Chaitra case: ಚೈತ್ರಾ ಮತ್ತು ತಂಡದ ವಿರುದ್ಧ ಶೀಘ್ರದಲ್ಲೇ ಆರೋಪಪಟ್ಟಿ ಸಲ್ಲಿಕೆ
Team Udayavani, Nov 3, 2023, 10:11 AM IST
ಬೆಂಗಳೂರು: ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್‌ಶೀಟ್ ಸಲ್ಲಿಸಲಿದ್ದಾರೆ.
ಇದನ್ನೂ ಓದಿ:Zika Virus: ರಾಜ್ಯದಲ್ಲಿ ಜಿಕಾ ವೈರಸ್ ಪತ್ತೆ… ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿಶೇಷ ನಿಗಾ
ಪ್ರಕರಣದ ಸಂಬಂಧ 68 ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, 68 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳಿಂದ ನಗದು, ಕಾರುಗಳು, ಚಿನ್ನಾಭರಣ ಸಹಿತ 5 ಕೋಟಿ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ.
ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್ ಸಹಿತ 7 ಮಂದಿಗಳ ವಿರುದ್ಧ ಮುಂದಿನ ವಾರ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ.
ದೂರುದಾರ ಗೋವಿಂದ ಬಾಬು ಪೂಜಾರಿ ಅವರಲ್ಲಿದ್ದ, ಆರೋಪಿಗಳಿಗೆ ಸಂಬಂಧಿಸಿದ ಎಲ್ಲ ಆಡಿಯೋ ಮತ್ತು ವೀಡಿಯೋಗಳನ್ನು ಪಡೆದುಕೊಳ್ಳಲಾಗಿದೆ. ಇವುಗಳ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗುತ್ತದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೈವ್ ವರದಿಯನ್ನೂ ಉಲ್ಲೇಖಿಸಲಾಗುವುದು.
ಕಳೆದ ಸೆ. 8ರಂದು ಬಂಡೇಪಾಳ್ಯ ಠಾಣೆಯಲ್ಲಿ ಗೋವಿಂದ ಬಾಬು ಪೂಜಾರಿ ಕುಂದಾಪುರದ ಚೈತ್ರಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ ಸಿಸಿಬಿಗೆ ಪ್ರಕರಣ ವರ್ಗಾವಣೆ ಮಾಡಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಎಲ್ಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.