Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Team Udayavani, Jan 5, 2025, 3:36 AM IST
ಚಾಮರಾಜನಗರ: ಯಳಂದೂರು ತಾಲೂಕಿನ ಅಗರ ಗ್ರಾಮದ ಲಿಂಗಾಯಿತ ಬಡಾವಣೆಯ ಮಠದ ಬೀದಿಯಲ್ಲಿ ವಾಸವಾಗಿರುವ ವೀರಣ್ಣ, ಗೌರಮ್ಮ ಹಾಗೂ ಇವರ ಮಗ ವಿ. ಸುರೇಶ ಅವರ ಕುಟುಂಬಕ್ಕೆ ಹಾಕಿರುವ ಬಹಿಷ್ಕಾರಕ್ಕೆ ಸಂಬಂಧಿಸಿ ಜ. 4ರಂದು “ಉದಯವಾಣಿ’ಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಶನಿವಾರ ಗ್ರಾಮಕ್ಕೆ ದೌಡಾಯಿಸಿ ಈ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಈ ಕುಟುಂಬ ಪರಿಶಿಷ್ಟ ಪಂಗಡದ ನಾಯಕ ಜನಾಂಗದವರಿಗೆ ಮನೆ ಬಾಡಿಗೆಗೆ ನೀಡಿದ್ದು, ಅಲ್ಲಿಂದಾಚೆ ಇವರ ಕುಟುಂಬವನ್ನು ಲಿಂಗಾಯಿತ ಜನಾಂಗದವರು ಸೇರುವ ಧಾರ್ಮಿಕ ಸಭೆ ಸಮಾರಂಭಗಳು ಹಾಗೂ ದೇಗುಲಕ್ಕೆ ಬಾರದಂತೆ ತಡೆಯೊಡ್ಡುತ್ತಿದ್ದಾರೆ ಎಂದು ಈ ಕುಟುಂಬದ ಸದಸ್ಯ ವಿ. ಸುರೇಶ್ ಆರೋಪಿಸಿದ್ದರು.
ಈ ಬಗ್ಗೆ ಉದಯವಾಣಿಯಲ್ಲಿ “ಸವರ್ಣೀಯರ ಕುಟುಂಬಕ್ಕೆ ಸವರ್ಣೀಯರಿಂದ ಬಹಿಷ್ಕಾರ!’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಗ್ರಾಮಕ್ಕೆ ದೌಡಾಯಿಸಿದ ತಹಶೀಲ್ದಾರ್ ಜಯಪ್ರಕಾಶ್, ಪಿಎಸ್‌ಐ ಕರಿಬಸಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಗ್ರಾಮಸ್ಥರ ಸಭೆ ನಡೆಸಿದರು.
ಯಾವುದೋ ಹಳೆಯ ದ್ವೇಷದಿಂದ ಹೀಗಾಗಿದೆ. ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.