ಚಾಮರಾಜನಗರ : 40 ಹೊಸ ಪ್ರಕರಣಗಳು ದೃಢ! ಇಬ್ಬರ ಸಾವು
Team Udayavani, Aug 25, 2020, 7:32 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 40 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಮೃತಪಟ್ಟಿದ್ದಾರೆ. 66 ಮಂದಿ ಗುಣಮುಖರಾಗಿದ್ದಾರೆ. 440 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯ ಯಳಂದೂರು ತಾಲೂಕಿನ 60 ವರ್ಷದ ಮಹಿಳೆ ಆ. 17ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ನಗರದ 55 ವರ್ಷದ ವ್ಯಕ್ತಿ ಆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ನಿಧನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮಾಹಿತಿ ತಿಳಿಸಿದೆ.
ಮಂಗಳವಾರ ಜಿಲ್ಲೆಯಲ್ಲಿ 756 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಇದರಲ್ಲಿ 40 ಪಾಸಿಟಿವ್ ಆಗಿವೆ. ಪರೀಕ್ಷಾ ಪ್ರಮಾಣದ ಹೆಚ್ಚಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ, ಗಣನೀಯ ಪ್ರಮಾಣದಲ್ಲಿ ಕಡಿಮೆ ಇರುವುದು ಸಮಾಧಾನಕರ ವಿಷಯವಾಗಿದೆ.
ಚಾಮರಾಜನಗರ ತಾಲೂಕಿನಿಂದ 22, ಕೊಳ್ಳೇಗಾಲ ತಾಲೂಕಿನಿಂದ 8, ಯಳಂದೂರು, ಗುಂಡ್ಲುಪೇಟೆಯಿಂದ ತಲಾ 4, ಹನೂರು ತಾಲೂಕಿನಿಂದ 2 ಪ್ರಕರಣಗಳು ವರದಿಯಾಗಿವೆ.
ಒಟ್ಟು 2109 ಜನರಿಗೆ ಸೋಂಕು ತಗುಲಿತ್ತು. ಇವರಲ್ಲಿ 1628 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 41 ಮಂದಿ ಮೃತಪಟ್ಟಿದ್ದಾರೆ. 17 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 199 ಮಂದಿ ಮನೆಗಳಲ್ಲಿ ಪ್ರತ್ಯೇಕವಾಗಿದ್ದಾರೆ.
ಇಂದಿನ ಪ್ರಕರಣಗಳು- 40
ಇಂದು ಗುಣಮುಖ- 66
ಒಟ್ಟು ಗುಣಮುಖ- 1628
ಇಂದಿನ ಸಾವು- 02
ಒಟ್ಟು ಸಾವು- 41
ಸಕ್ರಿಯ ಪ್ರಕರಣಗಳು- 440
ಒಟ್ಟು ಸೋಂಕಿತರು- 2109
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.