ಚಾಮರಾಜನಗರ: 72 ಮಂದಿ ಗುಣಮುಖ: 48 ಹೊಸ ಪ್ರಕರಣಗಳು
Team Udayavani, Aug 9, 2020, 7:00 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 72 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 48 ಹೊಸ ಪ್ರಕರಣಗಳು ದಾಖಲಾಗಿವೆ. 357 ಸಕ್ರಿಯ ಪ್ರಕರಣಗಳಿವೆ. ಕೋವಿಡೇತರ ಕಾರಣದಿಂದ ಇಬ್ಬರು ಮೃತಪಟ್ಟಿದ್ದಾರೆ.
ನಗರದ 55 ವರ್ಷದ ಮಹಿಳೆ ಹೃದ್ರೋಗದಿಂದ ಬಳಲುತ್ತಿದ್ದರು. ಆ.7ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಗರದ 48 ವರ್ಷದ ವ್ಯಕ್ತಿ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದು, ಆ. 6ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು ಭಾನುವಾರ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಕಾರಣದಿಂದ 14 ಮಂದಿ ಹಾಗೂ ಕೋವಿಡೇತರ ಕಾರಣದಿಂದ 7 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ 740 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 691 ಮಾದರಿಗಳ ಫಲಿತಾಂಶ ನೆಗೆಟಿವ್ ಆಗಿದೆ. ಇದುವರೆಗೆ ಜಿಲ್ಲೆಯಲ್ಲಿ 1165 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದರಲ್ಲಿ 773 ಮಂದಿ ಗುಣಮುಖರಾಗಿದ್ದಾರೆ.
ಭಾನುವಾರದ ಪ್ರಕರಣಗಳಲ್ಲಿ, ಚಾಮರಾಜನಗರ ತಾಲೂಕಿನಿಂದ 18, ಕೊಳ್ಳೇಗಾಲ ತಾಲೂಕಿನಿಂದ 16, ಗುಂಡ್ಲುಪೇಟೆ ತಾಲೂಕಿನಿಂದ 12 ಮತ್ತು ಯಳಂದೂರು ತಾಲೂಕಿನಿಂದ 02 ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಅಂಕಿ ಅಂಶ :
ಚಾಮರಾಜನಗರ 09.08.20
ಇಂದಿನ ಪ್ರಕರಣಗಳು- 48
ಇಂದು ಗುಣಮುಖ-72
ಒಟ್ಟು ಗುಣಮುಖ-773
ಇಂದಿನ ಸಾವು-0
ಒಟ್ಟು ಸಾವು-14
ಸಕ್ರಿಯ ಪ್ರಕರಣ-357
ಒಟ್ಟು ಸೋಂಕಿತರು-1151
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.