![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 15, 2021, 7:30 AM IST
ನವದೆಹಲಿ : ಕೇಂದ್ರ ತನಿಖಾ ಸಂಸ್ಥೆ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ)ದ ನಿರ್ದೇಶಕರ ಹುದ್ದೆಯ ಅವಧಿ ವಿಸ್ತರಿಸಲೂ ಇನ್ನು ಅವಕಾಶವಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಭಾನುವಾರ ಎರಡು ಪ್ರತ್ಯೇಕ ಸುಗ್ರಿವಾಜ್ಞೆಗಳನ್ನು ಹೊರಡಿಸಿದೆ. ಹೀಗಾಗಿ, ಹಾಲಿ 2 ವರ್ಷಗಳಿಂದ 5 ವರ್ಷಗಳ ವರೆಗೆ ವಿಸ್ತರಿಸುವ ಅವಕಾಶವೂ ಸಿಗಲಿದೆ. ಇದರೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ವರೆಗೆ ನಿಗದಿತ ಅಧಿಕಾರದ ಅವಧಿಯನ್ನು 2 ಸಂಸ್ಥೆಗಳ ನಿರ್ದೇಶಕರು ಪಡೆಯಲಿದ್ದಾರೆ.
ಇ.ಡಿ.ಯ ಹಾಲಿ ನಿರ್ದೇಶಕ 1984ನೇ ಸಾಲಿನ ಐಆರ್‌ಎಸ್ ಅಧಿಕಾರಿ ಎಸ್.ಕೆ.ಮಿಶ್ರಾ ನಿವೃತ್ತಿಯಾಗಲು ಮೂರು ದಿನಗಳು ಇರುವಂತೆಯೇ ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ ಹೊರಡಿಸಲಾಗಿದೆ.
ಕಳೆದ ವರ್ಷವೇ ಮಿಶ್ರಾ ಅವರ ಅಧಿಕಾರದ ಅವಧಿ ಮುಕ್ತಾಯಗೊಂಡಿದ್ದರೂ, 1 ವರ್ಷ ವಿಸ್ತರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಈ ಬಗ್ಗೆ ತೀರ್ಮಾನ ಪ್ರಕಟಿಸಿದ್ದ ಸುಪ್ರೀಂಕೋರ್ಟ್, ತೀರಾ ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಸೇವಾ ವಿಸ್ತರಣೆ ನೀಡಬಹುದು ಎಂದು ಅಭಿಪ್ರಾಯಪಟ್ಟಿತ್ತು. ಆ ಅಭಿಪ್ರಾಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರಿವಾಜ್ಞೆ ಮಹತ್ವದ್ದಾಗಿದೆ. ಸರ್ಕಾರದ ಕ್ರಮಕ್ಕೆ ಟಿಎಂಸಿ, ಸಿಪಿಎಂ ಆಕ್ಷೇಪ ಮಾಡಿವೆ.
ಇದನ್ನೂ ಓದಿ : ದೇವರನ್ನು ಪ್ರಾರ್ಥಿಸಿ ಹುಂಡಿಗೆ ಕನ್ನ ಹಾಕಿದ ಕಳ್ಳ ! ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.