ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ


Team Udayavani, Aug 12, 2021, 6:48 PM IST

ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಚಾಮರಾಜನಗರ: ಯಳಂದೂರು ತಾಲೂಕು ಗ್ರಾಮವೊಂದರಲ್ಲಿ ದಿವ್ಯಾಂಗ ಹಾಗೂ ಬುದ್ದಿಮಾಂದ್ಯವುಳ್ಳ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ, 2 ಲಕ್ಷ ರೂ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್‌ಸ್ ನ್ಯಾಯಾಲಯ ತೀರ್ಪು ನೀಡಿದೆ.

26 ವರ್ಷದ ರವಿ ಅಲಿಯಾಸ್ ರವಿಕುಮಾರ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ 2018ರ ಆಗಸ್‌ಟ್ 15ರಂದು ಸಂಜೆ ಶಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರೋಪಿ 376(2) (ಎಲ್) 376 (ಎಬಿ) ಐಪಿಸಿ ಹಾಗೂ ಪೋಕ್ಸೊ ಕಾಯ್ದೆ 4(2) 5(ಜೆ) 1 ಹಾಗೂ 5 (ಕೆ) (ಎಂ) ಮತ್ತು 6ರಡಿಯಲ್ಲಿ ಕೃತ್ಯವೆಸಗಿರುವುದು ಸಾಬೀತಾದ ಕಾರಣ ಅಪರಾಧಿಗೆ 20 ವರ್ಷ ಶಿಕ್ಷೆ 2 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್‌ಪುರಿ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ :ಕೋವಿಡ್: ದಕ್ಷಿಣ ಕನ್ನಡದಲ್ಲಿ 475 ಸೇರಿ ರಾಜ್ಯದಲ್ಲಿಂದು 1857 ಪ್ರಕರಣ ಪತ್ತೆ  

ಅಪ್ರಾಪ್ತ ನೊಂದ ಬಾಲಕಿಯ ಪುನಶ್ಚೇತನಕ್ಕಾಗಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸುವಂತೆ ನಿರ್ದೇಶಿಸಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪರಿಹಾರವಾಗಿ 2 ಲಕ್ಷದ 50 ಸಾವಿರ ರೂ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.