಕಡಿತಗೊಳಿಸಲು ಉದ್ದೇಶಿಸಲಾಗಿದೆ. ಇದರಿಂದ ಶೇ.89ರಷ್ಟು ಜಿಎಸ್ಟಿ ತೆರಿಗೆದಾರರಿಗೆ ಅನುಕೂಲವಾಗಲಿದೆ. ಅಂಥವರು ಸಲ್ಲಿಸಲು ಬಾಕಿಯಿರುವ ರಿಟರ್ನ್(ಜಿಎಸ್ ಟಿಆರ್ 1 ಮತ್ತು ಜಿಎಸ್ ಟಿಆರ್ 3ಬಿ) ಅನ್ನು ಸಲ್ಲಿಸಿ, ಈ ಯೋಜನೆಯ ಲಾಭ ಪಡೆಯಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2020-21ರ ವಿತ್ತ ವರ್ಷದಲ್ಲೂ ವಾರ್ಷಿಕ ರಿಟರ್ನ್ ಸಲ್ಲಿಕೆಯನ್ನು ಸಣ್ಣ ತೆರಿಗೆದಾರರ(2 ಕೋಟಿ ರೂ.ಗಳಿಗಿಂತಲೂ ಕಡಿಮೆ ವಹಿವಾಟು ಹೊಂದಿರುವವರು) ಆಯ್ಕೆಗೆ ಬಿಡಲಾಗಿದೆ. 5 ಕೋಟಿ ಅಥವಾ ಅದಕ್ಕಿಂತಲೂ ಹೆಚ್ಚಿನ ವಹಿವಾಟು ಹೊಂದಿರುವ ತೆರಿಗೆದಾರರು 2020-21ರ ಹೊಂದಾಣಿಕೆ ವಿವರ (ರಿಕನ್ಸಿಲಿಯೇಷನ್)ವನ್ನು ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಲಸಿಕೆ ಉತ್ಪಾದನೆಗೆ ವೇಗ: ಕೇಂದ್ರ ಸರಕಾರವು ಜಗತ್ತಿನಾದ್ಯಂತದ ಲಸಿಕೆ ಉತ್ಪಾದಕ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಮುಂಬರುವ ತಿಂಗಳುಗಳಲ್ಲಿ ಉತ್ಪಾದನೆಯ ವೇಗ ಹೆಚ್ಚಲಿದೆ ಎಂದಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.